ಜೆಡಿಎಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಪ್ರಧಾನಿ ದೇವೇಗೌಡ ಗುಡುಗು
ರಾಜ್ಯದ ಜನರ ಉಸಿರಿನಲ್ಲಿ ಉಸಿರಾಗಿರುವ ಜೆಡಿಎಸ್ ಪಕ್ಷವನ್ನು ಮುಗಿಸಲು ಸಿದ್ದರಾಮಯ್ಯ ಅವರಿಂದ ಮಾತ್ರವಲ್ಲ ಯಾರಿಂದಲೂ ಸಾಧ್ಯವಿಲ್ಲ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು...
Published: 27th September 2021 04:05 PM | Last Updated: 27th September 2021 04:05 PM | A+A A-

ಎಚ್ ಡಿ ದೇವೇಗೌಡ
ರಾಮನಗರ: ರಾಜ್ಯದ ಜನರ ಉಸಿರಿನಲ್ಲಿ ಉಸಿರಾಗಿರುವ ಜೆಡಿಎಸ್ ಪಕ್ಷವನ್ನು ಮುಗಿಸಲು ಸಿದ್ದರಾಮಯ್ಯ ಅವರಿಂದ ಮಾತ್ರವಲ್ಲ ಯಾರಿಂದಲೂ ಸಾಧ್ಯವಿಲ್ಲ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಸೋಮವಾರ ಹೇಳಿದ್ದಾರೆ.
2023ಕ್ಕೆ ಜಾತ್ಯತೀತ ಜನತಾದಳದ ಹಾಗೂ ಚ್.ಡಿ.ಕುಮಾರಸ್ವಾಮಿ ನಾಯಕತ್ವದ ಜನತಾ ಸರಕಾರ ರಚನೆ ಮಾಡುವ ಗುರಿಯೊಂದಿಗೆ ಬಿಡದಿ ಫಾರ್ಮ್ ಹೌಸ್ ನಲ್ಲಿ ಆರಂಭವಾಗಿರುವ 4 ದಿನಗಳ 'ಜನತಾ ಪರ್ವ 1.O'ಕಾರ್ಯಗಾರವನ್ನು ಜೆಡಿಎಸ್ ವರಿಷ್ಠ ದೇವೇಗೌಡ ಅವರು ಉದ್ಘಾಟಿಸಿದರು.
ಇದನ್ನು ಓದಿ: ಅಲ್ಪ ಸಂಖ್ಯಾತರಿಗೆ ರಾಜಕೀಯ ಪ್ರಾತಿನಿದ್ಯ: ಸಿಎಂ ಇಬ್ರಾಹಿಂ ಸೇರ್ಪಡೆಯಿಂದ ಮರುಕಳಿಸುವುದೇ ಜೆಡಿಎಸ್ ಗತವೈಭವ?
ಅಪಪ್ರಚಾರ ಮಾಡುವುದಕ್ಕೂ ಒಂದು ಮಿತಿ ಬೇಡವೇ. ತಾವು ನಾಯಕರಾಗಿ ಬಂದಿದ್ದು ಎಲ್ಲಿಂದ, ಬೆಳೆದದ್ದು ಎಲ್ಲಿ? ಎಂಬುದನ್ನು ಅರಿತು ಮಾತನಾಡಬೇಕು. ಅವರ ಜತೆ ಇವರ ಜತೆ ಹೋಗುವ ಪಕ್ಷ ಎಂದು ದೂರುವ ಮುನ್ನ ಸಮ್ಮಿಶ್ರ ಸರಕಾರ ರಚನೆ ಮಾಡುವುದಕ್ಕೆ ಯಾರು ನಮ್ಮ ಮನೆ ಬಾಗಿಲಿಗೆ ಬಂದರು ಎನ್ನುವುದು “ನನಗೆ, ನಿಮಗೆ ಮಾತ್ರವಲ್ಲ ಇಡೀ ರಾಜ್ಯಕ್ಕೆ-ದೇಶಕ್ಕೆ ಗೊತ್ತಿದೆ” ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಪ್ರಧಾನಿ ವಾಗ್ದಾಳಿ ನಡೆಸಿದರು.
“ಅಪಮಾನಗಳನ್ನು ಸಹಿಸಿದ್ದೇನೆ, ಎದುರಿಸಿದ್ದೇನೆ. ಅಪಾರ ಕಾರ್ಯಕರ್ತರ ಜತೆ ಅಂತ ಎಲ್ಲ ನೋವುಗಳನ್ನು ನುಂಗಿದ್ದೇನೆ” ಎಂದ ದೇವೇಗೌಡರು, “ನಮ್ಮನ್ನು ನೋಡಿ ಅಪಹಾಸ್ಯ ಮಾಡುವವರಿಗೆ 2023 ರಲ್ಲೀ ಉತ್ತರ ನೀಡೋಣ” ಎಂದರು.