ರಾಷ್ಠ್ರರಾಜಕಾರಣಕ್ಕೆ ಯಡಿಯೂರಪ್ಪ: ರಾಜ್ಯ ರಾಜಕೀಯ, ಧಾರ್ಮಿಕ ಸಂಸ್ಥೆಗಳ ಜವಾಬ್ದಾರಿ ಪುತ್ರ ವಿಜಯೇಂದ್ರ ಹೆಗಲಿಗೆ!

ಒಂದು ದಶಕದಿಂದ, ಯಡಿಯೂರಪ್ಪ ಅವರು ರಾಜ್ಯಾದ್ಯಂತ ಸಮುದಾಯದ ಧಾರ್ಮಿಕ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಭವಿಷ್ಯದಲ್ಲಿ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವ ವಿಜಯೇಂದ್ರ ತಮ್ಮ ತಂದೆಯ ಹಾದಿಯಲ್ಲಿ ಮುನ್ನಡೆಯುತ್ತಿದ್ದಾರೆ.
ಬಿಎಸ್ ಯಡಿಯೂರಪ್ಪ ಮತ್ತು ಬಿವೈ ವಿಜಯೇಂದ್ರ
ಬಿಎಸ್ ಯಡಿಯೂರಪ್ಪ ಮತ್ತು ಬಿವೈ ವಿಜಯೇಂದ್ರ
Updated on

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರಾಗಿ ನೇಮಿಸಿ ರಾಷ್ಟ್ರ ರಾಜಕಾರಣಕ್ಕೆ ಕೊಂಡಯ್ದಿರುವ ಹಿನ್ನೆಲೆಯಲ್ಲಿ, ಅವರ ಪುತ್ರ ಮತ್ತು ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಕರ್ನಾಟಕ ರಾಜಕೀಯ ವ್ಯವಹಾರಗಳ ಮೇಲೆ ಕೇಂದ್ರೀಕರಿಸಲು ಪ್ರಾರಂಭಿಸಿದ್ದಾರೆ.

ಸೋಮವಾರ, ವಿಜಯೇಂದ್ರ  ಗದಗ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ತಿಪಟೂರು ಸಮೀಪದ ನೊಣವಿನಕೆರೆ ಕರಿಬಸವೇಶ್ವರ ಮಠದ ವೀರಶೈವ ಲಿಂಗಾಯತ ಸಮಾಜದ ಮುಖ್ಯಸ್ಥ ಶ್ರೀ ಕರಿವೃಷಬಾದೇಶಿಕೇಂದ್ರ ಸ್ವಾಮಿಗಳು ಮತ್ತು ಪ್ರಸಿದ್ಧ ಶ್ರೀ ಜಗದ್ಗುರು ಫಕೀರೇಶ್ವರ ಮಠದ ಶಿರಹಟ್ಟಿಯ ಶ್ರೀ ದಿಂಗಾಲೇಶ್ವರ ಸ್ವಾಮಿಗಳ ಆಶೀರ್ವಾದ ಪಡೆದರು.

ಒಂದು ದಶಕದಿಂದ, ಯಡಿಯೂರಪ್ಪ ಅವರು ರಾಜ್ಯಾದ್ಯಂತ ಸಮುದಾಯದ ಧಾರ್ಮಿಕ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಭವಿಷ್ಯದಲ್ಲಿ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವ ವಿಜಯೇಂದ್ರ ತಮ್ಮ ತಂದೆಯ ಹಾದಿಯಲ್ಲಿ ಮುನ್ನಡೆಯುತ್ತಿದ್ದು ಬಹುತೇಕ ಯಶಸ್ವಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. 2023ಕ್ಕೆ ತಂದೆಯ ಸಲಹೆಯಂತೆ ವಿಜಯೇಂದ್ರ ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಸಿದ್ಧತೆ ನಡೆಸಿದ್ದಾರೆ.

ಇತ್ತೀಚೆಗೆ ಮಾಜಿ ಸಿಎಂ ಯಡಿಯೂರಪ್ಪ ತಾವು ಸ್ಪರ್ಧಿಸುತ್ತಿರುವ ಶಿಕಾರಿಪುರ ಕ್ಷೇತ್ರವನ್ನು ಪುತ್ರ ವಿಜಯೇಂದ್ರಗಾಗಿ ಬಿಟ್ಟುಕೊಡುವುದಾಗಿ ಘೋಷಿಸಿದ್ದರು, ಈ ಘೋಷಣೆ ಹಲವು ಚರ್ಚೆಗಳಿಗೆ ಕಾರಣವಾಗಿತ್ತು.  ಯಡಿಯೂರಪ್ಪ ಪಕ್ಷದ ಹೈಕಮಾಂಡ್‌ಗೆ ಮನವರಿಕೆ ಮಾಡಿಕೊಡುವಲ್ಲಿ ಯಶಸ್ವಿಯಾಗಿದ್ದು, ಬಿಜೆಪಿ ಹೈಕಮಾಂಡ್  ಗ್ರೀನ್ ಸಿಗ್ನಲ್ ನೀಡಿದೆ ಎಂದು ಮೂಲವೊಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದೆ.

ವಿಜಯೇಂದ್ರ ಅವರು ಲಂಬಾಣಿ (ಎಸ್‌ಸಿ) ಸಮುದಾಯದ ಪ್ರಭಾವಿ ಮುಖಂಡರಾದ ಶಿರಹಟ್ಟಿ ಶಾಸಕ ರಾಮಪ್ಪ ಲಮಾಣಿ ಅವರ 71ನೇ ಜನ್ಮದಿನಾಚರಣೆಯಲ್ಲಿ ಭಾಗವಹಿಸುವ ಮೂಲಕ ಅವರನ್ನು ಓಲೈಸಿದರು. ವೀರಶೈವ ಲಿಂಗಾಯತ ಸಮುದಾಯದ ನಂತರ ಶಿಕಾರಿಪುರದ ಲಂಬಾಣಿ ಸಮುದಾಯ  ಸಾಕಷ್ಟು ಮತದಾರರನ್ನು ಹೊಂದಿದೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಯಡಿಯೂರಪ್ಪ ಹಾಗೂ ಬಿವೈ ರಾಘವೇಂದ್ರ ಅವರನ್ನು ಸಮುದಾಯದವರು ಸಾಂಪ್ರದಾಯಿಕವಾಗಿ ಬೆಂಬಲಿಸಿದ್ದಾರೆ. ಇದೀಗ, ವಿಜಯೇಂದ್ರ ಅವರು ತಮ್ಮ ಚುನಾವಣಾ ಚೊಚ್ಚಲ ಪ್ರವೇಶಕ್ಕೂ ಮುನ್ನ ಅವರನ್ನು ಗೆಲ್ಲಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ರಾಜಕೀಯ ಪಂಡಿತರು ಗಮನಿಸಿದ್ದಾರೆ. ಶಿಕಾರಿಪುರದಲ್ಲಿ ನಡೆದ ರೋಡ್‌ಶೋ, ವಿಜಯೇಂದ್ರ ಅವರು 2023 ರ ಚುನಾವಣೆಗಾಗಿ ಕ್ಷೇತ್ರದ ಮೇಲೆ ಪ್ರಬಲವಾದ ನೆಲೆಯನ್ನು ಸ್ಥಾಪಿಸಲು ತಮ್ಮ ಗಮನ ಕೇಂದ್ರೀಕರಿಸುತ್ತಿದ್ದಾರೆ ಎಂದು ಸ್ಪಷ್ಟವಾಗಿ ಸೂಚಿಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com