ಕಾಂಗ್ರೆಸ್ ಮುಖಂಡರಾದ ಪರಮೇಶ್ವರ ನಾಯ್ಕ್, ಎಚ್.ಕೆ.ಮಹದೇವಪ್ಪ, ಸತೀಶ್ ಜಾರಕಿಹೊಳಿ, ಡಾ.ಜಿ.ಪರಮೇಶ್ವರ, ಕಾ.ಮುನಿಯಪ್ಪ
ಕಾಂಗ್ರೆಸ್ ಮುಖಂಡರಾದ ಪರಮೇಶ್ವರ ನಾಯ್ಕ್, ಎಚ್.ಕೆ.ಮಹದೇವಪ್ಪ, ಸತೀಶ್ ಜಾರಕಿಹೊಳಿ, ಡಾ.ಜಿ.ಪರಮೇಶ್ವರ, ಕಾ.ಮುನಿಯಪ್ಪ

ಐಕ್ಯತಾ ಸಮಾವೇಶ ಮೂಲಕ ಎಸ್‌ಸಿ/ಎಸ್‌ಟಿ ಸಮುದಾಯಗಳ ಮೇಲೆ ಗಮನಹರಿಸಲು ಕಾಂಗ್ರೆಸ್ ಮುಂದು!

ಎಸ್‌ಸಿ/ಎಸ್‌ಟಿ ಮೀಸಲಾತಿಯನ್ನು ಶೇ.6 ರಷ್ಟು ಹೆಚ್ಚಿಸಿದ ಲಾಭವನ್ನು ಆಡಳಿತಾರೂಢ ಬಿಜೆಪಿ ಪಡೆಯಲು ಮುಂದಾಗಿದ್ದು, ಇದನ್ನು ತಡೆಯುವ ಉದ್ದೇಶದಿಂದ ಕಾಂಗ್ರೆಸ್ ನಾಯಕತ್ವವು ಜನವರಿ 8 ರಂದು ಚಿತ್ರದುರ್ಗದಲ್ಲಿ ಎಸ್‌ಸಿ/ಎಸ್‌ಟಿ ಸಮುದಾಯಗಳನ್ನು ಕೇಂದ್ರೀಕರಿಸುವ 'ಐಕ್ಯತಾ ಸಮಾವೇಶ'ವನ್ನು ನಡೆಸಲು ಮುಂದಾಗಿದೆ.
Published on

ಬೆಂಗಳೂರು: ಎಸ್‌ಸಿ/ಎಸ್‌ಟಿ ಮೀಸಲಾತಿಯನ್ನು ಶೇ.6 ರಷ್ಟು ಹೆಚ್ಚಿಸಿದ ಲಾಭವನ್ನು ಆಡಳಿತಾರೂಢ ಬಿಜೆಪಿ ಪಡೆಯಲು ಮುಂದಾಗಿದ್ದು, ಇದನ್ನು ತಡೆಯುವ ಉದ್ದೇಶದಿಂದ ಕಾಂಗ್ರೆಸ್ ನಾಯಕತ್ವವು ಜನವರಿ 8 ರಂದು ಚಿತ್ರದುರ್ಗದಲ್ಲಿ ಎಸ್‌ಸಿ/ಎಸ್‌ಟಿ ಸಮುದಾಯಗಳನ್ನು ಕೇಂದ್ರೀಕರಿಸುವ 'ಐಕ್ಯತಾ ಸಮಾವೇಶ'ವನ್ನು ನಡೆಸಲು ಮುಂದಾಗಿದೆ.

ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಗೆ ಸಾಥ್ ನೀಡಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಈ ಸಮಾವೇಶದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ಈ ಸಮುದಾಯಗಳಿಗೆ ಸಾಕಷ್ಟು ಕೊಡುಗೆಗಳನ್ನು ನೀಡಿದೆ ಎಂಬುದರ ಕುರಿತು ಜಾಗೃತಿ ಮೂಡಿಸಲು ಮತ್ತು ಪಕ್ಷವು ಅವರೊಂದಿಗೆ ಇದೆ ಎಂದು ಅವರಿಗೆ ಭರವಸೆ ನೀಡುವುದು ಈ ಸಮಾವೇಶದ ಉದ್ದೇಶವಾಗಿದೆ.  ಬಿಜೆಪಿಯ ಗಿಮಿಕ್‌ಗಳಿಗೆ ಸಮುದಾಯದ ಜನರು ದಾರಿ ತಪ್ಪಬಾರದು ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಬುಧವಾರ ಹೇಳಿದ್ದಾರೆ.

