ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಸ್ಥಾನ ಮೀಸಲು: ಎಚ್‌ಡಿಕೆ ಭರವಸೆ
2023ರಲ್ಲಿ ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 30-35 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲು ಇಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಘೋಷಿಸಿದ್ದಾರೆ.
Published: 29th September 2021 01:47 PM | Last Updated: 29th September 2021 01:47 PM | A+A A-

ಎಚ್.ಡಿ ಕುಮಾರಸ್ವಾಮಿ
ರಾಮನಗರ: 2023ರಲ್ಲಿ ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 30-35 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲು ಇಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಘೋಷಿಸಿದ್ದಾರೆ.
ಬಿಡದಿಯಲ್ಲಿ ನಡೆಯುತ್ತಿರುವ ಜೆಡಿಎಸ್ ಮಹಿಳಾ ಘಟಕದ ಕಾರ್ಯಾಗಾರದಲ್ಲಿ ಮಾತನಾಡಿದ ಕುಮಾರಸ್ವಾಮಿ, ಪಕ್ಷವು ಮಹಿಳಾ ಅಭ್ಯರ್ಥಿಗಳಿಗೆ ಮನ್ನಣೆ ನೀಡುವುದಾಗಿ ಪ್ರಕಟಿಸಿದ್ದಾರೆ. ಈಗಾಗಲೇ ಮೊದಲ ಹಂತದಲ್ಲಿ 7-8 ಜನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದೇವೆ. ಮಹಿಳೆಯರಿಗೆ ಹೆಚ್ಚಿನ ಶಕ್ತಿ ತುಂಬಲು ಈ ಬಾರಿ 30-35 ಸೀಟುಗಳನ್ನು ಮಹಿಳೆಯರಿಗೆ ಕೊಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಹಾನಗಲ್ ಉಪ ಚುನಾವಣೆ: ಜೆಡಿಎಸ್ ನಿಂದ ನಯಾಜ್ ಸ್ಪರ್ಧೆ
ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ಹೋಲಿಕೆ ಮಾಡಿದರೆ ನಮ್ಮ ಮಹಿಳಾ ಘಟಕ ಸ್ವಲ್ಪ ಹಿಂದೆ ಉಳಿದಿದೆ. ಇದನ್ನು ಸರಿಪಡಿಸುವ ಕೆಲಸ ಮಾಡುತ್ತೇವೆ. ಮಹಿಳಾ ಘಟಕಕ್ಕೆ ಹೆಚ್ಚಿನ ಶಕ್ತಿ ತುಂಬುವ ಕೆಲಸ ಈ ಕಾರ್ಯಾಗಾರದಿಂದ ಪ್ರಾರಂಭ ಮಾಡುತ್ತಿದ್ದೇವೆ. ಬೂತ್ ಮಟ್ಟದಿಂದ ಮಹಿಳಾ ಘಟಕಕ್ಕೆ ಶಕ್ತಿ ತುಂಬುವ ಕೆಲಸ ನೀಡುತ್ತೇವೆ ಎಂದು ಅವರು ಹೇಳಿದ್ದಾರೆ.