ಬೆಳಗಾವಿ ವಿಧಾನಸಭೆ ಕ್ಷೇತ್ರವೇ ಬಿಜೆಪಿ ಟಾರ್ಗೆಟ್: ಸತೀಶ್ ಜಾರಕಿಹೊಳಿ ಸೋಲಿಸಲು ಕಮಲ ಪಡೆ ಮೆಗಾ ಪ್ಲ್ಯಾನ್!

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ  ಅಂಕುಶದಲ್ಲಿರುವ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭದ್ರ ಬುನಾದಿ ನಿರ್ಮಿಸುತ್ತಿದೆ. ಬೆಳಗಾವಿಯ 13 ಸ್ಥಾನಗಳ ಪೈಕಿ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಧಕ್ಕೆ ತರಬಹುದಾದ ಜಾರಕಿಹೊಳಿ ಅವರ ರಾಜಕೀಯ ತಂತ್ರಗಳನ್ನು ವಿಫಲಗೊಳಿಸಲು ಬಿಜೆಪಿ ನಾಯಕತ್ವವು ಪ್ರತಿತಂತ್ರ ರೂಪಿಸುತ್ತಿದೆ.
ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ
Updated on

ಬೆಂಗಳೂರು: 2023 ರ ಚುನಾವಣೆಯಲ್ಲಿ ಬೆಳಗಾವಿಯ 18 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಹೆಚ್ಚಿನ ಸ್ಥಾನಗಳ ಮೇಲೆ ಕಣ್ಣಿಟ್ಟಿವೆ, ಏಕೆಂದರೆ ರಾಜ್ಯ ಸರ್ಕಾರ ರಚನೆಯಲ್ಲಿ ಗಡಿ ಜಿಲ್ಲೆ ಬೆಳಗಾವಿ ಯಾವಾಗಲೂ ಪ್ರಮುಖ ಪಾತ್ರ ವಹಿಸುತ್ತದೆ ಎಂಬುದನ್ನು ಅರಿತಿವೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ  ಅಂಕುಶದಲ್ಲಿರುವ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭದ್ರ ಬುನಾದಿ ನಿರ್ಮಿಸುತ್ತಿದೆ. ಬೆಳಗಾವಿಯ 13 ಸ್ಥಾನಗಳ ಪೈಕಿ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಧಕ್ಕೆ ತರಬಹುದಾದ ಜಾರಕಿಹೊಳಿ ಅವರ ರಾಜಕೀಯ ತಂತ್ರಗಳನ್ನು ವಿಫಲಗೊಳಿಸಲು ಬಿಜೆಪಿ ನಾಯಕತ್ವವು ಪ್ರತಿತಂತ್ರ ರೂಪಿಸುತ್ತಿದೆ.

ಸತೀಶ್ ಜಾರಕಿಹೊಳಿ ಅವರನ್ನು ಸೋಲಿಸುವ ಸಲುವಾಗಿ ಯಮಕನಮರಡಿ ಕ್ಷೇತ್ರದ ಉಸ್ತುವಾರಿಯಾಗಿ ಮಾಜಿ ಸಚಿವ ಉಮೇಶ ಕತ್ತಿ ಹಾಗೂ ಶಾಸಕ ಅಭಯ ಪಾಟೀಲ್ ಅವರನ್ನು ನೇಮಿಸಲು ಬಿಜೆಪಿ ಚಿಂತಿಸುತ್ತಿದೆ. ಬೆಳಗಾವಿಯಲ್ಲಿ ಈಗಾಗಲೇ 13 ಸ್ಥಾನಗಳನ್ನು ಹೊಂದಿದ್ದು, ಕಾಂಗ್ರೆಸ್ ಬಳಿಯಿರುವ ಉಳಿದ ಐದು ಸ್ಥಾನಗಳಲ್ಲಿ ಹೆಚ್ಚಿನದನ್ನು ಗೆಲ್ಲಲು ಬಿಜೆಪಿ ಕಾರ್ಯತಂತ್ರಗಳನ್ನು ರೂಪಿಸುತ್ತಿದೆ.

ಬಿಜೆಪಿ ನಾಯಕತ್ವವು ತನ್ನ ಉದ್ದೇಶವನ್ನು ಈಡೇರಿಸಿಕೊಳ್ಳಲು, 18 ವಿಧಾನಸಭಾ ಕ್ಷೇತ್ರಗಳಲ್ಲಿ ಹೆಚ್ಚಿನ ಅನುಯಾಯಿಗಳನ್ನು ಹೊಂದಿರುವ ಜಾರಕಿಹೊಳಿ ಸುತ್ತ ಕುಣಿಕೆಯನ್ನು ಬಿಗಿಗೊಳಿಸುವುದು ಅತ್ಯಗತ್ಯ  ಎಂದು ತಿಳಿದಿದೆ. ಮೂಲಗಳ ಪ್ರಕಾರ, 2023 ರಲ್ಲಿ ಯಮಕನಮರಡಿಯಲ್ಲಿ ಸತೀಶ್ ಜಾರಕಿಹೊಳಿ ಅವರನ್ನು ಸೋಲಿಸಲು ಬಿಜೆಪಿ ಎಲ್ಲಾ ರೀತಿಯ ಪ್ರಯತ್ನ ನಡೆಸುತ್ತಿದೆ.

