ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ದೆಹಲಿಗೆ ದೌಡು: ಕಾಂಗ್ರೆಸ್ ನಲ್ಲಿ ಮಹತ್ವದ ಬದಲಾವಣೆ!

ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೂ 18 ತಿಂಗಳು ಮಾತ್ರ ಬಾಕಿಯಿದೆ. ಹೀಗಾಗಿ ರಾಜ್ಯ ಕಾಂಗ್ರೆಸ್ ಘಟಕ ಹೊಸ ಪದಾಧಿಕಾರಿಗಳೊಂದಿಗೆ ಚುನಾವಣೆ ಎದುರಿಸಲು ಸಜ್ಜಾಗುತ್ತಿದೆ.
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೂ 18 ತಿಂಗಳು ಮಾತ್ರ ಬಾಕಿಯಿದೆ. ಹೀಗಾಗಿ ರಾಜ್ಯ ಕಾಂಗ್ರೆಸ್ ಘಟಕ ಹೊಸ ಪದಾಧಿಕಾರಿಗಳೊಂದಿಗೆ ಚುನಾವಣೆ ಎದುರಿಸಲು ಸಜ್ಜಾಗುತ್ತಿದೆ.

12 ವರ್ಷಗಳ ನಂತರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪುನರ್ ನವೀಕರಣಗೊಳ್ಳಲಿದೆ.  ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ. ಹೊಸ ಪದಾಧಿಕಾರಿಗಳ ಬಗ್ಗೆ ಕೇಂದ್ರ ನಾಯಕರ ಜೊತೆ ಚರ್ಚಿಸಲು ದೆಹಲಿಗೆ ಬಂದಿದ್ದೇನೆ. ಇದರ್ಥ ಕಾಂಗ್ರೆಸ್ ನಲ್ಲಿ ಪ್ರಧಾನ ಬೆಳವಣಿಗೆಯಾಗಲಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ಜಿಲ್ಲಾ ಮತ್ತು ಬ್ಲಾಕ್ ಮಟ್ಟದಲ್ಲಿಯೂ ಬದಲಾವಣೆಗಳಾಗಲಿದೆ,  ಪದಾಧಿಕಾರಿಗಳ ಬದಲಾವಣೆ ಮಾಡಬೇಕೆಂದು ಶಿವಕುಮಾರ್ ಅವರ ಅಭಿಲಾಷೆಯಾಗಿದೆ. ತಮ್ಮ ತಂಡದ ಜೊತೆ   ಹಲವು ಬಾರಿ ಈಗಾಗಲೇ ಶಿವಕುಮಾರ್ ಚರ್ಚೆ ನಡೆಸಿದ್ದಾರೆ. 

12 ವರ್ಷಗಳಿಂದಲೂ ಕೆಪಿಸಿಸಿ ಪುನಾರಚನೆಯಾಗಿಲ್ಲ,  ಜಿ ಪರಮೇಶ್ವರ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ವೇಳೆ ನೇಮಕಾತಿ ನಡೆದಿತ್ತು, ಅದಾದ ನಂತರ ಪುನಾರಚನೆ ಆಗಿಯೇ ಇಲ್ಲ. ಪರಮೇಶ್ವರ್ ನಂತರ ದಿನೇಶ್ ಗುಂಡೂರಾವ್ ಮೂರು ವರ್ಷ ಕೆಪಿಸಿಸಿ ಅಧ್ಯಕ್ಷರಾಗಿದ್ದಾಗಲೂ ಪುನಾರಚನೆ ನಡೆಯಲಿಲ್ಲ, ಸದ್ಯ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ 18 ತಿಂಗಳು ಕಳೆದಿದೆ.

ಕೆಲವು ತಿಂಗಳ ಹಿಂದೆ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಪಟ್ಟಿಯನ್ನು ತಯಾರಿಸಿ ಪಕ್ಷದ ಕೇಂದ್ರ ನಾಯಕತ್ವಕ್ಕೆ ಸಲ್ಲಿಸಿದ್ದರು. ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಮತ್ತು ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇಬ್ಬರನ್ನು ಕರೆಸಿ ಈ ವಿಷಯದ ಬಗ್ಗೆ ಚರ್ಚಿಸಿದ್ದರು.

ಬೇರೆ ಪಕ್ಷದಿಂದ ಕಾಂಗ್ರೆಸ್ ಸೇರಲು ಬಯಸಿರುವ ನಾಯಕರುಗಳ ಪಟ್ಟಿಯನ್ನು ಶಿವಕುಮಾರ್ ದೆಹಲಿಗೆ ತೆಗೆದುಕೊಂಡು ಹೋಗಿದ್ದು ಹೈಕಮಾಂಡ್ ಅನುಮತಿ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com