2023ರ ವಿಧಾನಸಭೆ ಚುನಾವಣೆ: ಮಾಜಿ ಸಿಎಂ ಸಿದ್ದರಾಮಯ್ಯ ಸವದತ್ತಿಯಿಂದ ಸ್ಪರ್ಧೆ?

2023ರ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ಹೆಚ್ಚಿರುವ ವಿಧಾನಸಭೆ ಕ್ಷೇತ್ರಗಳ ಮೇಲೆ ಕಾಂಗ್ರೆಸ್‌ನ ಕೆಲವು ಪ್ರಮುಖ ನಾಯಕರು ಕಣ್ಣಿಟ್ಟಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಬೆಳಗಾವಿ: 2023ರ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ಹೆಚ್ಚಿರುವ ವಿಧಾನಸಭೆ ಕ್ಷೇತ್ರಗಳ ಮೇಲೆ ಕಾಂಗ್ರೆಸ್‌ನ ಕೆಲವು ಪ್ರಮುಖ ನಾಯಕರು ಕಣ್ಣಿಟ್ಟಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸೇರಿದಂತೆ ಕೆಲವು ಕಾಂಗ್ರೆಸ್ ನಾಯಕರು ತಾವು ಈಗ ಶಾಸಕರಾಗಿರುವ ಕ್ಷೇತ್ರವನ್ನು ಮುಂದಿನ ಚುನಾವಣೆಯಲ್ಲಿ ಉಳಿಸಿಕೊಳ್ಳಲು ಸಮರ್ಥರಿದ್ದರೂ ಕೂಡ  ಕ್ಷೇತ್ರ ಬದಲಾಯಿಸಬಹುದು ಎಂಬ ಮಾತುಗಳು ಕೇಳಿಬರುತ್ತಿವೆ. 

ಕಳೆದ ಮೂರು ಚುನಾವಣೆಗಳಲ್ಲಿ ಬಿಜೆಪಿಯ ಆನಂದ್ ಮಾಮ್ನಿ ಗೆದ್ದಿರುವ ಪಕ್ಷದ ಮತಗಳ ವಿಭಜನೆಯಿಂದ ಕಳೆದ ಚುನಾವಣೆಯಲ್ಲಿ ಸೋತಿದ್ದ ಸವದತ್ತಿ ಕ್ಷೇತ್ರಕ್ಕೆ ಕಾಂಗ್ರೆಸ್ ಸೂಕ್ತ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿದೆ. ಪಕ್ಷದಲ್ಲಿ ಸ್ಥಳೀಯವಾಗಿ ಜನಪ್ರಿಯರಾಗಿರುವ ಮೂವರು ನಾಯಕರು ಟಿಕೆಟ್‌ ಆಕಾಂಕ್ಷಿಗಳಿದ್ದರೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೆಸರು ಕೇಳಿಬರುತ್ತಿದೆ.

ಸಿಎಲ್ ಪಿ ನಾಯಕರಾಗಿರುವ ಸಿದ್ದರಾಮಯ್ಯನರು ಈಗ ಪ್ರತಿನಿಧಿಸುವ ಬಾದಾಮಿಯ ಬದಲಿಗೆ ಸವದತ್ತಿ ಕ್ಷೇತ್ರದಿಂದ ಸ್ಪರ್ಧಿಸುವ ಕುರಿತು ಪಕ್ಷದೊಳಗೆ ಚರ್ಚೆ ನಡೆಯುತ್ತಿದೆ. ಆದರೂ ಸಿದ್ದರಾಮಯ್ಯನವರು ಮುಂದಿನ ಚುನಾವಣೆಯಲ್ಲಿ ಚಾಮರಾಜಪೇಟೆ, ಬಾದಾಮಿ, ಕೊಪ್ಪಳ ಅಥವಾ ಕೋಲಾರ ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಂಡು ಯಾವುದಾದರೊಂದು ಕ್ಷೇತ್ರದಲ್ಲಿ ಸ್ಪರ್ಧಿಸುವ ಆಯ್ಕೆಗಳನ್ನು ನೋಡುತ್ತಿದೆ. ಅಂತಿಮ ನಿರ್ಧಾರ ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಮತ್ತು ಪಕ್ಷ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಸತೀಶ್ ಜಾರಕಿಹೊಳಿ ಅವರ ಆಪ್ತರು ಯಮಕನಮರಡಿ ಕ್ಷೇತ್ರವನ್ನು ಅವರ ಮಗಳು ಪ್ರಿಯಾಂಕಾಗೆ ಬಿಟ್ಟುಕೊಟ್ಟು ಅವರು ಸವದತ್ತಿಯಿಂದ ಸ್ಪರ್ಧಿಸಲು ಬಯಸಿದ್ದಾರೆ. ಆದರೆ ಅವರ ಆಪ್ತ ಮೂಲಗಳು ಈ ಊಹಾಪೋಹವನ್ನು ಅಲ್ಲಗಳೆದಿದ್ದು, ಸತೀಶ್ ಜಾರಕಿಹೊಳಿಯವರು ಯಮಕನಮರಡಿಯಿಂದ ತಮ್ಮ ಕ್ಷೇತ್ರ ಬದಲಾಯಿಸುವುದಿಲ್ಲ ಎನ್ನುತ್ತಿದ್ದಾರೆ. ಇಷ್ಟು ಬೇಗನೆ ತಮ್ಮ ಮಗಳನ್ನು ರಾಜಕೀಯಕ್ಕೆ ತರುವ ಇಚ್ಛೆ ಕೂಡ ಅವರಿಗೆ ಇದ್ಧಂತಿಲ್ಲ. ಬದಲಾಗಿ, ಸಿದ್ದರಾಮಯ್ಯನವರು ಸೌದತ್ತಿಯಿಂದ ಸ್ಪರ್ಧಿಸಬೇಕೆಂದು ಪಕ್ಷ ಬಯಸಿದರೆ ಜಾರಕಿಹೊಳಿ ಅವರು ಸಿದ್ದರಾಮಯ್ಯನವರನ್ನು ಬೆಂಬಲಿಸಬಹುದು. 

ಕಳೆದ ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಜಾರಕಿಹೊಳಿ ಅವರು ಸವದತ್ತಿ ವಿಧಾನಸಭಾ ಕ್ಷೇತ್ರದಿಂದ ಭರ್ಜರಿ ಮತ ಗಳಿಸಿದ್ದರು. 2023ರ ವಿಧಾನಸಭಾ ಚುನಾವಣೆಯಲ್ಲಿ ಸಂಭವನೀಯ ಬಂಡಾಯ ಚಟುವಟಿಕೆಗಳನ್ನು ತಪ್ಪಿಸಲು, ಕಾಂಗ್ರೆಸ್ ಸಿದ್ದರಾಮಯ್ಯ ಅಥವಾ ಜಾರಕಿಹೊಳಿ ಅವರಂತಹ ಜನಪ್ರಿಯ ನಾಯಕರನ್ನು ಕಣಕ್ಕಿಳಿಸಲು ಚಿಂತನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com