ಸಿಂಧಗಿ-ಹಾನಗಲ್ ವಿಧಾನಸಭೆ ಉಪಚುನಾವಣೆ: ಆರ್ ಎಸ್ ಎಸ್ ನಾಯಕರನ್ನು ಭೇಟಿ ಮಾಡಿದ ಬೊಮ್ಮಾಯಿ

ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾದ ಬೆನ್ನಲ್ಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಬೆಂಗಳೂರಿನಲ್ಲಿರುವ ಆರ್ ಎಸ್ ಎಸ್ ಕಚೇರಿಗೆ ತೆರಳಿ ನಾಯಕರನ್ನು ಭೇಟಿ ಮಾಡಿದ್ದಾರೆ.
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾದ ಬೆನ್ನಲ್ಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಬೆಂಗಳೂರಿನಲ್ಲಿರುವ ಆರ್ ಎಸ್ ಎಸ್ ಕಚೇರಿಗೆ ತೆರಳಿ ನಾಯಕರನ್ನು ಭೇಟಿ ಮಾಡಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು, ಉಪ ಚುನಾವಣೆ ಮತ್ತಿತರ ವಿಷಯಗಳ ಬಗ್ಗೆ ಹಿರಿಯ ಆರ್ ಎಸ್ ಎಸ್ ನಾಯಕರ ಜೊತೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ವೇಳೆ ನಾಯಕರು ಕೆಲವು ಸಲಹೆಗಳನ್ನು ನೀಡಿದ್ದಾರೆ ಎನ್ನಲಾಗಿದೆ.

ಹಾನಗಲ್ ಮತ್ತು ಸಿಂದಗಿ ಉಪ ಚುನಾವಣೆ ಸಿಎಂ ಬಸವರಾಜಬೊಮ್ಮಾಯಿ ಅವರ ನಾಯಕತ್ವಕ್ಕೆ ಅಗ್ನಿ ಪರೀಕ್ಷೆಯಾಗಿದೆ, ಬೊಮ್ಮಾಯಿ ನಾಯಕತ್ವದಲ್ಲಿ ಎದುರಾಗುತ್ತಿರುವ ಮೊದಲ ದೊಡ್ಡ ಚುನಾವಣೆ ಇದಾಗಿದೆ. ಹಾನಗಲ್ ಕ್ಷೇತ್ರ ಹಾವೇರಿಯಲ್ಲಿದ್ದು, ಸಿಎಂ ತವರು ಜಿಲ್ಲೆಯಾಗಿದೆ.

ಚುನಾವಣೆ ಕುರಿತಂತೆ. ದೇವಾಲಯಗಳ ತೆರವು, ಹಾಗೂ ರಾಷ್ಟ್ರೀಯ ಶಿಕ್ಷಣನೀತಿ ಜಾರಿಗೆ ತರುವುದು ಸೇರಿದಂತೆ ಹಲವು ವಿಷಯಗಳ ಬಗ್ಗೆ ಆರ್ ಎಸ್ ಎಸ್ ನಾಯಕರ ಜೊತೆ ಸಮಾಲೋಚಿಸಲಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com