ರಾಜ್ಯಕ್ಕೆ ಅರುಣ್ ಸಿಂಗ್ ಭೇಟಿ, ಪದಾಧಿಕಾರಿಗಳ ಸಭೆಯಲ್ಲಿ ಭಾಗಿ: ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ; ವಿಧಾನಸಭೆ ಚುನಾವಣೆ ರೂಪುರೇಷೆ ಸಿದ್ಧತೆ!
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಗುರುವಾರ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಲು ಮತ್ತು ಪಕ್ಷದ ಪರಿಸ್ಥಿತಿಯನ್ನು ಅವಲೋಕಿಸಲು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.
ಸುಳ್ಯದಲ್ಲಿ ಬಿಜೆಪಿವೈಎಂ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ನಂತರ ಬಿಜೆಪಿ ಯುವಮೋರ್ಚಾ ಕೇಂದ್ರ ನಾಯಕತ್ವ ಮತ್ತು ಬೊಮ್ಮಾಯಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ನಂತರ ಸಿಂಗ್ ಅವರು ಮೊದಲ ಬಾರಿಗೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ.
ಪದಾಧಿಕಾರಿಗಳಲ್ಲದೆ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಜಿಲ್ಲಾಧ್ಯಕ್ಷರನ್ನು ಸಭೆಗೆ ಆಹ್ವಾನಿಸಲಾಗಿದ್ದು, ಪ್ರತಿ ಬ್ಲಾಕ್‌ನಲ್ಲಿ ಪಕ್ಷದ ಸಂಘಟನೆಯ ಕುರಿತು ವರದಿ ಸಲ್ಲಿಸುವ ನಿರೀಕ್ಷೆಯಿದೆ. 2023 ರ ವಿಧಾನಸಭಾ ಚುನಾವಣೆಯ ಸಿದ್ಧತೆಗಳ ಬಗ್ಗೆಯೂ ಚರ್ಚಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಪಕ್ಷದ ಸಾಮಾಜಿಕ ಮಾಧ್ಯಮ ಮುಖ್ಯಸ್ಥರನ್ನು ಸಭೆಗೆ ಆಹ್ವಾನಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಚುನಾವಣೆಯ ಪೂರ್ವಭಾವಿಯಾಗಿ ನಿರ್ಣಾಯಕ ಪಾತ್ರವನ್ನು ವಹಿಸುವುದು ಪಕ್ಷದ ಸಾಮಾಜಿಕ ಮಾಧ್ಯಮ ಮುಖ್ಯಸ್ಥರು ಎನ್ನಲಾಗಿದೆ.
ಈ ಮಧ್ಯೆ, ಬೊಮ್ಮಾಯಿ ಸಂಪುಟ ವಿಸ್ತರಣೆ ಬಗ್ಗೆ ಊಹಾಪೋಹಗಳು ಹರಿದಾಡುತ್ತಿದ್ದು, ಎಂಎಲ್ಸಿ ಸಿ ಪಿ ಯೋಗೇಶ್ವರ್ ಮತ್ತು ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ ಮತ್ತು ಕೆ ಎಸ್ ಈಶ್ವರಪ್ಪ ಸೇರಲು ಉತ್ಸುಕರಾಗಿದ್ದಾರೆ ಎನ್ನಲಾಗಿದೆ. ಸಂಪುಟ ವಿಸ್ತರಣೆ ಮತ್ತು ಅದರ ಪರಿಣಾಮಗಳ ಬಗ್ಗೆ ಚರ್ಚಿಸಬಹುದು ಮತ್ತು ಪಕ್ಷದ ಹೈಕಮಾಂಡ್‌ಗೆ ವರದಿ ಮಾಡಬಹುದು ಎಂದು ಮತ್ತೊಂದು ಮೂಲಗಳು ತಿಳಿಸಿವೆಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿಎಲ್ ಸಂತೋಷ್ ಕೂಡ ಪಾಲ್ಗೊಳ್ಳುವ ಸಾಧ್ಯತೆ ಇದೆ. ಬುಧವಾರ ರಾತ್ರಿ ಬೆಂಗಳೂರಿಗೆ ಆಗಮಿಸುವ ಅರುಣ್ ಸಿಂಗ್ ಗುರುವಾರ ರಾತ್ರಿ ವಾಪಸ್ ದೆಹಲಿಗೆ ತೆರಳಲಿದ್ದಾರೆ.
ಸಭೆಯ ಮುನ್ನಾ ದಿನ ಹಳೇ ಮೈಸೂರಿನ ಒಕ್ಕಲಿಗ ಮುಖಂಡರಾದ ಸಚಿವರಾದ ಆರ್.ಅಶೋಕ, ಎಸ್.ಟಿ.ಸೋಮಶೇಖರ್, ಸಂಸದ ಡಿ.ವಿ.ಸದಾನಂದಗೌಡ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸೇರಿದಂತೆ ಹಲವರ ಜೊತೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಭೆ ನಡೆಸಿ ಕಾರ್ಯ ತಂತ್ರ ರೂಪಿಸಿದ್ದಾರೆ. ಕೆಲ ದಿನಗಳ ಹಿಂದೆ ಅರುಣ್ ಸಿಂಗ್ ಈ ಹಳೇ ಮೈಸೂರು ಭಾಗಕ್ಕೆ ಪ್ರವಾಸ ಮಾಡಿ ಅಲ್ಲಿನ ಬಗ್ಗೆ ಮಾಹಿತಿ ಪಡೆದಿದ್ದರು. ಹಳೇ ಮೈಸೂರು ಭಾಗದ ಒಂಬತ್ತು ಜಿಲ್ಲೆಗಳ 61 ಸ್ಥಾನಗಲ್ಲಿ ಗಮನ ಹರಿಸಲು ಯೋಜನೆ ರೂಪಿಸಲಾಗಿದ್ದು, ಇಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಿಸುವವ ಹೊಣೆಯನ್ನು ಶಾಸಕರು, ಸಂಸದರು ಸೇರಿದಂತೆ ಪಕ್ಷದ ಮುಖಂಡರಿಗೆ ನೀಡಲಾಗುವುದು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