ದೆಹಲಿ ಮಹಾನಗರ ಪಾಲಿಕೆ ಚುನಾವಣೆ ಗೆಲುವು: ಬೆಂಗಳೂರು ಎಎಪಿ ಘಟಕಕ್ಕೆ ಬೂಸ್ಟರ್ ಡೋಸ್!

ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯನ್ನು ಮಣಿಸಿ ಆಮ್ ಆದ್ಮಿ ಪಾರ್ಟಿ (ಎಎಪಿ) ಗೆಲುವು ಸಾಧಿಸಿರುವುದು  ಬೆಂಗಳೂರು ಘಟಕದ  ಎಎಪಿ ಕಾರ್ಯಕರ್ತರ ಆತ್ಮವಿಶ್ವಾಸ ಹೆಚ್ಚಿಸಿದೆ.
ಎಎಪಿ ಕಾರ್ಯಕರ್ತರ ವಿಜಯೋತ್ಸವ
ಎಎಪಿ ಕಾರ್ಯಕರ್ತರ ವಿಜಯೋತ್ಸವ

ಬೆಂಗಳೂರು: ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯನ್ನು ಮಣಿಸಿ ಆಮ್ ಆದ್ಮಿ ಪಾರ್ಟಿ (ಎಎಪಿ) ಗೆಲುವು ಸಾಧಿಸಿರುವುದು  ಬೆಂಗಳೂರು ಘಟಕದ  ಎಎಪಿ ಕಾರ್ಯಕರ್ತರ ಆತ್ಮವಿಶ್ವಾಸ ಹೆಚ್ಚಿಸಿದೆ.

ದೆಹಲಿಯ 250 ವಾರ್ಡ್‌ಗಳ ಪೈಕಿ 134ರಲ್ಲಿ ಎಎಪಿ ಗೆದ್ದು ಪಾಲಿಕೆ ಆಡಳಿತ ಚುಕ್ಕಾಣಿ ಹಿಡಿಯಲಿದೆ, ಹೀಗಾಗಿ ಶೇಷಾದ್ರಿಪುರಂ ಬಳಿಯ ಕುಮಾರಕೃಪಾದಲ್ಲಿರುವ ಪಕ್ಷದ ಕೇಂದ್ರ ಕಚೇರಿಯಲ್ಲಿ ಎಎಪಿ ಕಾರ್ಯಕರ್ತರು ಜಮಾಯಿಸಿ ವಿಜಯೋತ್ಸವ ಮೆರವಣಿಗೆ ನಡೆಸಿದರು.

ಬೆಂಗಳೂರು ನಗರ ಮಾಜಿ ಪೊಲೀಸ್ ಕಮಿಷನರ್ ಹಾಗೂ ಆಪ್ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಮಾತನಾಡಿ, ಬಿಬಿಎಂಪಿ ಚುನಾವಣೆಯನ್ನು ಎದುರಿಸಲು ಆಪ್ ಸಿದ್ಧವಿದೆ, ಆದರೆ ಆಡಳಿತ ಪಕ್ಷವು ಚುನಾವಣೆಯನ್ನು ಘೋಷಿಸಲು ಹೆದರುತ್ತಿದೆ, ತಮ್ಮ ಪಕ್ಷ ಸೋಲುತ್ತದೆ ಎಂಬ ಭಯದಿಂದ ಪಾಲಿಕೆ ಚುನಾವಣೆ ನಡೆಸಲು ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ಆರೋಪಿಸಿದ್ದಾರೆ.

"ವಾಸ್ತವವಾಗಿ, ಆಡಳಿತಾರೂಢ ಬಿಜೆಪಿ ಮತ್ತು ಕಾಂಗ್ರೆಸ್ ಎರಡರಿಂದಲೂ ಬೆಂಗಳೂರಿನ ಎಲ್ಲಾ 27 ಶಾಸಕರು ಮತದಾರರ ಡೇಟಾ ಟ್ಯಾಂಪರಿಂಗ್ ಹಗರಣವು ಚುನಾವಣೆಯನ್ನು ವಿಳಂಬಗೊಳಿಸುತ್ತದೆ ಎಂಬ ಕಾರಣಕ್ಕೆ ಸಂತೋಷಪಟ್ಟಿದ್ದಾರೆ.

ಶೀಘ್ರವಾಗಿ ಚುನಾವಣೆಗಳನ್ನು ನಡೆಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು. ಪ್ರವಾಹವನ್ನು ನಿಭಾಯಿಸಲು ರಸ್ತೆಗಳು, ನೈರ್ಮಲ್ಯ ಮತ್ತು ಚರಂಡಿಗಳಂತಹ ಉತ್ತಮ ನಾಗರಿಕ ಸೌಲಭ್ಯಗಳಿಂದ ನಾಗರಿಕರು ವಂಚಿತರಾಗುತ್ತಿದ್ದಾರೆ ಎಂದು ಅವರು ಹೇಳಿದರು.

2020ರಲ್ಲಿ ನಕಲಿ ಮತದಾರರನ್ನು ಸೇರಿಸಲಾಗಿತ್ತು, ಮತದಾರರ ಡೇಟಾ ತಿರುಚುವಿಕೆಗೂ ಬಿಜೆಪಿಗೆ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್ ಆರ್ ರಮೇಶ್ ಭಾಸ್ಕರ್ ರಾವ್ ವಿರುದ್ಧ ಹರಿ ಹಾಯ್ದಿದ್ದಾರೆ.

ಬೆಂಗಳೂರಿನ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಬೇರೆ ರಾಜ್ಯಗಳ ಮತದಾರರು ಸೇರಿದಂತೆ ಸುಮಾರು 1.5 ಲಕ್ಷ ಮತದಾರರನ್ನು ಪಟ್ಟಿಗೆ ಸೇರಿಸಲಾಗಿತ್ತು. ನನ್ನ ದೂರಿನ ನಂತರ ಹಲವು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಬಿಬಿಎಂಪಿ ಚುನಾವಣೆ ಎದುರಿಸಲು ಬಿಜೆಪಿ ಸಿದ್ಧವಾಗಿದೆ. ಮೊದಲೇ ಪೇಜ್ ಕಮಿಟಿಯನ್ನೂ ನೇಮಿಸಿ ಪಕ್ಷವನ್ನು ತಳಮಟ್ಟದಿಂದ ಕಟ್ಟುವ ಕೆಲಸ ಮಾಡಿದ್ದು, ಯಾವಾಗ ಚುನಾವಣೆ ನಡೆದರೂ ಗೆಲ್ಲುತ್ತೇವೆ,ಎಂದು ರಮೇಶ್ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com