ರಾಹುಲ್ ಮಾಡುತ್ತಿರುವುದು ಭಾರತ್ ಜೋಡೋ ಯಾತ್ರೆ ಅಲ್ಲ, ಪ್ರಾಯಶ್ಚಿತ್ತ ಯಾತ್ರೆ: ಜೆಪಿ ನಡ್ಡಾ

ತಮ್ಮ ಪೂರ್ವಜರು ಮತ್ತು ಕಾಂಗ್ರೆಸ್ ಭಾರತವನ್ನು ವಿಭಜಿಸಿದ್ದರಿಂದ ಪಶ್ಚಾತ್ತಾಪ ಪಡುವ ಸಲುವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆ ಕೈಗೊಂಡಿದ್ದಾರೆಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರು ವ್ಯಂಗ್ಯವಾಡಿದ್ದಾರೆ.
ಕೈಗೊಂಡಿದ್ದಾರೆಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ
ಕೈಗೊಂಡಿದ್ದಾರೆಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ
Updated on

ಕೊಪ್ಪಳ: ತಮ್ಮ ಪೂರ್ವಜರು ಮತ್ತು ಕಾಂಗ್ರೆಸ್ ಭಾರತವನ್ನು ವಿಭಜಿಸಿದ್ದರಿಂದ ಪಶ್ಚಾತ್ತಾಪ ಪಡುವ ಸಲುವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆ ಕೈಗೊಂಡಿದ್ದಾರೆಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರು ವ್ಯಂಗ್ಯವಾಡಿದ್ದಾರೆ.

ಕೊಪ್ಪಳದಲ್ಲಿ ಬಿಜೆಪಿ ಜಿಲ್ಲಾ ಪಕ್ಷದ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾಂಗ್ರೆಸ್ ದೇಶ ವಿರೋಧಿ ಅಂಶಗಳನ್ನು ಬೆಂಬಲಿಸುತ್ತದೆ. ಆದರೆ ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ದೇಶವು ಮೊದಲಿಗಿಂತ ಸುರಕ್ಷಿತವಾಗಿದೆ ಎಂದು ಹೇಳಿದರು.

“ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ತೆಗೆದುಹಾಕುವ ನಿರ್ಧಾರವನ್ನು ಪ್ರಧಾನಿ ಮೋದಿಯವರು ತೆಗೆದುಕೊಂಡರು. ಭಾರತವನ್ನು ವಿಭಜಿಸುವ ಬಗ್ಗೆ ಮಾತನಾಡುವವರು ರಾಹುಲ್ ಗಾಂಧಿಯವರೊಂದಿಗೆ ಇದ್ದಾರೆ. ಜೆಎನ್‌ಯುನಲ್ಲಿ ದೇಶ ಒಡೆಯುವ ಮಾತುಗಳನ್ನಾಡುತ್ತಾರೆ... ಅಫ್ಜಲ್ ಗುರುವನ್ನು ಹೊಗಳಿ ಈಗ ಕಾಂಗ್ರೆಸ್ ರ್ಯಾಲಿಗೆ ಸೇರಿಕೊಂಡಿದ್ದಾರೆ. ದೇಶವನ್ನು ವಿಭಜಿಸಲು ಯತ್ನಿಸುತ್ತಿರುವ ಜನರೊಂದಿಗೆ ಕಾಂಗ್ರೆಸ್ ಇದೆ ಎಂದು ತಿಳಿಸಿದರು.

ಕರ್ನಾಟಕದಲ್ಲಿ 7 ಲಕ್ಷ ಕುಟುಂಬಗಳು ವಿದ್ಯಾನಿಧಿ ಯೋಜನೆಯಿಂದ ಪ್ರಯೋಜನ ಪಡೆದಿವೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದ ಮೊದಲ ರಾಜ್ಯವೂ ಕರ್ನಾಟಕವಾಗಿದೆ. ಬೊಮ್ಮಾಯಿ ಸರ್ಕಾರ ಮಧ್ಯಮ ವರ್ಗದವರಿಗೆ ಹಲವಾರು ಕಲ್ಯಾಣ ಯೋಜನೆಗಳನ್ನು ಒದಗಿಸಿದೆ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಯೋಜಿಸಿದ ಎಲ್ಲಾ ಯೋಜನೆಗಳನ್ನು ಬೊಮ್ಮಾಯಿ ಕೈಗೆತ್ತಿಕೊಳ್ಳುತ್ತಿದ್ದಾರೆ. ಬಿಜೆಪಿ ಯಾವಾಗಲೂ ಯುವಕರು, ದಲಿತರು ಮತ್ತು ರೈತರ ಪರವಾಗಿದೆ ಎಂದರು.

“ನಾವು ದೇಶಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಬಿಜೆಪಿ ಕಚೇರಿಗಳನ್ನು ಸ್ಥಾಪಿಸುತ್ತೇವೆ. ಬಿಜೆಪಿಗೆ ಪಕ್ಷ ಕುಟುಂಬವಿದ್ದಂತೆ ಆದರೆ, ಕಾಂಗ್ರೆಸ್‌ಗೆ ಕುಟುಂಬವೇ ಪಕ್ಷವಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com