ಹೈಕಮಾಂಡ್ ಮಟ್ಟದಲ್ಲಿ ನಾನಾ, ನೀನಾ ಎಂಬ ಹಗ್ಗಜಗ್ಗಾಟ: ಡಬಲ್ ಸ್ಟೇರಿಂಗ್ ಪಕ್ಷ ಎಂಬುದಕ್ಕೆ ಇದು ಸ್ಪಷ್ಟ ನಿದರ್ಶನ!
ಬೆಂಗಳೂರು: ಸಿದ್ದರಾಮೋತ್ಸವಕ್ಕೆ ರಾಹುಲ್ ಗಾಂಧಿ ಬಂದರು ಎಂಬ ಕಾರಣಕ್ಕೆ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮಕ್ಕೆ ಪ್ರಿಯಾಂಕಾ ಗಾಂಧಿ ಅವರನ್ನು ಡಿಕೆಶಿ ಆಹ್ವಾನಿಸಿದ್ದಾರೆ. ಹೈಕಮಾಂಡ್ ಮಟ್ಟದಲ್ಲಿ ನಾನಾ, ನೀನಾ ಎಂಬ ಹಗ್ಗಜಗ್ಗಾಟ ಆರಂಭಗೊಂಡಿದೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಹರಿಹಾಯ್ದಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ಹೈಕಮಾಂಡ್ ಮಟ್ಟದಲ್ಲಿ ನಾನಾ, ನೀನಾ ಎಂಬ ಹಗ್ಗಜಗ್ಗಾಟ ಆರಂಭಗೊಂಡಿದೆ, ಡಬಲ್ ಸ್ಟೇರಿಂಗ್ ಪಕ್ಷ ಎಂಬುದಕ್ಕೆ ಇದು ಸ್ಪಷ್ಟ ನಿದರ್ಶನ ಎಂದು ಟೀಕಿಸಿದೆ
ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವೀಟರ್ ಖಾತೆ ಮೂಲಕ ಸುಳ್ಳು ಆರೋಪ ಮಾಡಲಾಗಿತ್ತು. ಆದರೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೇ ಇದನ್ನು ನಿರಾಕರಿಸಿದ್ದಾರೆ. ಕಾಂಗ್ರೆಸ್ ಒಂದು ಡಬಲ್ ಸ್ಟೇರಿಂಗ್ ಪಕ್ಷ ಎಂದು ಕರೆಯಲು ಇದಕ್ಕಿಂತ ಬೇರೆ ಉದಾಹರಣೆ ಬೇಕೇ? ಎಂದು ಪ್ರಶ್ನಿಸಿದೆ.
ಕಾಂಗ್ರೆಸ್ ಹಾಗೂ ಜೆಡಿಎಸ್ ಅಪವಿತ್ರ ಮೈತ್ರಿ ಸಿಂಕ್ ಆಗದೇ ಒದ್ದಾಡುತ್ತಿದ್ದಾಗ "ಬಿದ್ದು ಹೋಗುವುದಕ್ಕೆ ಇದೇನು ಒಣ ಮರವಲ್ಲ" ಎಂದು ಡಿಕೆಶಿ ಅಬ್ಬರಿಸುತ್ತಿದ್ದರು, ಆದರೆ ಈಗ ಸಿದ್ದರಾಮಯ್ಯ ಜೊತೆ ಹೊಂದಾಣಿಕೆ ಸಾಧ್ಯವಾಗದೇ ಈಗ ಡಿಕೆಶಿವಕುಮಾರ್ ಅವರು ಬಿದ್ದು ಹೋಗುವ ಒಣ ಮರದಂತಾಗಿದ್ದಾರೆ ಎಂದು ಬಿಜೆಪಿ ಲೇವಡಿ ಮಾಡಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