ನೈಟ್ ಪಾಲಿಟಿಕ್ಸ್ ಮಾಡಿ ಲಕ್ಷ್ಮಿ ಹೆಬ್ಬಾಳ್ಕರ್ ಶಾಸಕಿಯಾಗಿದ್ದು: ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್

ರಾತ್ರಿ ರಾಜಕೀಯದ ಸಂಸ್ಕೃತಿ ಗೊತ್ತಿದ್ದರಿಂದಲೇ ಕಾಂಗ್ರೆಸ್‌ನ ಲಕ್ಷ್ಮಿ ಹೆಬ್ಬಾಳಕರ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. ಇಲ್ಲದಿದ್ದರೆ ಅವರು ಶಾಸಕಿ ಆಗುವುದಕ್ಕೆ ಸಾಧ್ಯವಿರಲಿಲ್ಲ’ ಎಂದು ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಹೇಳಿದ್ದಾರೆ.
ಲಕ್ಷ್ಮಿ ಹೆಬ್ಬಾಳ್ಕರ್
ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ‘ರಾತ್ರಿ ರಾಜಕೀಯದ ಸಂಸ್ಕೃತಿ ಗೊತ್ತಿದ್ದರಿಂದಲೇ ಕಾಂಗ್ರೆಸ್‌ನ ಲಕ್ಷ್ಮಿ ಹೆಬ್ಬಾಳಕರ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. ಇಲ್ಲದಿದ್ದರೆ ಅವರು ಶಾಸಕಿ ಆಗುವುದಕ್ಕೆ ಸಾಧ್ಯವಿರಲಿಲ್ಲ’ ಎಂದು ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಹೇಳಿದ್ದಾರೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕಳೆದ ಎರಡು ದಿನಗಳ ಹಿಂದೆ ಸುರಿದ ಭಾರಿ ಮಳೆಗೆ ರಸ್ತೆಗಳು ಹಾಳಾಗಿದ್ದವು. ಈ ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರ ನಡುವಿನ ಆರೋಪ-ಪ್ರತ್ಯಾರೋಪದ ವೇಳೆ ಸಂಜಯ ಪಾಟೀಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಚುನಾವಣೆಗೆ ಮುನ್ನ, ನಾನು ನಿಮ್ಮ ಮನೆ ಮಗಳು ಎಂದೆಲ್ಲಾ ಹೇಳಿ ದೊಡ್ಡ ದೊಡ್ಡ ಕನಸುಗಳನ್ನು ತೋರಿಸಿದ್ದರು. ಆ ಕನಸುಗಳನ್ನು ನನಸು ಮಾಡಲಾಗಿಲ್ಲ. ಹೀಗಾಗಿ, ಗ್ರಾಮೀಣ ಕ್ಷೇತ್ರದ ಜನರು ಪ್ರತಿಕ್ರಿಯೆ ಕೊಡಲು ಆರಂಭಿಸಿದ್ದಾರೆ. ಅದಕ್ಕೆ ಬಿಜೆಪಿಯ ಹೆಸರನ್ನು ಶಾಸಕಿ ಕೊಡುತ್ತಿದ್ದಾರೆ. ರಾತ್ರಿ ರಾಜಕೀಯ ಮಾಡುವುದು ಬಿಜೆಪಿ ಸಂಸ್ಕೃತಿಯಲ್ಲ. ಅದು ಕಾಂಗ್ರೆಸ್‌ನವರ ಸಂಸ್ಕೃತಿ’ ಎಂದು ಆರೋಪಿಸಿದರು.

ಕ್ಷೇತ್ರದಲ್ಲಿ ಅವರು ಹೇಳುತ್ತಿರುವ ಅಭಿವೃದ್ಧಿ ಹೊಳೆ ಎಲ್ಲಿದೆ ಎನ್ನುವುದನ್ನು ಹೇಳಿದರೆ ನಾನೂ ನೋಡಿಕೊಂಡು ಬರುತ್ತೇನೆ’ ಎಂದು ವ್ಯಂಗ್ಯವಾಡಿದರು. ‘ಹೆಬ್ಬಾಳಕರಗೆ ಸತ್ಯ ಒಪ್ಪಿಕೊಳ್ಳುವುದಕ್ಕೆ ಆಗುತ್ತಿಲ್ಲ. ಅವರು ಕೆಲಸ ಮಾಡೇ ಇಲ್ಲ ಎಂದು ಹೇಳಲಾಗುವುದಿಲ್ಲ. ಸಂವಿಧಾನದ ಪ್ರಕಾರ ಶಾಸಕರ ನಿಧಿಯಲ್ಲಿ ಒಂದಷ್ಟು ಕೆಲಸಗಳು ಸಹಜವಾಗಿಯೇ ನಡೆಯುತ್ತವೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com