ಬೆಂಗಳೂರು: ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಶಾಸಕ ವಿ.ಎಸ್ ಪಾಟೀಲ್

ಬಿಜೆಪಿ ಮಾಜಿ ಶಾಸಕ ವಿ.ಎಸ್.ಪಾಟೀಲ್ ಬೆಂಗಳೂರಿನಲ್ಲಿ ಗುರುವಾರ ಕಾಂಗ್ರೆಸ್  ಪಕ್ಷ  ಸೇರ್ಪಡೆಗೊಂಡಿದ್ದಾರೆ.
ಕಾಂಗ್ರೆಸ್ ಗೆ ಸೇರ್ಪಡೆಯಾದ ಮಾಜಿ ಶಾಸಕ ವಿಎಸ್ ಪಾಟೀಲ್
ಕಾಂಗ್ರೆಸ್ ಗೆ ಸೇರ್ಪಡೆಯಾದ ಮಾಜಿ ಶಾಸಕ ವಿಎಸ್ ಪಾಟೀಲ್

ಬೆಂಗಳೂರು: ಬಿಜೆಪಿ ಮಾಜಿ ಶಾಸಕ ವಿ.ಎಸ್.ಪಾಟೀಲ್ ಬೆಂಗಳೂರಿನಲ್ಲಿ ಗುರುವಾರ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ವಿರುದ್ಧ ಯಲ್ಲಾಪುರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಯುವುದು ಬಹುತೇಕ ಅಂತಿಮಗೊಂಡಿದೆ.

ಗುರುವಾರ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹಾಗೂ ಹಿರಿಯ ಮುಖಂಡ ಆರ್.ವಿ. ದೇಶಪಾಂಡೆ ಅವರು ಪಕ್ಷದ ಧ್ವಜ ನೀಡುವ ಮೂಲಕ ವಿ.ಎಸ್. ಪಾಟೀಲ್ ಹಾಗೂ ಶ್ರೀನಿವಾಸ್ ಭಟ್ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.

ಈ ಸಂಧರ್ಭದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ವಿ.ಎಸ್. ಪಾಟೀಲ್ ಅವರು ನಮ್ಮ ಜತೆ ವಿಧಾನಸಭೆಯಲ್ಲಿ ಕೆಲಸ ಮಾಡಿದ್ದಾರೆ. ಅಬ್ದುಲ್ ಕಲಾಂ ಅವರು ರಾಷ್ಟ್ರಪತಿ ಆಗಿದ್ದ ಸಂದರ್ಭದಲ್ಲಿ ಇವರಿಗೆ ಅತ್ಯುತ್ತಮ ಶಾಸಕ ಎಂಬ ಪ್ರಶಸ್ತಿ ನೀಡಿ, ಗೌರವಿಸಿದ್ದರು. ಅವರ ತಂದೆ ಕೂಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಇವರು ಕೂಡ ಪಕ್ಷದ ವಿವಿಧ ಸಂಘಟನೆಗಳಲ್ಲಿ ಕೆಲಸ ಮಾಡಿದ್ದರು. ಮಧ್ಯೆ ಬಿಜೆಪಿ ಸೇರಿ, ಸ್ಪರ್ಧಿಸಿದ್ದರು.

ಆಪರೇಷನ್ ಕಮಲದಲ್ಲಿ ನಮ್ಮ ಶಾಸಕರು ಹೋದ ನಂತರ ಆಯಾ ಕ್ಷೇತ್ರದ ಬಹುತೇಕ ಬಿಜೆಪಿ ನಾಯಕರು ನಮ್ಮ ಪಕ್ಷಕ್ಕೆ ಒಬ್ಬೊಬ್ಬರಾಗಿ ಬರುತ್ತಿದ್ದಾರೆ. ಇತ್ತೀಚೆಗೆ ಹಿರೇಕೆರೂರು ನಾಯಕರು ಸೇರ್ಪಡೆಯಾಗಿದ್ದಾರೆ. ಬಿಜೆಪಿಯ ರಾಜ್ಯ ಕಾರ್ಯಕಾರಣಿ ಸಮಿತಿಯಲ್ಲಿ ಕೆಲಸ ಮಾಡಿದ್ದಾರೆ. ಸಹಕಾರ ಸಂಘಗಳಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. 2013 ಹಾಗೂ 2018 ರಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com