ಉಪ ಚುನಾವಣಾ ಕ್ಷೇತ್ರಗಳಲ್ಲಿ ಬಿಜೆಪಿ ವೀಕ್ಷಕರಿಂದ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿಗಳ ಆಯ್ಕೆ: ಸಿಎಂ ಬೊಮ್ಮಾಯಿ

ಉಪಚುನಾವಣೆ ಘೋಷಣೆಯಾಗಿರುವ  ಕ್ಷೇತ್ರಗಳಿಗೆ ಪಕ್ಷದಿಂದ ಚುನಾವಣಾ ವೀಕ್ಷಕರನ್ನು ಕಳುಹಿಸಿಕೊಡಲಾಗುತ್ತಿದ್ದು, ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಬಗ್ಗೆ ಚರ್ಚೆಯಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಉಪಚುನಾವಣೆ ಘೋಷಣೆಯಾಗಿರುವ  ಕ್ಷೇತ್ರಗಳಿಗೆ ಪಕ್ಷದಿಂದ ಚುನಾವಣಾ ವೀಕ್ಷಕರನ್ನು ಕಳುಹಿಸಿಕೊಡಲಾಗುತ್ತಿದ್ದು, ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಬಗ್ಗೆ ಚರ್ಚೆಯಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಆಯೋಗ ಹಾನಗಲ್ ಹಾಗೂ ಸಿಂಧಗಿ ಮತಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಎರಡು ಕ್ಷೇತ್ರಗಳಿಗೆ ವೀಕ್ಷಕರನ್ನು ಕಳುಹಿಸಿಕೊಡುತ್ತೇವೆ. ಸ್ಥಳೀಯರಿಂದ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿಗಳನ್ನು ಅಖೈರುಗೊಳಿಸಲಾಗುವುದು ಎಂದರು.

ಎರಡೂ ಕ್ಷೇತ್ರಗಳಲ್ಲಿ ನಡೆಯಲಿರುವ ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸುವ ವಿಶ್ವಾಸವನ್ನು ಮುಖ್ಯಮಂತ್ರಿ ವ್ಯಕ್ತಪಡಿಸಿದರು. ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳ ಉಪ ಅಕ್ಟೋಬರ್ 30ರಂದು ಉಪ ಚುನಾವಣೆ  ಮತ್ತು ನವೆಂಬರ್ 2ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com