ಸಿದ್ದರಾಮಯ್ಯ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ, ಪಕ್ಷ ಸೂಚಿಸಿದರೆ ಅವರ ವಿರುದ್ಧ ಸ್ಪರ್ಧಿಸುತ್ತೇನೆ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್‌ನ ಸಿದ್ದರಾಮಯ್ಯ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ, ಅವರ ವಿರುದ್ಧ ಕಣಕ್ಕಿಳಿಯುವಂತೆ ಪಕ್ಷ ಸೂಚಿಸಿದರೆ ನಾನು ಸಿದ್ಧವಿದ್ದೇನೆ' ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ಬಿ.ವೈ. ವಿಜಯೇಂದ್ರ
ಬಿ.ವೈ. ವಿಜಯೇಂದ್ರ

ಮೈಸೂರು: ರಾಜ್ಯದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಎಲ್ಲಾ ರಾಜಕೀಯ ಪಕ್ಷದ ನಾಯಕರು ಸಿದ್ಧತೆ ಮಾಡಿಕೊಳ್ಳುತ್ತಿದ್ದು, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕ್ಷೇತ್ರದ ಹುಡುಕಾಟದಲ್ಲಿ ತೊಡಗಿದ್ದಾರೆ. ಕಳೆದ ಬಾರಿ ಬಾದಾಮಿಯಿಂದ ಸ್ಪರ್ಧಿಸಿದ್ದ ಅವರು ಈ ಬಾರಿ ಯಾವ ಕ್ಷೇತ್ರವನ್ನು ಆಯ್ಕೆಮಾಡಿಕೊಳ್ಳಲಿದ್ದಾರೆ ಎಂಬ ಬಗ್ಗೆ ಚರ್ಚೆಗಳು ಶುರುವಾಗಿವೆ.

ಹೀಗಿರುವಾಗ, ಕಾಂಗ್ರೆಸ್‌ನ ಸಿದ್ದರಾಮಯ್ಯ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ, ಪಕ್ಷ ಸೂಚಿಸಿದರೆ ಅವರ ವಿರುದ್ಧವೇ ಕಣಕ್ಕಿಳಿಯಲು ನಾನು ಸಿದ್ಧವಿದ್ದೇನೆ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಪಕ್ಷ ನನಗೆ ಯಾವುದೇ ಸವಾಲು ಕೊಟ್ಟರೂ ಅದನ್ನು ನಿಭಾಯಿಸುತ್ತೇನೆ.‌ ಪಕ್ಷದ ತೀರ್ಮಾನವೇ ಅಂತಿಮ. ನಾನು ವರುಣಾ ಮಾತ್ರವಲ್ಲ ಎಲ್ಲಾ ಕ್ಷೇತ್ರಗಳಲ್ಲೂ ಪಕ್ಷ ಸಂಘಟನೆ ಮಾಡುತ್ತಿದ್ದೇನೆ. ಹಳೇ ಮೈಸೂರು ಭಾಗದಲ್ಲಿ ಪಕ್ಷವು ಹೆಚ್ಚು ಸ್ಥಾನ ಪಡೆಯಲು ಹೋರಾಟ ಮಾಡುತ್ತಿದ್ದೇವೆ. ಸಂಘಟನೆ ಬಲಪಡಿಸುತ್ತಿದ್ದೇವೆ' ಎಂದರು.

ನರೇಂದ್ರ ಮೋದಿ ಎಂಬುದು ಕೇವಲ ಅಲೆ ಅಲ್ಲ, ಅದೊಂದು ಸುನಾಮಿ. ಕಾಂಗ್ರೆಸ್‌ನವರಿಗೆ ಇದು ಇನ್ನೂ ಅರ್ಥವಾಗಿಲ್ಲ. ಆ ಪಕ್ಷದವರು ಭ್ರಮೆಯಲ್ಲಿದ್ದಾರೆ. ಹೀಗಾಗಿಯೇ, ಗುಜರಾತ್ ಚುನಾವಣೆಯ ಫಲಿತಾಂಶದ ಪರಿಣಾಮ ರಾಜ್ಯದ ಮೇಲಾಗುವುದಿಲ್ಲ ಎಂದು ಹೇಳುತ್ತಿದೆ. ಮುಂಬರುವ ಚುನಾವಣೆ ನಂತರ ಕಾಂಗ್ರೆಸ್‌ಗೆ ಉತ್ತರ‌ ಸಿಗಲಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com