ಎಸ್‌ಸಿಗಳ ಕೋಟಾವನ್ನು ಶೇಕಡಾ 15 ರಿಂದ 17 ಕ್ಕೆ ಮತ್ತು ಎಸ್‌ಟಿಗಳ ಕೋಟಾವನ್ನು ಶೇಕಡಾ 3 ರಿಂದ 7 ಕ್ಕೆ ಹೆಚ್ಚಿಸಿದೆ ಎಂದು ಬಿಜೆಪಿ ಹೇಳಿಕೊಳ್ಳುತ್ತಿದೆ. ಆದರೆ ಕಾಂಗ್ರೆಸ್-ಜೆಡಿಎಸ್ ಆಡಳಿತದಲ್ಲಿ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ಸ್ಥಾಪಿಸಿದ್ದು ನಾವು. ಇದೀಗ ಮೀಸಲಾತಿ ಹೆಚ್ಚಿಸಿ ಲಾಭ ಪಡೆದುಕೊಳ್ಳಲು ಮುಂದಾಗಿರುವ ಬಿಜೆಪಿ, ಮೀಸಲಾತಿ ಹೆಚ್ಚಳವನ್ನು ಸಂವಿಧಾನದ 9ನೇ ಶೆಡ್ಯೂಲ್‌ನಲ್ಲಿ ಪರಿಚಯಿಸುವ ಮೂಲಕ ಅದಕ್ಕೆ ಕಾನೂನು ಚೌಕಟ್ಟನ್ನು ನೀಡಲಿ ಎಂದು ಸವಾಲು ಹಾಕಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದಲಿತ ಮುಖ್ಯಮಂತ್ರಿಗಾಗಿ ದಲಿತ ನಾಯಕತ್ವ ಪ್ರಬಲವಾದ ವಾದ ಮಂಡಿಸುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಸಮಾವೇಶದ ಬಳಿಕ ಪಕ್ಷದ ಹೈಕಮಾಂಡ್ ತೀರ್ಮಾನಗಳನ್ನು ಕೈಗೊಳ್ಳಬಹುದು ಎಂದು ಹೇಳಿದ್ದಾರೆ.

ಬೊಮ್ಮಾಯಿ ಸರ್ಕಾರ ಎಸ್‌ಸಿ/ಎಸ್‌ಟಿಗಳ ಜನಸಂಖ್ಯೆಗೆ ಅನುಗುಣವಾಗಿ ಅನುದಾನವನ್ನು ನೀಡಿಲ್ಲ, ಆದರೆ ಸಿದ್ದರಾಮಯ್ಯ ಸರ್ಕಾರ ಹೆಚ್ಚು ಹಂಚಿಕೆ ಮಾಡಿದೆ. “ನಂತರ, ಅಧಿಕಾರಿಗಳು ಮಂಜೂರು ಮಾಡಿದ ಹಣವನ್ನು ಖರ್ಚು ಮಾಡಲು ವಿಫಲವಾದರೆ ಅವರನ್ನು ಶಿಕ್ಷಿಸಲು ಕಾನೂನನ್ನು ತರಲಾಯಿತು. SC/ST ಗಳಿಗೆ ಗುತ್ತಿಗೆಗಳಲ್ಲಿ ಮೀಸಲಾತಿಯನ್ನು ನೀಡಲಾಯಿತು. ಆದರೆ ಬಿಜೆಪಿ ಸರ್ಕಾರವು ಈ ಎಲ್ಲಾ ಪ್ರಯತ್ನಗಳನ್ನು ನಿರಾಶೆಗೊಳಿಸಿತ್ತು. ಈ ವಿಚಾರವನ್ನು ಸಮಾವೇಶದಲ್ಲಿ ಪ್ರಸ್ತಾಪಿಸಲಾಗುತ್ತದೆ ಎಂದು ತಿಳಿಸಿದರು.

ವಿಎಸ್ ಉಗ್ರಪ್ಪ ಅವರು ಮಾತನಾಡಿ, ಶೇ 52ರಷ್ಟು ಎಸ್‌ಸಿ/ಎಸ್‌ಟಿ ಜನಸಂಖ್ಯೆ ಇರುವುದರಿಂದ ಚಿತ್ರದುರ್ಗದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಐದರಲ್ಲಿ ಗೆಲುವು ಸಾಧಿಸಿದೆ. “ಬಿಜೆಪಿ 101 ಉಪಜಾತಿಗಳನ್ನು ಎಸ್‌ಸಿ, 52 ಎಸ್‌ಟಿಗಳಲ್ಲಿ ವಿಭಜಿಸುತ್ತಿದೆ. ಎಲ್ಲರನ್ನೂ ಒಂದೇ ವೇದಿಕೆಯಡಿ ಒಗ್ಗೂಡಿಸುವ ಉದ್ದೇಶವನ್ನು ಈ ಸಮಾವೇಶ ಹೊಂದಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com