2023ರ ವಿಧಾನಸಭೆ ಚುನಾವಣೆ: ಚಿಕ್ಕನಾಯಕನಹಳ್ಳಿಗೆ ನಾನೇ ಬಿಜೆಪಿ ಅಭ್ಯರ್ಥಿ; ಮಾಧುಸ್ವಾಮಿಗೆ ಮಾಜಿ ಶಾಸಕ ಕಿರಣ್ ಕುಮಾರ್ ಟಾಂಗ್!

ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ ಅವರು  2023ರ ವಿಧಾನಸಭಾ ಚುನಾವಣಾ ಪ್ರಚಾರವನ್ನು ಚಿಕ್ಕನಾಯಕನಹಳ್ಳಿಯಿಂದ ಪ್ರಾರಂಭಿಸಿದ್ದಾರೆ
ಜೆ.ಸಿ ಮಾಧುಸ್ವಾಮಿ
ಜೆ.ಸಿ ಮಾಧುಸ್ವಾಮಿ
Updated on

ತುಮಕೂರು: ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ ಅವರು  2023ರ ವಿಧಾನಸಭಾ ಚುನಾವಣಾ ಪ್ರಚಾರವನ್ನು ಚಿಕ್ಕನಾಯಕನಹಳ್ಳಿಯಿಂದ ಪ್ರಾರಂಭಿಸಿದ್ದಾರೆ. ಇದರ ಅಂಗವಾಗಿ, ಶುಕ್ರವಾರ ತಮ್ಮ ಬೆಂಬಲಿಗರಿಗಾಗಿ ಕಚೇರಿ ಸ್ಥಾಪಿಸಿದ್ದಾರೆ.

ಬಿಜೆಪಿ ಟಿಕೆಟ್‌ಗೆ ತಾವೇ ತೀವ್ರ ಆಕಾಂಕ್ಷಿ ಎಂದು ಘೋಷಿಸಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧು ಸ್ವಾಮಿ ಅವರಿಗೆ ಇರುಸು ಮುರುಸು  ತಂದಿದ್ದಾರೆ. 2008 ರಲ್ಲಿ ಕ್ಷೇತ್ರಗಳ ವಿಂಗಡಣೆಯ ನಂತರ  ಕಳ್ಳಂಬೆಳ್ಳ  ವಿಧಾನಸಭಾ ಕ್ಷೇತ್ರ ನಾಪತ್ತೆಯಾದ ನಂತರ ಹಲವಾರು ವರ್ಷಗಳಿಂದ ಮಧು ಸ್ವಾಮಿ ಅವರೊಂದಿಗೆ ಶೀತಲ ಸಮರ ನಡೆಸುತ್ತಿದ್ದರು. 2018 ರ ಚುನಾವಣೆಯಲ್ಲಿ ಪಕ್ಷದ ಹೈಕಮಾಂಡ್ ಮತ್ತು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಒತ್ತಡದಿಂದಾಗಿ ಅವರು ಕ್ಷೇತ್ರವನ್ನು ತ್ಯಾಗ ಮಾಡಿದರು ಎಂದು ವರದಿಯಾಗಿದೆ.

ಆದರೆ ಅವರು ಸ್ವಂತ ಬಲದ ಮೇಲೆ ಬಿಜೆಪಿ ಕಾರ್ಯಕರ್ತರನ್ನು ಸಂಘಟಿಸುವುದನ್ನು ಮುಂದುವರೆಸಿದರು. ಕೆಲವು ತಿಂಗಳ ಹಿಂದೆ ತುಮಕೂರು ಲೋಕಸಭಾ ಸದಸ್ಯ ಜಿ ಎಸ್ ಬಸವರಾಜು ಅವರ ಆಶೀರ್ವಾದದೊಂದಿಗೆ ಬೃಹತ್ ಸಮಾವೇಶವನ್ನೂ ನಡೆಸಿದರು. ಮಾಧುಸ್ವಾಮಿ ವಿರುದ್ಧ ಇಬ್ಬರೂ ನಾಯಕರು ಶೀತಲ ಸಮರ ಸಾರಿದ್ದಾರೆ ಎನ್ನಲಾಗಿದೆ.

ಇತ್ತೀಚೆಗೆ ವಿವಿಧ ಮಂಡಳಿ ಮತ್ತು ನಿಗಮಗಳ ಸುಮಾರು 52 ಅಧ್ಯಕ್ಷರನ್ನು ಪದಚ್ಯುತಗೊಳಿಸಿ ಸರ್ಕಾರ ಆದೇಶ ಹೊರಡಿಸಿದಾಗ ಕಿರಣ್ ಕುಮಾರ್ ಅವರನ್ನು ಮಂಡಳಿಯ ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕಲಾಗಿಲ್ಲ. ಇದರರ್ಥ ಅವರಿಗೆ ಪಕ್ಷದ ಹೈಕಮಾಂಡ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಬಲವಿದೆ ತಿಳಿದು ಬಂದಿದೆ.

ಯಡಿಯೂರಪ್ಪ ಮತ್ತು ಬಿಜೆಪಿ ಹೈಕಮಾಂಡ್ 2023ರಲ್ಲಿ ಟಿಕೆಟ್ ನೀಡುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ2018ರಲ್ಲಿ ಸೀಟು ತ್ಯಾಗ ಮಾಡಿದ್ದೆ ಎಂದು ಕಿರಣ್ ಕುಮಾರ್ ಹೇಳಿದ್ದಾರೆ, ನನ್ನ ಸ್ಪರ್ಧೆ ಖಚಿತ ಎಂಬ ಸ್ಪಷ್ಟ ಸಂದೇಶವನ್ನು ಪಕ್ಷದ ಕಾರ್ಯಕರ್ತರಿಗೆ ರವಾನಿಸಲು ಪ್ರಚಾರ ಆರಂಭಿಸಿದ್ದೇನೆ ಎಂದು ಕಿರಣ್ ಇತ್ತೀಚೆಗೆ ಸುದ್ದಿಗಾರರಿಗೆ ತಿಳಿಸಿದರು. 2023ರಲ್ಲಿ ಚಿಕ್ಕನಾಯಕನಹಳ್ಳಿಯಿಂದ ಮಧು ಸ್ವಾಮಿ ಸ್ಪರ್ಧಿಸುವುದಿಲ್ಲ ಎಂಬ ಮಾತುಗಳೂ ಕೇಳಿಬರುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com