ರಾಜ್ಯದಲ್ಲಿ ಅಮಿತ್ ಶಾ: ಸಿಂಗಾಪುರದಲ್ಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಯಡಿಯೂರಪ್ಪ

ಮಂಡ್ಯದಲ್ಲಿ ನಡೆದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಾರ್ಯಕ್ರಮಕ್ಕೆ ನಾಯಕರೊಬ್ಬರು ಗೈರು ಹಾಜರಾಗಿದ್ದು, ಶುಕ್ರವಾರ ಎದ್ದುಕಾಣುತ್ತಿದ್ದು, ಬೂಕನಕೆರೆಯಿಂದ ಬಂದಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ. ಅವರ ಅನುಪಸ್ಥಿತಿಯು ಅನೇಕ ಹುಬ್ಬೇರುವಂತೆ ಮಾಡಿತ್ತು.
ಮಾಜಿ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಹಾಗೂ ಸಿಎಂ ಬೊಮ್ಮಾಯಿ.
ಮಾಜಿ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಹಾಗೂ ಸಿಎಂ ಬೊಮ್ಮಾಯಿ.
Updated on

ಬೆಂಗಳೂರು: ಮಂಡ್ಯದಲ್ಲಿ ನಡೆದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಾರ್ಯಕ್ರಮಕ್ಕೆ ನಾಯಕರೊಬ್ಬರು ಗೈರು ಹಾಜರಾಗಿದ್ದು, ಶುಕ್ರವಾರ ಎದ್ದುಕಾಣುತ್ತಿದ್ದು, ಬೂಕನಕೆರೆಯಿಂದ ಬಂದಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ. ಅವರ ಅನುಪಸ್ಥಿತಿಯು ಅನೇಕ ಹುಬ್ಬೇರುವಂತೆ ಮಾಡಿತ್ತು.

ಈ ಬೆಳವಣಿಗೆ ಯಡಿಯೂರಪ್ಪ ಮತ್ತು ಸಿಎಂ ಬೊಮ್ಮಾಯಿ ನಡುವೆ ಭಿನ್ನಭಿಪ್ರಾಯಗಳು ಎದುರಾಗುತ್ತಿವೆ ಎಂಬ ಊಹಾಪೋಹಕ್ಕೆ ಇಂಬು ನೀಡುವಂತಾಗಿದೆ.

ಶಾ ಅವರನ್ನು ಬರಮಾಡಿಕೊಳ್ಳಲು ಗುರುವಾರ ರಾತ್ರಿ ಯಡಿಯೂರಪ್ಪ ವಿಮಾನ ನಿಲ್ದಾಣದಲ್ಲಿ ಗೈರುಹಾಜರಾಗಿದ್ದು, ಉಭಯ ನಾಯಕರ ನಡುವಿನ ಭಿನ್ನಾಭಿಪ್ರಾಯ ಇರುವುದನ್ನು ಖಚಿತಪಡಿಸಿದೆ.

ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮತ್ತು ಪಕ್ಷದ ನಾಯಕ ಬಿ ವೈ ವಿಜಯೇಂದ್ರ ಅವರು ಯಡಿಯೂರಪ್ಪ ಅವರು ಸಿಂಗಾಪುರದಲ್ಲಿದ್ದು, ಅವರ ಪೂರ್ವ ನಿಗದಿತ ಪ್ರವಾಸದ ಕುರಿತು ಶಾ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಜನವರಿ 5 ರಂದು ಹಿಂತಿರುಗಲಿದ್ದಾರೆ ಎಂದು ಹೇಳಿದ್ದಾರೆ.

ಈ ನಡುವೆ ಯಡಿಯೂರಪ್ಪ ಅವರು ಮಂಡ್ಯದಲ್ಲಿ ಶಾ ಅವರ ರ್ಯಾಲಿಯನ್ನು ತಮ್ಮ ಫೋನ್‌ನಲ್ಲಿ ವೀಕ್ಷಿಸುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕಳೆದ ವರ್ಷ ಇದೇ ಸಮಯಕ್ಕೆ ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿ ಸಭೆ ನಡೆಯುತ್ತಿದ್ದ ವೇಳೆ ಯಡಿಯೂರಪ್ಪ ಅವರು ಕುಟುಂಬ ಸಮೇತ ದುಬೈನಲ್ಲಿ ವಿಹಾರಕ್ಕೆ ತೆರಳಿದ್ದರು. ಬೆಳಗಾವಿ ಅಧಿವೇಶನದಲ್ಲಿಯೂ ಇಬ್ಬರು ನಾಯಕರ ನಡುವಿನ ನಡವಳಿಕೆಗಳು ನಾಯಕರ ನಡುವೆ ಭಿನ್ನಾಭಿಪ್ರಾಯ ಮೂಡಿದೆ ಎಂಬುದನ್ನು ಖಚಿತಪಡಿಸಿತ್ತು ಎಂದು ಮೂಲಗಳು ತಿಳಿಸಿವೆ.

