ಕೃಷ್ಣಾ ಜಲಾನಯನ ಪ್ರದೇಶದ ರೈತರಿಗೆ 'ಡಬಲ್ ಇಂಜಿನ್' ಸರ್ಕಾರದಿಂದ ದ್ರೋಹ: ವಿಪಕ್ಷ ನಾಯಕ ಸಿದ್ದರಾಮಯ್ಯ

ಕರ್ನಾಟಕ ಮತ್ತು ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರ ಉತ್ತರ ಕರ್ನಾಟಕದ ಜನರಿಗೆ, ಮುಖ್ಯವಾಗಿ ಕೃಷ್ಣಾ ಜಲಾನಯನ ಪ್ರದೇಶದ ರೈತರಿಗೆ ನೀರಾವರಿ ಯೋಜನೆಗಳಲ್ಲಿ ದ್ರೋಹ ಮಾಡುತ್ತಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಆರೋಪಿಸಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ವಿಜಯಪುರ: ಕರ್ನಾಟಕ ಮತ್ತು ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರ ಉತ್ತರ ಕರ್ನಾಟಕದ ಜನರಿಗೆ, ಮುಖ್ಯವಾಗಿ ಕೃಷ್ಣಾ ಜಲಾನಯನ ಪ್ರದೇಶದ ರೈತರಿಗೆ ನೀರಾವರಿ ಯೋಜನೆಗಳಲ್ಲಿ ದ್ರೋಹ ಮಾಡುತ್ತಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಆರೋಪಿಸಿದ್ದಾರೆ.

ಶುಕ್ರವಾರ ಕೃಷ್ಣಾ ಜಲಾನಯನ ನೀರಾವರಿ ಯೋಜನೆ ಕುರಿತ ಕಾಂಗ್ರೆಸ್ ಹಮ್ಮಿಕೊಂಡಿದ್ದ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಜನತೆ ಬರುವ ಚುನಾವಣೆಯಲ್ಲಿ ನಮಗೆ ಆಶೀರ್ವದಿಸಿದರೆ ಖಂಡಿತವಾಗಿಯೂ ಪ್ರತಿ ವರ್ಷ ರೂ.40,000 ಕೋಟಿ ವೆಚ್ಚ ಮಾಡಿ ರಾಜ್ಯದ ಕೃಷ್ಣಾ, ಭದ್ರಾ, ಎತ್ತಿನಹೊಳೆ, ಮೇಕೆದಾಟು ಸೇರಿದಂತೆ ಎಲ್ಲಾ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಸಂಕಲ್ಪ ಮಾಡಲಾಗಿದೆ ೆಂದು ಹೇಳಿದರು.

ಬಿಜೆಪಿ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ 600 ಭರವಸೆಗಳನ್ನು ನೀಡಿತ್ತು. ಈ ಪೈಕಿ ಕೇವಲ ಶೇ.10ರಷ್ಟು ಭರವಸೆಗಳನ್ನು ಮಾತ್ರ  ಈಡೇರಿಸಿದೆ. ಆದರೆ, ಈ ಹಿಂದೆ ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ 165 ಭರವಸೆಗಳನ್ನು ಪ್ರಣಾಳಿಕೆಯಲ್ಲಿ ನೀಡಲಾಗಿತ್ತು. ಈ ಪೈಕಿ 158 ಭರವಸೆಗಳನ್ನು ಈಡೇರಿಸಿದ್ದೇವೆ. ಕಾಂಗ್ರೆಸ್ ನುಡಿದಂತೆ ನಡೆಯುವ ಸರ್ಕಾರವಾಗಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ರೂ.1.5 ಲಕ್ಶಷ ಕೋಟಿ ನೀರಾವರಿ ಯೋಜನೆಗಳಿಗೆ ವೆಚ್ಚ ಮಾಡಲಾಗುವುದು ಎಂದು ಸದನದಲ್ಲಿಯೂ ಹಾಗೂ ಹೊರಡಗೆಯೂ ಬಿಜೆಪಿ ಹೇಳಿತ್ತು. ಆದರೆ. ಬಿಜೆಪಿ ಸರ್ಕಾರ 3.5 ವರ್ಷದಲ್ಲಿ ಕೇವಲ ರೂ.45,000 ಕೋಟಿ ಮಾತ್ರ ಖರ್ಚು ಮಾಡಿದೆ. ಬಿಜೆಪಿ ಸರ್ಕಾರಕ್ಕೆ ನಾಚಿಕೆಯಾಗಬೇಕು. ಇನ್ನೂ ರೂ.1 ಲಕ್ಷ ಕೋಟಿ ಹಣ  ಎಲ್ಲಿ ಹೋಯಿತು ಎಂದು ಪ್ರಶ್ನಿಸಿದರು.

ಕಾಂಗ್ರೆಸ್ 2023ರಲ್ಲಿ ಅಧಿಕಾರಕ್ಕೆ ಬಂದರೆ ಎಲ್ಲಾ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಐದು ವರ್ಷಗಳಲ್ಲಿ 2 ಲಕ್ಷ ಕೋಟಿ ರೂ.ಗಳನ್ನು ಮಂಜೂರು ಮಾಡಲಿದೆ ಎಂದು ಹೇಳಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಮಾತನಾಡಿ, ಕಾಂಗ್ರೆಸ್ ಸರ್ಕಾರವು ಜನರಿಗೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸುತ್ತಿದೆ. ಬಿಜೆಪಿ ಸರಕಾರ ಕೇವಲ ಹುಸಿ ಭರವಸೆಗಳನ್ನು ನೀಡುವ ಸರಕಾರ ಎಂದು ಬಣ್ಣಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಜನರನ್ನು ಪಿಕ್ ಪಾಕೆಟ್ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com