ಡಿ.25ರಂದು ರಾಜಕೀಯ ಭವಿಷ್ಯ ಕುರಿತು ನಿರ್ಧಾರ ಪ್ರಕಟಿಸುವೆ: ಜನಾರ್ದನ ರೆಡ್ಡಿ

ಕಳೆದ ವಾರ ರಾಯಚೂರು ಜಿಲ್ಲೆಯ ಗಂಗಾವತಿಯಲ್ಲಿ ನೂತನ ಗೃಹ ಪ್ರವೇಶ ಮಾಡಿಕೊಂಡಾಗಿನಿಂದ ಮಾಜಿ ಸಚಿವ, ಬಳ್ಳಾರಿ ಗಣಿಧಣಿ ಜನಾರ್ದನ ರೆಡ್ಡಿಯವರ ಮುಂದಿನ ರಾಜಕೀಯ ನಡೆಯ ಬಗ್ಗೆ ಸಾಕಷ್ಟು ಊಹಾಪೋಹಗಳು ಕೇಳಿಬರುತ್ತಿವೆ.ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮನೆ ಮಾಡಿ ರಾಜಕೀಯದಲ್ಲಿ ಸೆಕೆಂಡ್ ಇನ್ನಿಂಗ್ಸ್ ಆರಂಭಿಸಿದ್ದಾರೆ.
ಗಾಲಿ ಜನಾರ್ದನ್ ರೆಡ್ಡಿ
ಗಾಲಿ ಜನಾರ್ದನ್ ರೆಡ್ಡಿ

ಬೆಂಗಳೂರು: ಕಳೆದ ವಾರ ರಾಯಚೂರು ಜಿಲ್ಲೆಯ ಗಂಗಾವತಿಯಲ್ಲಿ ನೂತನ ಗೃಹ ಪ್ರವೇಶ ಮಾಡಿಕೊಂಡಾಗಿನಿಂದ ಮಾಜಿ ಸಚಿವ, ಬಳ್ಳಾರಿ ಗಣಿಧಣಿ ಜನಾರ್ದನ ರೆಡ್ಡಿಯವರ ಮುಂದಿನ ರಾಜಕೀಯ ನಡೆಯ ಬಗ್ಗೆ ಸಾಕಷ್ಟು ಊಹಾಪೋಹಗಳು ಕೇಳಿಬರುತ್ತಿವೆ.
ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮನೆ ಮಾಡಿ ರಾಜಕೀಯದಲ್ಲಿ ಸೆಕೆಂಡ್ ಇನ್ನಿಂಗ್ಸ್ ಆರಂಭಿಸಿದ್ದಾರೆ. ಜನಾರ್ದನ ರೆಡ್ಡಿ ಮತ್ತೆ ಬಿಜೆಪಿ ಸೇರಲಿದ್ದಾರಾ? ಅಥವಾ ಹೊಸ ರಾಜಕೀಯ ಪಕ್ಷ ಆರಂಭಿಸಲಿದ್ದಾರಾ? ಎನ್ನುವ ಪ್ರಶ್ನೆಗಳ ಮೇಲೆ ಭಾರೀ ಚರ್ಚೆಗಳಾಗುತ್ತಿವೆ. ಇದರ ಮಧ್ಯೆ ರೆಡ್ಡಿ ಡಿಸೆಂಬರ್ 25ಕ್ಕೆ ಸುದ್ದಿಗೋಷ್ಠಿ ಕರೆದಿದ್ದು, ಮಹತ್ವದ ಘೋಷಣೆ ಮಾಡುವ ಸಾಧ್ಯತೆಗಳಿವೆ.

ನಾಡಿದ್ದು ಭಾನುವಾರ ಬೆಂಗಳೂರಿನ ಪಾರಿಜಾತ ಅಪಾರ್ಟ್​ಮೆಂಟ್​ನಲ್ಲಿ ರೆಡ್ಡಿ ಸುದ್ದಿಗೋಷ್ಠಿ ಕರೆದಿದ್ದು, ತಮ್ಮ ರಾಜಕೀಯ ನಿಲುವು ಬಗ್ಗೆ ಮಹತ್ವದ ಘೋಷಣೆ ಮಾಡುವ ಸಾಧ್ಯತೆಗಳಿವೆ. ಮತ್ತೊಂದೆಡೆ ಹೊಸ ಪಕ್ಷ ಘೋಷಣೆ ಮಾಡುತ್ತಾರೆಯೇ ಎನ್ನುವ ಕುತೂಹಲ ಮೂಡಿಸಿದೆ. ಇನ್ನು ಮುಖ್ಯವಾಗಿ ಮುಂದಿನ ಚುನಾವಣೆಯಲ್ಲಿ ತಾವು ಸ್ಪರ್ಧೆ ಮಾಡುವ ಕ್ಷೇತ್ರವನ್ನು ಸಹ ಘೋಷಣೆ ಮಾಡುತ್ತಾರಾ ಎನ್ನುವ ಕುತೂಹಲ ಸೃಷ್ಟಿಯಾಗಿದೆ.

