ಕಾಂಗ್ರೆಸ್ ಪಕ್ಷದ ಹಲವು ಶಾಸಕರು ಬಿಜೆಪಿ ಸೇರಲು ಸಿದ್ಧರಿದ್ದಾರೆ: ಸಚಿವ ಆರ್.ಅಶೋಕ್

ಗುಜರಾತಿನಲ್ಲಿ ಕಾಂಗ್ರೆಸ್ ಮತಗಳನ್ನು ಕಬಳಿಸಿದ ಆಮ್ ಆದ್ಮಿ ಪಕ್ಷ (ಎಎಪಿ) 2023ರ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲೂ ಅದೇ ಪಾತ್ರ ವಹಿಸಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಗುರುವಾರ ಹೇಳಿದ್ದಾರೆ.
ಆರ್. ಅಶೋಕ್
ಆರ್. ಅಶೋಕ್
Updated on

ಬೆಂಗಳೂರು: ಗುಜರಾತಿನಲ್ಲಿ ಕಾಂಗ್ರೆಸ್ ಮತಗಳನ್ನು ಕಬಳಿಸಿದ ಆಮ್ ಆದ್ಮಿ ಪಕ್ಷ (ಎಎಪಿ) 2023ರ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲೂ ಅದೇ ಪಾತ್ರ ವಹಿಸಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಗುರುವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಎಪಿ ಕಾಂಗ್ರೆಸ್ ಮತಗಳನ್ನು ಕಸಿದುಕೊಳ್ಳುವುದು ಹಲವಾರು ರಾಜ್ಯಗಳಲ್ಲಿ ನಡೆಯುತ್ತಿದೆ. ಎಎಪಿ 'ಕಾಂಗ್ರೆಸ್ ಮುಳುಗುವ ಪಕ್ಷ'ವಾಗಿ ಮಾರ್ಪಟ್ಟಿದೆ ಎಂದು ಹೇಳಿದರು.

ಹಾಲಿ ಶಾಸಕರು ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಕರ್ನಾಟಕದಲ್ಲಿ ಪಕ್ಷದ ಶೋಚನೀಯ ಸ್ಥಿತಿಯನ್ನು ಕಂಡು ಚಿಂತಾಕ್ರಾಂತರಾಗಿದ್ದಾರೆ. "ಅವರಲ್ಲಿ ಹಲವರು ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ ... ಅವರಿಗಿನ್ನೂ 20-30 ವರ್ಷಗಳ ರಾಜಕೀಯ ಜೀವನವಿದೆ. ಇದೀಗ ಆ ನಾಯಕರು ಕಾಂಗ್ರೆಸ್ ತೊರೆದು ಬಿಜೆಪಿ ಸೇರುವ ಮನಸ್ಸು ಮಾಡಿದ್ದಾರೆ ಎಂದು ಹೇಳಿದರು.

ಇದೇ ವೇಳೆ ಕಾಂಗ್ರೆಸ್‌ನ್ನು ನಾಯಕತ್ವ ಇಲ್ಲದ ಪಕ್ಷ ಎಂದು ಅಶೋಕ್ ಅವರು, ಕಾಂಗ್ರೆಸ್ ಸ್ಥಾನಕ್ಕೆ ಎಎಪಿಯಂತಹ ಪಕ್ಷಗಳು ಬರಲಿವೆ ಎಂದು ತಿಳಿಸಿದರು,

ಸೋನಿಯಾ ಗಾಂಧಿ ಸ್ವಂತ ಸಮಸ್ಯೆಗಳಿಂದ ಬಳಲುತ್ತಿದ್ದಾರೆ, ರಾಹುಲ್ ಗಾಂಧಿಯನ್ನು ಬಲವಂತವಾಗಿ ಕರೆತಂದಿದ್ದಾರೆ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ವಯಸ್ಸಿಲ್ಲ. ಒಂದು ವೇಳೆ ರಾಹುಲ್ ಅವರ ಭಾರತ್ ಜೋಡೋ ಯಾತ್ರೆ ಪಕ್ಷದ ಪರವಾಗಿ ಕೆಲಸ ಮಾಡಿದ್ದರೆ ಅದು ಗುಜರಾತ್ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಪ್ರತಿಫಲಿಸುತ್ತಿತ್ತು. ಗಡ್ಡ ತೋರಿಸುವ ಫಲಿತಾಂಶವಷ್ಟೇ ಬಂದಿದೆ ಎಂದು ಲೇವಡಿ ಮಾಡಿದರು.

ಬಳಿಕ ಗುಜರಾತ್ ಚುನಾವಣಾ ಫಲಿತಾಂಶವು ಕರ್ನಾಟಕದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂಬ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿ,"ಗುಜರಾತ್ ಪಾಕಿಸ್ತಾನದಲ್ಲಿದೆಯೇ ಅಥವಾ ಬಾಂಗ್ಲಾದೇಶದಲ್ಲಿದೆಯೇ?" ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com