ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುತ್ತಿದ್ದೇನೆ: ಕೋಲಾರ ಶಾಸಕ ಶ್ರೀನಿವಾಸ್ ಗೌಡ 

ಜೆಡಿಎಸ್ ನ ಮತ್ತೊಬ್ಬ ಶಾಸಕ ಹೊರಬಂದಿದ್ದಾರೆ. ಕೋಲಾರ ಜೆಡಿಎಸ್ ಶಾಸಕ ಶ್ರೀನಿವಾಸ ಗೌಡ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ.
ಶಾಸಕ ಶ್ರೀನಿವಾಸ್ ಗೌಡ
ಶಾಸಕ ಶ್ರೀನಿವಾಸ್ ಗೌಡ

ಕೋಲಾರ: ಜೆಡಿಎಸ್ ನ ಮತ್ತೊಬ್ಬ ಶಾಸಕ ಹೊರಬಂದಿದ್ದಾರೆ. ಕೋಲಾರ ಜೆಡಿಎಸ್ ಶಾಸಕ ಶ್ರೀನಿವಾಸ ಗೌಡ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ.

ಈ ಹಿಂದೆ ಕಾಂಗ್ರೆಸ್ ನಲ್ಲಿಯೇ ಇದ್ದ ಶ್ರೀನಿವಾಸ್ ಗೌಡ ಇದೀಗ ಮತ್ತೆ ಮಾತೃಪಕ್ಷಕ್ಕೆ ಹೋಗಲು ಮುಂದಾಗಿದ್ದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ ಎಂದು ತಿಳಿಸಿದ್ದಾರೆ.

ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದ ಶ್ರೀನಿವಾಸ ಗೌಡ ದೇವೇಗೌಡರ ಕೆಂಗಣ್ಣಿಗೆ ಗುರಿಯಾಗಿದ್ದಾರೆ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲು ತೀರ್ಮಾನಿಸಲಾಗಿದೆ ಎನ್ನಲಾಗಿತ್ತು. ಇದೀಗ ಕಾಂಗ್ರೆಸ್ ಸೇರುತ್ತೇನೆ ಎಂದು ಅವರೇ ಪ್ರಕಟಿಸಿದ್ದಾರೆ.

ಈ ಹಿಂದೆ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದ ಶ್ರೀನಿವಾಸ್ ಗೌಡ 2018ರ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಲ್ಲಿ 82 ಸಾವಿರದ 788 ಮತಗಳನ್ನು ಪಡೆದು ಜಯಗಳಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com