ಕಳೆದ ಚುನಾವಣೆಯಲ್ಲಿ ಯಮಕನಮರಡಿ ಕ್ಷೇತ್ರಕ್ಕೆ ಪ್ರಚಾರಕ್ಕೆ ಬರದಿದ್ದರೂ ಜಾರಕಿಹೊಳಿ ಅವರು ಬಿಜೆಪಿಯ ಅಭ್ಯರ್ಥಿ ಮಾರುತಿ ಅಷ್ಟಗಿ ವಿರುದ್ಧ 3 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಹೀಗಾಗಿ ಯಮನಕರಡಿ ಕ್ಷೇತ್ರಕ್ಕೆ ಬಿಜೆಪಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಿಲು ಚಿಂತನೆ ನಡೆಸಿದೆ.

2023 ರ ವಿಧಾನಸಭೆ ಚುನಾವಣೆಯಲ್ಲಿ ಯಮಕನಮರಡಿಯಿಂದ ನಾಲ್ಕನೇ ಬಾರಿಗೆ ಗೆಲುವು ಸಾಧಿಸುವುದಾಗಿ ಸತೀಶ್ ಜಾರಕಿಹೊಳಿ ವಿಶ್ವಾಸ ಹೊಂದಿದ್ದಾರೆ, ತಾವು ಮಾಡಿರುವ ಅಭಿವೃದ್ಧಿ ಕಾರ್ಯಗಳು ತಮ್ಮನ್ನು ಗೆಲ್ಲಿಸುತ್ತವೆ ಎಂದಿದ್ದಾರೆ.  

ಬಿಜೆಪಿಯ ಪ್ರತಿತಂತ್ರಗಳ ಕುರಿತು ಮಾತನಾಡಿದ ಸತೀಶ್ ಜಾರಕಿಹೊಳಿ ಅವರು, ಕಳೆದ ಒಂದು ವರ್ಷದಿಂದ ಯಮಕನಮರಡಿಯಲ್ಲಿ ಆಡಳಿತ ಪಕ್ಷವು ತನ್ನನ್ನು ಟಾರ್ಗೆಟ್ ಮಾಡಿದೆ. "ಆದಾಗ್ಯೂ, ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ಬಲಪಡಿಸಿಕೊಳ್ಳುವುದು ಆಯಾ ರಾಜಕೀಯ ಪಕ್ಷಗಳ ಕೆಲಸ, ಹೀಗಾಗಿ ನಿಸ್ಸಂಶಯವಾಗಿ, ಬಿಜೆಪಿ  ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಹಾಗೆಯೇ ಕಾಂಗ್ರೆಸ್ ಕೂಡ ತನ್ನ ಕೆಲಸವನ್ನು ಮಾಡುತ್ತದೆ ಎಂದು ಹೇಳಿದ್ದಾರೆ.

ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಕೂಡ ಯಮಕನಮರಡಿಯಲ್ಲಿ ಕಾಂಗ್ರೆಸ್‌ನ ಸಂಭಾವ್ಯ ಅಭ್ಯರ್ಥಿ ಎಂದು ಹೇಳಲಾಗುತ್ತಿದೆ. ಆದರೆ ಅವರು ಕ್ಷೇತ್ರವನ್ನು ತೊರೆಯುವುದಿಲ್ಲ ಮತ್ತು ಮುಂದಿನ ಚುನಾವಣೆಯಲ್ಲಿ ಪುತ್ರಿ ಪ್ರಿಯಾಂಕಾ ಅವರನ್ನು ಸ್ಪರ್ಧಿಸುವಂತೆ ಮಾಡಬಹುದು ಎಂದು ಮೂಲಗಳು ತಿಳಿಸಿವೆ.

ಜಾರಕಿಹೊಳಿ ಕ್ಷೇತ್ರದಲ್ಲಿ ಜನಪ್ರಿಯತೆಯಿಂದಾಗಿ ಅವರನ್ನು ಸೋಲಿಸಲು ಬಿಜೆಪಿ ನಡೆಸುವ ಪ್ರಯತ್ನಗಳು ಕಾರ್ಯರೂಪಕ್ಕೆ ಬರುವುದಿಲ್ಲ. ಬೆಳಗಾವಿಯ ಪ್ರಭಾವಿ ರಾಜಕೀಯ ಕುಟುಂಬಗಳಾದ ಜಾರಕಿಹೊಳಿ ಮತ್ತು ಕತ್ತಿ ಕುಟುಂಬಗಳ ನಡುವಿನ ಸುದೀರ್ಘ ಹೋರಾಟ ಚುನಾವಣೆಯ ಮೇಲೂ ಪರಿಣಾಮ ಬೀರಲಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com