ಹಣದ ಆಮಿಷ ಕುರಿತ ಶ್ರೀಮಂತ ಪಾಟೀಲ್ ಹೇಳಿಕೆ: ತನಿಖೆಗೆ ಕಾಂಗ್ರೆಸ್ ಒತ್ತಾಯ

ಮಾಜಿ ಸಚಿವ, ಶಾಸಕ ಶ್ರೀಮಂತ ಪಾಟೀಲ ಅವರ ಹೇಳಿಕೆ ಆಧರಿಸಿ ಎಸಿಬಿ ಅಧಿಕಾರಿಗಳು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಯಾರು ಹಣದ ಆಮಿಷ ಒಡ್ಡಿದ್ದರು ಎಂದು ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವ ಡಿ.ಕೆ.ಶಿವಕುಮಾರ್
ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವ ಡಿ.ಕೆ.ಶಿವಕುಮಾರ್

ಬೆಳಗಾವಿ: ಮಾಜಿ ಸಚಿವ, ಶಾಸಕ ಶ್ರೀಮಂತ ಪಾಟೀಲ ಅವರ ಹೇಳಿಕೆ ಆಧರಿಸಿ ಎಸಿಬಿ ಅಧಿಕಾರಿಗಳು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಯಾರು ಹಣದ ಆಮಿಷ ಒಡ್ಡಿದ್ದರು ಎಂದು ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ. 

ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು, ಕಾಂಗ್ರೆಸ್‌ನಿಂದ ಬರಲು ಬಿಜೆಪಿಯವರು ಹಣದ ಆಫರ್ ನೀಡಿದ್ದರು’ ಎಂದು ಬಿಜೆಪಿ ಶಾಸಕ ಶ್ರೀಮಂತ ಪಾಟೀಲ ಸತ್ಯವಾದ ಮಾತನ್ನೇ ಹೇಳಿದ್ದಾರೆ. ಹಣದ ಆಮಿಷ ಒಡ್ಡಿದವರು ಯಾರು? ಎನ್ನುವುದನ್ನು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. 

ಈ ಹೇಳಿಕೆಗಾಗಿ ಶ್ರೀಮಂತಪಾಟೀಲ ಅವರನ್ನು ಅಭಿನಂದಿಸುತ್ತೇನೆ. ಹಾಲಿ ಶಾಸಕ ಹಾಗೂ ಮಾಜಿ ಸಚಿವರಾಗಿರುವ ಅವರ ಮಾತನ್ನು ಗಂಭೀರವಾಗಿ ಪರಿಗಣಿಸಬೇಕು. ಶುದ್ಧ ಆಡಳಿತ ನಡೆಸುತ್ತಿದ್ದೇವೆ ಎಂದು ಹೇಳುವ ಬಿಜೆಪಿ ನಾಯಕರು ಈಗ ಏನು ಹೇಳುತ್ತಾರೆ? ಶ್ರೀಮಂತ ಪಾಟೀಲ್ ಅವರು ಮಾಜಿ ಸಚಿವರು. ಅವರ ಹೇಳಿಕೆಯನ್ನು ಆಧರಿಸಿ ಬೆಳಗಾವಿ ಅಥವಾ ಬೆಂಗಳೂರಿನ ಎಸಿಬಿ ಅಧಿಕಾರಿಗಳು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕು. ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಆಡಳಿತ ಸರಿ ಇಲ್ಲ ಎನ್ನುವುದಕ್ಕೆ ಕೆಲವೆಡೆ ಮುಖ್ಯಮಂತ್ರಿಗಳನ್ನು ಬದಲಾವಣೆ ಮಾಡುತ್ತಿರುವುದೇ ಸಾಕ್ಷಿಯಾಗಿದೆ ಎಂದು ಆರೋಪಿಸಿದ್ದಾರೆ.

ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಅವರು, ಪೆಟ್ರೋಲ್, ಡಿಸೇಲ್, ಗ್ಯಾಸ್ ಗಗನಕ್ಕೆ ಏರಿಸುತ್ತಿದೆ. ನಾಳೆ ನಾನು ಮತ್ತು ಸಿಎಲ್‍ಪಿ ನಾಯಕ ಸಿದ್ದರಾಮಯ್ಯ ಅವರು ವಿಧಾನಸೌಧಕ್ಕೆ ಎತ್ತಿನ ಗಾಡಿಯಲ್ಲಿ ಹೋಗುತ್ತೇವೆ. ಜನರಿಗೆ ಸಮಸ್ಯೆ ಆಗದಂತೆ ಪ್ರತಿಭಟನೆ ಮಾಡುತ್ತೇವೆ ಎಂದು ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ. ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಆಕಾಶಕ್ಕೆ ಏರುತ್ತಿದೆ. ಹೀಗಾಗಿ ನಾಳೆ ಶಾಸಕಾಂಗ ಪಕ್ಷದ ನಾಯಕರು ಮತ್ತು ನಾನು ಎತ್ತಿನ ಗಾಡಿಯಲ್ಲಿ ಅಧಿವೇಶನಕ್ಕೆ ಹೋಗುತ್ತೇವೆ. ಈ ಬಗ್ಗೆ ಸದನದಲ್ಲಿ ಧ್ವನಿ ಎತ್ತುತ್ತೇವೆಂದು ಹೇಳಿದ್ದಾರೆ. 

ಎಲೆಕ್ಷನ್ ಕಮಿಷನರ್ ನಮ್ಮ ಅಭ್ಯರ್ಥಿಗೆ ಒಂದು ವೋಟರ್ ಲಿಸ್ಟ್ ಕೊಟ್ಟಿದ್ದಾರೆ. ಬಿಜೆಪಿಯವರಿಗೆ ಬೇರೆಯ ವೋಟರ್ ಲಿಸ್ಟ್ ಕೊಟ್ಟಿದ್ದಾರೆ. ಅಲ್ಲದೇ ಎಂಇಎಸ್ ಅವರಿಗೂ ಅನ್ಯಾಯ ಆಗಿದೆ. ಅವರಿಗೂ ಬೇರೆ ಮತದಾರರ ಪಟ್ಟಿ ನೀಡಿದ್ದಾರೆ. ಇನ್ನು ಸೋಲನ್ನು ಎಐಸಿಸಿ ಗಂಭೀರವಾಗಿ ಪರಿಗಣಿಸಿದ್ದು, ಎಐಸಿಸಿಯಿಂದ ಸತ್ಯಶೋಧನೆಗಾಗಿ ಒಂದು ವಿಶೇಷ ತಂಡ ಬರಲಿದೆ ಎಂದು ತಿಳಿಸಿದ್ದಾರೆ. 

ಬಳಿಕ ಬೆಳಗಾವಿ ಪಾಲಿಕೆ ಚುನಾವಣೆಯ ಸೋಲು ಒಪ್ಪಿಕೊಂಡ ಡಿ. ಕೆ. ಶಿವಕುಮಾರ್,ಸೋಲಿನ ಬಗ್ಗೆ ಎಐಸಿಸಿ ಸತ್ಯ ಸಂಶೋಧನಾ ಸಮಿತಿಯಿಂದ ಆಂತರಿಕ ತನಿಖೆ ನಡೆಯಲಿದೆ. ಈ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸುಮಾರು 1.50 ಲಕ್ಷ ಮತಗಳು ಬಂದಿವೆ. ಆದರೂ ಅವರು ಮೊದಲ ಸ್ಥಾನ ಬಂದಿದ್ದಾರೆ. ಮುಂದಿನ ಬಾರಿ ಎಲ್ಲ ವಾರ್ಡುಗಳಿಗೆ ಅಭ್ಯರ್ಥಿಗಳನ್ನು ಹಾಕುತ್ತೇವೆಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com