ಕಲಬುರಗಿಯಲ್ಲಿ ಮಲ್ಲಿಕಾರ್ಜುನ ಖರ್ಗೆ.
ಕಲಬುರಗಿಯಲ್ಲಿ ಮಲ್ಲಿಕಾರ್ಜುನ ಖರ್ಗೆ.

2023 ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ಒಗ್ಗಟ್ಟಿನಿಂದ ಕೆಲಸ ಮಾಡಿ: ರಾಜ್ಯದ ನಾಯಕರಿಗೆ ಖರ್ಗೆ ಸಂದೇಶ

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಗೆಲ್ಲಿಸಲು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿದ್ದಾರೆ.
Published on

ಕಲಬುರಗಿ: 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಗೆಲ್ಲಿಸಲು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿದ್ದಾರೆ.

ಕಲಬುರಗಿಗೆ ತಮ್ಮ ಚೊಚ್ಚಲ ಭೇಟಿ ನೀಡಿದ ಖರ್ಗೆಯವರಿಗೆ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಜಿಲ್ಲಾ ಕಾಂಗ್ರೆಸ್ ಸಮಿತಿಗಳು ಅದ್ಧೂರಿ ಸ್ವಾಗತ ಮಾಡಿದವು. ಬಳಿಕ ಮಾತನಾಡಿದ ಅವರು, ರಾಜ್ಯದ ನಾಯಕರು ಯಾರು ಮುಖ್ಯಮಂತ್ರಿ ಅಥವಾ ಸಚಿವರಾಗುತ್ತಾರೆ ಎಂಬುದರ ಮೇಲೆ ಗಮನಹರಿಸಬಾರದು. ಚುನಾವಣೆಯಲ್ಲಿ ಹೇಗೆ ಗೆಲ್ಲಬೇಕು ಎಂಬುದರ ಬಗ್ಗೆ ಗಮನಹರಿಸಬೇಕೆಂದು ಹೇಳಿದರು.

ಕಾಂಗ್ರೆಸ್ ಹೈಕಮಾಂಡ್ ಯಾರು ಮುಖ್ಯಮಂತ್ರಿಯಾಗಬೇಕು ಎಂಬುದನ್ನು ನಿರ್ಧರಿಸುತ್ತೇವೆ. ಶ್ರಮವಹಿಸಿ ದುಡಿಯುವುದು, ಇಡೀ ರಾಜ್ಯಕ್ಕೆ ಭೇಟಿ ನೀಡಿ ಪ್ರಸ್ತುತ ಬಿಜೆಪಿಯ ದುರಾಡಳಿತ, ಭ್ರಷ್ಟಾಚಾರದ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡುವುದು ನಮ್ಮ ಕರ್ತವ್ಯ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಏನು ಮಾಡುತ್ತದೆ ಎಂಬುದನ್ನು ಜನರಿಗೆ ತಿಳಿಸಿ ಪಕ್ಷದ ನಾಯಕರಿಗೆ ತಿಳಿಸಿದರು.

ಇದೇ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ 10 ಅಂಶಗಳ ಪ್ಯಾಕೇಜ್ ಅನ್ನು ಖರ್ಗೆ ಘೋಷಿಸಿದರು.

ಪ್ರದೇಶದ ಅಭಿವೃದ್ಧಿ ಕಾರ್ಯಗಳಿಗೆ ಪ್ರತಿ ವರ್ಷ 5,000 ಕೋಟಿ ರೂ.ಗಳನ್ನು ಒದಗಿಸುವುದು, ಪ್ರದೇಶಕ್ಕೆ ಪ್ರತ್ಯೇಕವಾಗಿ ಹೊಸ ಕೈಗಾರಿಕಾ ನೀತಿ, ಐದು ವರ್ಷಗಳೊಳಗೆ 1 ಲಕ್ಷ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದು, ಎಲ್ಲಾ ನೀರಾವರಿ ಯೋಜನೆಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವುದು, ಸಮಿತಿಯ ರಚನೆಯನ್ನು ಈ ಪ್ಯಾಕೇಜ್ ಒಳಗೊಂಡಿದೆ.

ಚುನಾವಣಾ ಸಂದರ್ಭದಲ್ಲಿ ನೀಡಿದ ಭರವಸೆಗಳನ್ನು ಅನುಷ್ಠಾನಗೊಳಿಸುವುದು, ಈ ಪ್ರದೇಶದಲ್ಲಿ ಐಐಟಿ, ಎಐಎಂಎಸ್ ಮತ್ತು ಇತರ ರಾಷ್ಟ್ರೀಯ ಮಟ್ಟದ ಸಂಸ್ಥೆಗಳನ್ನು ಸ್ಥಾಪಿಸಲು ಕೇಂದ್ರದ ಮೇಲೆ ಒತ್ತಡ ತರುವುದು, ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಮಹಿಳೆಯರಿಗೆ ಪ್ರತ್ಯೇಕ ಪದವಿ ಕಾಲೇಜುಗಳು, ಐದು ವರ್ಷಗಳಲ್ಲಿ ಎಲ್ಲಾ ವಸತಿ ರಹಿತ ಕುಟುಂಬಗಳಿಗೆ ಮನೆ, ಸಾಕಷ್ಟು ಅನುದಾನವನ್ನು ಒದಗಿಸುವುದು. ಎಲ್ಲಾ ಗ್ರಾಮ ಪಂಚಾಯತ್‌ಗಳು ಮತ್ತು ಈ ಪ್ರದೇಶವನ್ನು ರಾಜ್ಯದ ಇತರ ಭಾಗಗಳಿಗೆ ಸರಿಸಮನಾಗಿ ತರಲು ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com