ಬಿಜೆಪಿ ಸಚಿವ, ಇತರೆ ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ: ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್
ಬಿಜೆಪಿ ಸಚಿವರು ಹಾಗೂ ಇತರೆ ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಭಾನುವಾರ ಹೇಳಿದ್ದಾರೆ.
Published: 20th September 2021 07:19 AM | Last Updated: 20th September 2021 07:19 AM | A+A A-

ಡಿಕೆ.ಶಿವಕುಮಾರ್
ಬೆಂಗಳೂರು: ಬಿಜೆಪಿ ಸಚಿವರು ಹಾಗೂ ಇತರೆ ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಭಾನುವಾರ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ 20 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆಂಬ ಬಿಜೆಪಿ ನಾಯಕರ ಹೇಳಿಕೆಗೆ ತಿರುಗೇಟು ನೀಡಿರುವ ಡಿಕೆ.ಶಿವಕುಮಾರ್ ಅವರು, ಬಿಜೆಪಿ ಸಚಿವರೊಬ್ಬರು ನಮ್ಮ ಸಂಪರ್ಕದಲ್ಲಿದ್ದಾರೆ, ವಿಎಸ್ ಉಗ್ರಪ್ಪ ಜೊತೆಗೆ ಸಂಪರ್ಕದಲ್ಲಿದ್ದಾರೆಂದು ಹೇಳಿದ್ದಾರೆ.
ಈ ಬಗ್ಗೆ ಉಗ್ರಪ್ಪ ಅವರ ಪ್ರತಿಕ್ರಿಯೆ ಪಡೆದುಕೊಳ್ಳಲು ನಾವು ಪ್ರಯತ್ನ ನಡೆಸಿದ್ದು, ಆ ಸಚಿವರು ಯಾರು ಎಂಬ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದ್ದಾರೆ.
ಈ ಸಮಯದಲ್ಲಿ ನಾನು ಯಾವುದೇ ಮಾಹಿತಿಯನ್ನು ಬಹಿರಂಗಪಡಿಸುವುದಿಲ್ಲ. ಬಿಜೆಪಿಯೊಂದಿಗೆ ಅತೃಪ್ತಿ ಹೊಂದಿದ ಮತ್ತು ಕಾಂಗ್ರೆಸ್‌ನೊಂದಿಗೆ ಸಂಪರ್ಕದಲ್ಲಿರುವ ಅನೇಕ ಶಾಸಕರಿದ್ದಾರೆಂದು ಉಗ್ರಪ್ಪ ಅವರು ತಿಳಿಸಿದ್ದಾರೆ.
ಕಾಂಗ್ರೆಸ್ ಹಾಗೂ ಜನತಾ ದಳ ಪಕ್ಷವನ್ನು ತೊರೆದು ಬಿಜೆಪಿ ಸೇರಿದ್ದ ಸಾಕಷ್ಟು ನಾಯಕರು ಅಸಮಾಧಾನಗೊಂಡಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಚರ್ಚೆಗಳೂ ನಡೆಯುತ್ತಿವೆ ಎಂದಿದ್ದಾರೆ.
ಇಬ್ಬರು ಮಾಜಿ ಸ್ವತಂತ್ರ ಶಾಸಕರಾದ ಎಚ್ ನಾಗೇಶ್ ಮತ್ತು ಆರ್ ಶಂಕರ್ ಕೂಡ ಅವರನ್ನು ಸಚಿವ ಸ್ಥಾನದಿಂದ ಕೈಬಿಟ್ಟಿರುವುದಕ್ಕೆ ಅಸಮಾಧಾನಗೊಂಡಿದ್ದಾರೆಂದು ಮೂಲಗಳು ತಿಳಿಸಿವೆ