ರೈತರ ಪ್ರತಿಭಟನೆ ಕಾಂಗ್ರೆಸ್ ಪ್ರಾಯೋಜಕತ್ವ: ಸಿಎಂ ಬಸವರಾಜ ಬೊಮ್ಮಾಯಿ ಆರೋಪ 

ಕೇಂದ್ರ ಸರ್ಕಾರದ ಮೂರು ಕೃಷಿ ಮಸೂದೆಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು 'ಪ್ರಾಯೋಜಿತ ಪ್ರತಿಭಟನೆ' ಎಂದು ವ್ಯಾಖ್ಯಾನಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಇದರ ಪ್ರಾಯೋಜಕತ್ವವಾಗಿದೆ ಎಂದು ಆರೋಪಿಸಿದ್ದಾರೆ. 
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕೇಂದ್ರ ಸರ್ಕಾರದ ಮೂರು ಕೃಷಿ ಮಸೂದೆಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು 'ಪ್ರಾಯೋಜಿತ ಪ್ರತಿಭಟನೆ' ಎಂದು ವ್ಯಾಖ್ಯಾನಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಇದರ ಪ್ರಾಯೋಜಕತ್ವವಾಗಿದೆ ಎಂದು ಆರೋಪಿಸಿದ್ದಾರೆ. 

ನಿನ್ನೆ ವಿಧಾನಸಭೆ ಕಲಾಪ ವೇಳೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರ ಪ್ರಶ್ನೆಗೆ ಉತ್ತರಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ ಮಾಡಲು ಕೆಲವು ವಿದೇಶಿ ಏಜೆಂಟ್ ಗಳಂತೆ ಕೆಲಸ ಮಾಡಿ ಪ್ರತಿಭಟನೆಯನ್ನು ಪ್ರಚೋದಿಸುತ್ತಿವೆ ಎಂದು ಆರೋಪಿಸಿದರು.

ಕಳೆದ ವಾರ ವಿಧಾನಸಭೆ ಕಲಾಪದಲ್ಲಿ ಸಿದ್ದರಾಮಯ್ಯನವರು ಬೆಲೆ ಏರಿಕೆ ಬಗ್ಗೆ ಪ್ರಸ್ತಾಪಿಸಿದ್ದರು. ಅದಕ್ಕೆ ನಿನ್ನೆ ಉತ್ತರಿಸಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಸಂಗ್ರಹವಾಗುವ ತೆರಿಗೆಯಲ್ಲಿ ಶೇಕಡಾ 40ರಷ್ಟು ಆದಾಯ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದಿಂದ ಬರುತ್ತದೆ. ಇದರಿಂದ ನಾವು ಹೆಚ್ಚೆಚ್ಚು ಗೋಧಿ, ಭತ್ತ, ಅಕ್ಕಿ ಮತ್ತು ಹೆಸರು ಕಾಳುಗಳನ್ನು ಸಂಗ್ರಹಿಸಬಹುದು, ನಾವು ರೈತರಿಗೆ ಸಹಾಯ ಮಾಡುತ್ತಿದ್ದೇವೆ ಎಂದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕರು, ಹರ್ಯಾಣ ಮತ್ತು ಪಂಜಾಬ್ ಭಾಗದ ರೈತರು ಕಳೆದ ಒಂದು ವರ್ಷದಿಂದ ದೆಹಲಿಯ ಗಡಿಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆಗ ಬೊಮ್ಮಾಯಿಯವರು ಇದು ಪ್ರಾಯೋಜಕತ್ವ ಹೋರಾಟ, ದೇಶದ ಬೇರೆ ಯಾವುದೇ ಭಾಗದಲ್ಲಿ ರೈತರು ಪ್ರತಿಭಟನೆ ಮಾಡುತ್ತಿಲ್ಲ. ದೇಶದ ಎಲ್ಲಾ ಭಾಗದ ರೈತರು ಸರ್ಕಾರದ ಮೂರು ಕೃಷಿ ತಿದ್ದುಪಡಿ ಮಸೂದೆ ಬಗ್ಗೆ ಖುಷಿಯಾಗಿದ್ದಾರೆ. ಇದು ಕಾಂಗ್ರೆಸ್ ಪ್ರಾಯೋಜಕತ್ವ ಹೋರಾಟ ಎಂದು ಆರೋಪಿಸಿದರು. ಸಿಎಂ ಅವರ ಮಾತು ಕಾಂಗ್ರೆಸ್ ನಾಯಕರನ್ನು ಕೆರಳಿಸಿತು.

ಆಗ ಸಿಎಂ ಅವರು ನಾನು ಹಲವು ಬಾರಿ ರೈತರ ಪ್ರತಿಭಟನೆಗಳಲ್ಲಿ ಭಾಗಿಯಾಗಿದ್ದೆ. ಅವರಿಗೆ ಯಾವ ರೀತಿ ಭಾವನೆಗಳಿರುತ್ತವೆ ಎಂಬುದು ನನಗೆ ಗೊತ್ತಿದೆ. ಹರ್ಯಾಣ ಮತ್ತು ಪಂಜಾಬ್ ಭಾಗದ ರೈತರು ಕನಿಷ್ಠ ಬೆಂಬಲ ಬೆಲೆ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ದೂಷಿಸಿದರು.

ಮಾರುಕಟ್ಟೆಯ ಮೇಲೆ ನಿಯಂತ್ರಣ ಸಾಧಿಸುತ್ತಿರುವ ರೈತರು ದೇಶವನ್ನು ಹಾದಿತಪ್ಪಿಸುತ್ತಿದ್ದಾರೆ. ತುರ್ತು ಪರಿಸ್ಥಿತಿಗೆ ಮುನ್ನ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು, ಪ್ರತಿಭಟನೆಗಳ ಹಿಂದೆ ವಿದೇಶಿ ಕೈವಾಡವಿದೆ ಎಂದು ಆರೋಪಿಸಿದ್ದರು. ಆದರೆ ಇಂದು ವಿದೇಶಿ ಕೈಗಳಲ್ಲ, ಈ ಎಲ್ಲಾ ಪ್ರತಿಭಟನಾಕಾರರು ವಿದೇಶಿ ಏಜೆಂಟ್ ಗಳಾಗಿ ಬದಲಾಗಿದ್ದಾರೆ ಎಂದರು.

ರೈತರ ಒಕ್ಕೂಟ ಬಂದ್ ಗೆ ಬೆಂಬಲ: ಇದೇ 27ರಂದು ಸಂಯುಕ್ತ ಕಿಸಾನ್ ಹೋರಾಟ ಮೋರ್ಚ  ಕರೆ ನೀಡಿರುವ ಭಾರತ ಬಂದ್ ಗೆ ರೈತ ಸಂಘಟನೆಗಳು ರಾಜ್ಯಾದ್ಯಂತ ಬೆಂಬಲ ಸೂಚಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com