ಸಾಮಾನ್ಯವಾಗಿ ವಿಧಾನಸಭೆ ಕಲಾಪಗಳ ಬಗ್ಗೆ ಶ್ರದ್ಧೆಯಿಂದ ಇರುತ್ತಿದ್ದ ಯಡಿಯೂರಪ್ಪ ಅವರು, ಈ ಬಾರಿಯ ಅಧಿವೇಶನದಲ್ಲಿ ಕೇವಲ ಐದು ದಿನ ಮಾತ್ರ ಹಾಜರಾಗಿದ್ದು ಕಂಡು ಬಂದಿತ್ತು. ಅವರು ತಂಗಿದ್ದ ಕೆಎಲ್‌ಇ ಗೆಸ್ಟ್‌ಹೌಸ್‌ಗೆ ಭೇಟಿ ನೀಡುವ ಶಾಸಕರು ಮತ್ತು ಇತರರ ಸಂಖ್ಯೆ ಕಡಿಮೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಗಣಿ ಮತ್ತು ಭೂವಿಜ್ಞಾನ ಸಚಿವ ಹಾಲಪ್ಪ ಆಚಾರ್ ಮತ್ತು ಇತರ ಕೆಲವರನ್ನು ಹೊರತುಪಡಿಸಿ, ಕೆಲವೇ ಮಂದಿ ಅವರನ್ನು ಭೇಟಿ ಮಾಡಿದ್ದರು ಎಂದು ತಿಳಿದುಬಂದಿದೆ.

ಈ ನಡುವೆ ಈ ಊಹಾಪೋಹಗಳಿಗೆ ಕಡಿವಾಣ ಹಾಕಲು ಬಿಜೆಪಿ ಪ್ರಯತ್ನಿಸಿದೆ. ಬಿಜೆಪಿ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ಈ ಸಂಬಂಧ ಪ್ರತಿಕ್ರಿಯೆ ನೀಡಿ, “ಕರ್ನಾಟಕದಲ್ಲಿ ಬಿಜೆಪಿಗೆ ಬಿಎಸ್ ಯಡಿಯೂರಪ್ಪ ಅತ್ಯಂತ ಮುಖ್ಯವಾದ ನಾಯಕ. ಅವರು ರಾಜ್ಯದಾದ್ಯಂತ ಗರಿಷ್ಠ ಗೌರವವನ್ನು ಹೊಂದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಯಶಸ್ಸಿನತ್ತ ಮುನ್ನಡೆಸಲು ಎಲ್ಲರೂ ಅವರ ನಾಯಕತ್ವದತ್ತ ಎದುರು ನೋಡುತ್ತಿದ್ದಾರೆಂದು ಹೇಳಿದ್ದಾರೆ.

ಯಡಿಯೂರಪ್ಪ ಅವರ ನಿಕಟವರ್ತಿ ಎಂದೇ ಖ್ಯಾತರಾಗಿರುವ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಮಾತನಾಡಿ, ಈ ಬಗ್ಗೆ ನಾನು ಯಾವುದೇ ಪ್ರತಿಕ್ರಿಯಿಸಲು ಬಯಸುವುದಿಲ್ಲ ಎಂದಿದ್ದಾರೆ.

ಸಂಪುಟಕ್ಕೆ ಮರಳುವ ಆಕಾಂಕ್ಷಿಯಾಗಿರುವ ಮಾಜಿ ಆರ್‌ಡಿಪಿಆರ್ ಸಚಿವ ಕೆ ಎಸ್ ಈಶ್ವರಪ್ಪ ಕೂಡ ಶಾ ಅವರ ಸಭೆಗೆ ಗೈರು ಹಾಜರಾಗಿದ್ದು ಕಂಡು ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com