ವಿಧಾನಸಭೆ ಚುನಾವಣೆ: ಜನವರಿ ಮೊದಲ ವಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ- ರಾಮಲಿಂಗಾ ರೆಡ್ಡಿ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಆರು ತಿಂಗಳಿರುವಾಗಲೇ ರಾಜ್ಯದಲ್ಲಿ ಚುನಾವಣಾ ರಾಜಕೀಯ ರಂಗೇರಿದೆ. ಜೆಡಿಎಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ
ರಾಮಲಿಂಗಾ ರೆಡ್ಡಿ
ರಾಮಲಿಂಗಾ ರೆಡ್ಡಿ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಆರು ತಿಂಗಳಿರುವಾಗಲೇ ರಾಜ್ಯದಲ್ಲಿ ಚುನಾವಣಾ ರಾಜಕೀಯ ರಂಗೇರಿದೆ. ಜೆಡಿಎಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಕಾಂಗ್ರೆಸ್ ತನ್ನ ಪಟ್ಟಿಯನ್ನು ಜನವರಿ ವೇಳೆಗೆ ಬಿಡುಗಡೆ ಮಾಡುವ ಸಾಧ್ಯತೆಯಿದೆ.

2023 ರ ಚುನಾವಣೆಯಲ್ಲಿ ಸ್ಪರ್ಧಿಸಲು ಸಂಭಾವ್ಯ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಪಕ್ಷವು ಚುನಾವಣಾ ಸಮಿತಿಯನ್ನು ರಚಿಸಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಗುರುವಾರ ಹೇಳಿದ್ದಾರೆ. ಜನವರಿ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು. ಕಾಂಗ್ರೆಸ್ ದೊಡ್ಡ ಪಕ್ಷವಾಗಿದ್ದು, ಕಾಂಗ್ರೆಸ್ ಈ ಬಾರಿ ಅಧಿಕಾರಕ್ಕೆ ಬರಲಿದೆ ಎಂಬುದು ಎಲ್ಲರಿಗೂ ತಿಳಿದಿದೆ. ಹೀಗಾಗಿ ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಆದರೆ ಬಿಜೆಪಿ ಸೋಲುವುದು ನಿಶ್ಚಿತವಾಗಿದ್ದು, ಹೀಗಾಗಿ ಅಲ್ಲಿ ಆಕಾಂಕ್ಷಿಗಳು ಕಡಿಮೆ ಇದ್ದಾರೆ ಎಂದರು.

ಕಾಂಗ್ರೆಸ್ ಮುಖಂಡರನ್ನು ನಾಯಿಗಳಿಗೆ ಹೋಲಿಸಿರುವ ಬಿಜೆಪಿ ಮುಖಂಡರನ್ನು ಏನೆಂದು ಕರೆಯಬೇಕೋ ತಿಳಿಯುತ್ತಿಲ್ಲ. ನಾವಂತೂ ಅವರನ್ನು ನಾಯಿಗೆ ಹೋಲಿಸುವುದಿಲ್ಲ. ಕಾರಣ ನಾಯಿ ಅತ್ಯಂತ ನಿಯತ್ತಿನ ಪ್ರಾಣಿಯಾಗಿದೆ. ಹೀಗಾಗಿ ಅವರನ್ನು ಬೇರೆ ಪ್ರಾಣಿಗೆ ಹೋಲಿಸಬೇಕು. ಇವರಿಗೆ ಯಾವ ಪ್ರಾಣಿ ಸೂಕ್ತ ಎಂದು ನಂತರದ ದಿನಗಳಲ್ಲಿ ಹೇಳುತ್ತೇನೆ ಎಂದು ತಿಳಿಸಿದರು.

ಬಿಜೆಪಿ ನಾಯಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮಾತನ್ನು ತಿರುಚಿ ವಾಗ್ದಾಳಿ ಮಾಡುತ್ತಿದ್ದಾರೆ. ಆದರೆ, ಬಿಜೆಪಿ ಪೂರ್ವಜರಾದ ಆರೆಸ್ಸೆಸ್ಸ್ ಹಾಗೂ ವಿಶ್ವ ಹಿಂದೂ ಪರಿಷತ್ತಿನ ನಾಯಕರು ಬ್ರಿಟಿಷರ ಗುಲಾಮರಾಗಿದ್ದರು ಎಂದು ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com