ಜನಾರ್ದನ ರೆಡ್ಡಿ ಹೊಸ ಪಕ್ಷ ಕಟ್ಟುವುದಿಲ್ಲ: ಕಂದಾಯ ಸಚಿವ ಆರ್. ಅಶೋಕ

ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರೊಂದಿಗೆ ಈಗಾಗಲೇ ಮಾತನಾಡಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಬಿಜೆಪಿ ತೊರೆದು ಸ್ವಂತ ಪಕ್ಷವನ್ನು ಕಟ್ಟುವುದಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ ಶನಿವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಆರ್ ಅಶೋಕ್
ಆರ್ ಅಶೋಕ್

ತುಮಕೂರು: ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರೊಂದಿಗೆ ಈಗಾಗಲೇ ಮಾತನಾಡಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಬಿಜೆಪಿ ತೊರೆದು ಸ್ವಂತ ಪಕ್ಷವನ್ನು ಕಟ್ಟುವುದಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ ಶನಿವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಗಣಿ ಉದ್ಯಮಿಯಾಗಿರುವ ರೆಡ್ಡಿ ಅವರು ಪಕ್ಷ ಸ್ಥಾಪಿಸಿ 2023ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದ್ದಾರೆ ಎಂಬ ಗುಸುಗುಸು ರಾಜಕೀಯ ಪಡಸಾಲೆಯಲ್ಲಿ ಕೇಳಿಬಂದಿದೆ.

'ಜನಾರ್ಧನ ರೆಡ್ಡಿ ಅವರು ಬಿಜೆಪಿ ತೊರೆದು ಸ್ವಂತ ಪಕ್ಷ ಕಟ್ಟುವುದಿಲ್ಲ. ಶ್ರೀರಾಮುಲು ರೆಡ್ಡಿ ಜೊತೆ ಮಾತನಾಡಿದ್ದಾರೆ. ಅವರು ಇನ್ನು ಮುಂದೆ ಯಾವುದೇ ಗೊಂದಲ ಸೃಷ್ಟಿಸುವುದಿಲ್ಲ ಎಂದು ನಾನು ಭಾವಿಸುತ್ತೇನೆ' ಎಂದು ಅವರು ಸಿರಾದಲ್ಲಿ ಹೊಸ ಸಬ್ ರಿಜಿಸ್ಟ್ರಾರ್ ಕಚೇರಿಗೆ ಶಂಕುಸ್ಥಾಪನೆ ಮಾಡಿದ ನಂತರ ಸುದ್ದಿಗಾರರಿಗೆ ತಿಳಿಸಿದರು.

'ಕರ್ನಾಟಕ ಕಾಂಗ್ರೆಸ್‌ನಲ್ಲಿ ಗ್ರೂಪಿಸಂ ಇದೆ. ಕೆಪಿಸಿಸಿಯಲ್ಲಿನ ಆಂತರಿಕ ಕಚ್ಚಾಟದಿಂದ ಡಿಕೆ ಶಿವಕುಮಾರ್‌ಗೆ ಹಿನ್ನಡೆಯಾಗಿದೆ. ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ ಅವರ ಬೆಂಬಲಿಗರು ದಲಿತರು ಸಿಎಂ ಆಗಬೇಕೆಂದು ಬಯಸುತ್ತಿದ್ದಾರೆ... ಸಿದ್ದರಾಮಯ್ಯ ಬೆಂಬಲಿಗರು ಕುರುಬ ಕಾರ್ಡ್‌ ಅನ್ನು ಪ್ಲೇ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

'2013ರ ಚುನಾವಣೆಯಲ್ಲಿ ಸಿದ್ದರಾಮಯ್ಯನವರ ತಂಡ ಡಾ. ಜಿ ಪರಮೇಶ್ವರ ಅವರನ್ನು ಸೋಲಿಸಿದ್ದರಿಂದಲೇ, ಸಿದ್ದರಾಮಯ್ಯ ಅವರಿಗೆ ಸುರಕ್ಷಿತ ಸ್ಥಾನ ಸಿಗುವುದು ಕಷ್ಟವಾಗಿದೆ. 2023ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಸೋಲುತ್ತಾರೆ ಎಂಬ ನಿರೀಕ್ಷೆಯಲ್ಲಿ ಶಿವಕುಮಾರ್ ಸಿಎಂ ಆಗುವ ಕನಸು ಕಾಣತೊಡಗಿದ್ದಾರೆ. ಕಾಂಗ್ರೆಸ್‌ನಲ್ಲಿನ ನಾಯಕರೇ ಒಬ್ಬರನ್ನೊಬ್ಬರು ಸೋಲಿಸುತ್ತಾರೆ' ಎಂದು ಅವರು ವಿವರಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com