ಮಂಡ್ಯ ಜನರಿಗೆ ಮಂಕುಬೂದಿ ಎರಚಲು ಅಮಿತ್ ಶಾ ವಿಫಲ ಪ್ರಯತ್ನ: ಕುಮಾರಸ್ವಾಮಿ ವಾಗ್ದಾಳಿ

ಮಂಡ್ಯದಲ್ಲಿಂದು 2023ರ ರಾಜ್ಯ ವಿಧಾನಸಭಾ ಚುನಾವಣೆಗೆ ರಣ ಕಹಳೆ ಊದಿದ ಬಿಜೆಪಿ ಚಾಣಕ್ಯ ಖ್ಯಾತಿಯ ಅಮಿತ್ ಶಾ, ಮಕ್ಮಲ್ ಟೋಪಿ ಹಾಕಲು ವ್ಯರ್ಥ ಪ್ರಯತ್ನ ಮಾಡುತ್ತಿದ್ದು, ಅವರ ಅತಿಯಾದ ಉತ್ಸಾಹ ಒಳ್ಳೆಯದಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ  ವಾಗ್ದಾಳಿ ನಡೆಸಿದ್ದಾರೆ.
ಅಮಿತ್ ಶಾ, ಕುಮಾರಸ್ವಾಮಿ ಸಾಂದರ್ಭಿಕ ಚಿತ್ರ
ಅಮಿತ್ ಶಾ, ಕುಮಾರಸ್ವಾಮಿ ಸಾಂದರ್ಭಿಕ ಚಿತ್ರ

ಬೆಂಗಳೂರು: ಮಂಡ್ಯದಲ್ಲಿಂದು 2023ರ ರಾಜ್ಯ ವಿಧಾನಸಭಾ ಚುನಾವಣೆಗೆ ರಣ ಕಹಳೆ ಊದಿದ ಬಿಜೆಪಿ ಚಾಣಕ್ಯ ಖ್ಯಾತಿಯ ಅಮಿತ್ ಶಾ, ಮಕ್ಮಲ್ ಟೋಪಿ ಹಾಕಲು ವ್ಯರ್ಥ ಪ್ರಯತ್ನ ಮಾಡುತ್ತಿದ್ದು, ಅವರ ಅತಿಯಾದ ಉತ್ಸಾಹ ಒಳ್ಳೆಯದಲ್ಲ ಎಂದು 
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ  ವಾಗ್ದಾಳಿ ನಡೆಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಪಂಚರತ್ನ ರಥಯಾತ್ರೆಯ ಯಶಸ್ಸು ಶಾ ಕಣ್ಣಿಗೂ ಬಿದ್ದಿರಬಹುದು, ಇಲ್ಲವೇ ಯಾರಾದರೂ ಭಟ್ಟಂಗಿಗಳು ಅವರ ಕಿವಿ ಊದಿರಬಹುದು. ಅದಕ್ಕೆ ಮಂಡ್ಯಕ್ಕೆ ಬಂದು, ಎಟಿಎಂ ಬಗ್ಗೆ ಮಾತನಾಡಿದ್ದಾರೆ. ಭೂತದ ಬಾಯಲ್ಲಿ ಭಗವದ್ಗೀತೆ ಎಂದರೆ ಹೀಗೆಯೇ. ಸುಳ್ಳು ಹೇಳುವುದಕ್ಕೆ ಸಂಕೋಚ ಬೇಡವೇ? ಕರ್ನಾಟಕ ಮಾತ್ರವಲ್ಲ, ಇಡೀ ಭಾರತವೇ ಭಾರತೀಯ ಜನತಾ ಪಕ್ಷದ ಎಟಿಎಂ ಆಗಿದೆ. ಇದು ಸುಳ್ಳಾ? ಎಂದು ಪ್ರಶ್ನಿಸಿದ್ದಾರೆ. 

ಅಮಿತ್ ಶಾ ಮಂಡ್ಯ ಜನರಿಗೆ ಮಂಕುಬೂದಿ ಎರಚಲು ವಿಫಲ ಪ್ರಯತ್ನ ನಡೆಸಿದ್ದಾರೆ. ಅವರ ಪಕ್ಷದ ಕೆಲ ನಾಯಕರು ಹೊಡೆಯುತ್ತಿರುವ ಅಪಪ್ರಚಾರದ ಜಾಗಟೆಗೆ ಡ್ರಮ್ಮು ಬಾರಿಸುವ ಕೆಲಸ ಮಾಡಿದ್ದಾರೆ. ಮಂಡ್ಯದವರನ್ನು ಮೋಸ ಮಾಡಲು ಆಗುವುದಿಲ್ಲ ಎಂದು ಕುಮಾರಸ್ವಾಮಿ  ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com