ಸಿಂಧಗಿ ಟಿಕೆಟ್ ಗಾಗಿ ಬಿಜೆಪಿ-ಜೆಡಿಎಸ್ ಟಿಕೆಟ್ ಆಕಾಂಕ್ಷಿಗಳ ಲಾಬಿ: ಸಿಎಂ ಮನಗೂಳಿ ಇಬ್ಬರು ಪುತ್ರರ ಮುಖಾಮುಖಿ?

ಸಿಂಧಗಿ ವಿಧಾನಸಭೆ ಉಪಚುನಾವಣೆಗೆ ಕಾಂಗ್ರೆಸ್ ಈಗಾಗಲೇ ತನ್ನ ಅಭ್ಯರ್ಥಿ ಹೆಸರು ಘೋಷಿಸಿದೆ, ಆದರೆ ಜೆಡಿಎಸ್ ಮತ್ತು ಬಿಜೆಪಿ ಸೂಕ್ತ ಅಭ್ಯರ್ಥಿಗಳಿಗಾಗಿ ಇನ್ನೂ ಹುಡುಕಾಟ ನಡೆಸುತ್ತಿದೆ.
ದಿವಂಗತ ಸಿಎಂ ಮನಗೂಳಿ
ದಿವಂಗತ ಸಿಎಂ ಮನಗೂಳಿ

ವಿಜಯಪುರ: ಸಿಂಧಗಿ ವಿಧಾನಸಭೆ ಉಪಚುನಾವಣೆಗೆ ಕಾಂಗ್ರೆಸ್ ಈಗಾಗಲೇ ತನ್ನ ಅಭ್ಯರ್ಥಿ ಹೆಸರು ಘೋಷಿಸಿದೆ, ಆದರೆ ಜೆಡಿಎಸ್ ಮತ್ತು ಬಿಜೆಪಿ ಸೂಕ್ತ ಅಭ್ಯರ್ಥಿಗಳಿಗಾಗಿ ಇನ್ನೂ ಹುಡುಕಾಟ ನಡೆಸುತ್ತಿದೆ.

ವಿರೋಧ ಪಕ್ಷ ಕಾಂಗ್ರೆಸ್ ದಿವಂಗತ ಸಿಎಂ ಮನಗೂಳಿ ಅವರ ಪುತ್ರ ಅಶೋಕ್ ಮನಗೂಳಿ ಅವರ ಹೆಸರನ್ನು ಘೋಷಿಸಿದೆ.

ಸಿಎಂ ಮನಗೂಳಿ ಅವರ ಪುತ್ರ ಅಶೋಕ್ ಮಾರ್ಚ್ ತಿಂಗಳಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು, ಹೀಗಾಗಿ ಅವರ ಹೆಸರನ್ನು ಕಾಂಗ್ರೆಸ್ ಪ್ರಕಟಿಸಿದೆ,  ಅಶೋಕ್ ಮನಗೂಳಿ ಅವರನ್ನು ಅಭ್ಯರ್ಥಿಯನ್ನಾಗಿಸುವ ನಿರ್ಧಾರವನ್ನು ಪುನರ್ ಪರಿಶೀಲಿಸಬೇಕೆಂದು ಕೇಂದ್ರ ನಾಯಕರಿಗೆ  ಹಲವು ಸ್ಥಳೀಯ ಕಾಂಗ್ರೆಸ್ ಮುಖಂಡರು ಒತ್ತಾಯಿಸುತ್ತಿದ್ದಾರೆ.

ಎರಡು ಪಕ್ಷಗಳಿಂದ ಒಟ್ಟು 8 ಆಕಾಂಕ್ಷಿಗಳಿದ್ದಾರೆ, ಬಿಜೆಪಿಯಲ್ಲಿ ಮಾಜಿ ಶಾಸಕ ರಮೇಶ್ ಭೂಸನೂರು ಮತ್ತು ಅಶೋಕ್ ಅಲ್ಲಾಪುರಿ ಹಾಗೂ ಜೆಡಿಎಸ್ ಮಾಜಿ ಶಾಸಕ ರವಿಕಾಂತ ಪಾಟೀಲ್ ಹಾಗೂ ಸಿಂಧಗಿ ಮುನಿಸಿಪಾಲಿಟಿ ಅಧ್ಯಕ್ಷ ಶಾಂತವೀರ್ ಮನಗೂಳಿ ಪ್ರಮುಖ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಿಂಧಗಿ ಉಪಚುನಾವಣೆ ಉಸ್ತುವಾರಿಯನ್ನಾಗಿ ಬಿಜೆಪಿಯಿಂದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರನ್ನು ನಿಯೋಜಿಸಲಾಗಿದೆ.  ಸಿಂಧಗಿ ಉಪಚುನಾವಣೆಯಲ್ಲಿ ನನ್ನ ಮಗ ಅಥವಾ ನಾನು ಸ್ಪರ್ಧಿಸುತ್ತಿಲ್ಲ ಎಂದು ಲಕ್ಷ್ಮಣ ಸವದಿ ಸ್ಪಷ್ಟ ಪಡಿಸಿದ್ದಾರೆ.

ಪಕ್ಷದ ಬ್ಲಾಕ್ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಮತ್ತು ವೀಕ್ಷಕರೊಂದಿಗೆ ನಿರಂತರವಾಗಿ ಸಭೆ ನಡೆಸಿ  ಹೈಕಮಾಂಡ್ ಗೆ ವರದಿ ಸಲ್ಲಿಸಿದ್ದೇವೆ, ಇದರ ಜೊತೆಗೆ 8 ಆಕಾಂಕ್ಷಿಗಳ ಪಟ್ಟಿಯನ್ನು ರವಾನಿಸಿದ್ದೇವೆ, ಇನ್ನೂ ಒಂದು ಅಥವಾ ಎರಡು ದಿನದಲ್ಲಿ ಪಕ್ಷ ಅಭ್ಯರ್ಥಿಯನ್ನು ಘೋಷಿಸಲದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಆರ್ ಎಸ್ ಪಾಟೀಲ್  ಕುಚಬಾಳ್ ಹೇಳಿದ್ದಾರೆ.

ಇನ್ನೂ ಜೆಡಿಎಸ್ ನಿಂದ ದಿವಂಗತ ಶಾಸಕ ಎಂ ಸಿ ಮನಗೂಳಿ ಅವರ ಮತ್ತೊಬ್ಬ ಪುತ್ರ ಶಾಂತವೀರ್ ಮನಗೂಳಿ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ, ಈ ಸಂಬಂಧ ಗುರುವಾರ ಬೆಂಗಳೂರಿನಲ್ಲಿ ಜೆಡಿಎಸ್ ನಾಯಕರಾದ ಎಚ್ ಡಿ ದೇವೇಗೌಡ ಮತ್ತು ಕುಮಾರ ಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚಿಸಲಾಗುವುದು, ಸಭೆಯಲ್ಲಿ ಅಂತಿಮ ನಿರ್ಧಾರ
ಕೈಗೊಳ್ಳಲಾಗುತ್ತದೆ ಎಂದು ಜೆಡಿಎಸ್ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com