ಡಿಸೆಂಬರ್ 25ರಂದು ರಾಜಕೀಯ ಭವಿಷ್ಯ ಬಗ್ಗೆ ತಿಳಿಸುವೆ: ಡಿಸೆಂಬರ್ 25ರಂದು ಸುದ್ದಿಗೋಷ್ಠಿಗೂ ಮುನ್ನ ರೆಡ್ಡಿ ಅವರು ವಿವಿಧ ಮಠಗಳಿಗೆ ಭೇಟಿ ನೀಡುತ್ತಿದ್ದಾರೆ. ಮಠಗಳು ಹಾಗೂ ಪ್ರಮುಖ ಮುಖಂಡರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ. ಮೊನ್ನೆ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನಿನ್ನೆ ಗದಗಿನ ಪುಟ್ಟರಾಜ ಗವಾಯಿಗಳ ಗದ್ದುಗೆ ದರ್ಶನ ಪಡೆದಿದ್ದಾರೆ. 

ಇಂದು ಮಸ್ಕಿ ಕ್ಷೇತ್ರದಲ್ಲಿ ರಾಯಚೂರು ಬಳ್ಳಾರಿ, ಕೊಪ್ಪಳ ವಿಜಯನಗರ ಭಾಗದ ಪ್ರಮುಖ ಮುಖಂಡರ ಸಭೆ ನಡೆಸಲಿದ್ದಾರೆ. ನಾಳೆ ಗಂಗಾವತಿ ಗ್ರಾಮ ದೇವತೆ ದುರ್ಗಾದೇವಿ ಜಾತ್ರೆಯಲ್ಲಿ ಭಾಗಿ ಮತ್ತು ಅಂದು ಗಂಗಾವತಿಯಲ್ಲಿ ಪ್ರಮುಖ ಸಭೆ ನಡೆಸಲಿದ್ದಾರೆ. ಡಿ.25ರಂದು ಬೆಂಗಳೂರಿನ ಪಾರಿಜಾತ ಅಪಾರ್ಟ್​ಮೆಂಟ್​ನಲ್ಲಿ ಸುದ್ದಿಗೋಷ್ಠಿ ಮಾಡಲಿದ್ದು, ಈ ವೇಳೆ ತಮ್ಮ ರಾಜಕೀಯ ನಿಲುವು ಪ್ರಕಟಿಸುವುದಾಗಿ ಹೇಳಿದ್ದಾರೆ. 

ಸಾರ್ವಜನಿಕ ಬದುಕಿಗೆ ಬರಬೇಕು ಅಂತ ತೀರ್ಮಾನ ಮಾಡಿಯೇ ಓಡಾಡುತ್ತಿದ್ದೇನೆ. ಎಲ್ಲಾ ಮಠಗಳಿಗೂ ಭೇಟಿ ನೀಡುತ್ತಿದ್ದೇನೆ, ಸಾರ್ವಜನಿಕ ಬದುಕು ಪ್ರಾರಂಭಿಸಬೇಕಾದರೆ ಜನ ಆಶೀರ್ವಾದ ಬೇಕು. ಹೀಗಾಗಿ ಎಲ್ಲಾ ಕಡೆ ಹೋಗುತ್ತಿದ್ದೇನೆ. ಜಾತಿ, ಮತ ಭೇದ ಮಾಡದೆ ಪ್ರತಿಯೊಂದನ್ನು ಮಾಡಿ ತೋರಿಸಿದ್ದಾರೆ, ಅವರ ಮಾರ್ಗದರ್ಶನ ನಡೆಯಲು ಇಲ್ಲಿಗೆ ಬಂದಿದ್ದೇನೆ. ಇದೇ ತಿಂಗಳ 25ನೇ ತಾರೀಕು ಸುದ್ದಿಗೋಷ್ಠಿ ನಡೆಸಿ ಎಲ್ಲವನ್ನು ತಿಳಿಸುತ್ತೇನೆ. ಮಠದಲ್ಲಿ ರಾಜಕೀಯವನ್ನು ಮಾತನಾಡುವುದು ಸೂಕ್ತವಲ್ಲ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com