
ಬೆಂಗಳೂರು: ಕೋಲಾರದ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಕಾಂಗ್ರೆಸ್ ಪಕ್ಷದ ಕೆಲವು ವ್ಯಕ್ತಿಗಳ ವಿರುದ್ಧ ತೀವ್ರ ಅಸಮಾಧಾನಗೊಂಡಿದ್ದು, ಪಕ್ಷ ತೊರೆಯುತ್ತಾರೆ ಎಂಬ ಬಲವಾದ ಮಾತುಗಳು ಕೇಳಿಬರುತ್ತಿವೆ.
ಈ ಮಧ್ಯೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ ಖಾಯಂ ಆಹ್ವಾನಿತರಾಗಿರುವ ಏಳು ಬಾರಿ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಮುನಿಯಪ್ಪ, ಇದು ನಿಜವಲ್ಲ, ನಾನು ಕಾಂಗ್ರೆಸ್ ತೊರೆಯುವುದಿಲ್ಲ ಎಂದರು.
ಆದರೆ, ಕಾಂಗ್ರೆಸ್‌ನ ಕೆಲವು ವ್ಯಕ್ತಿಗಳ ವರ್ತನೆಯಿಂದ ತೀವ್ರವಾಗಿ ಅಸಮಾಧಾನಗೊಂಡಿದ್ದಾರೆ ಎಂದು ಅವರ ಆಪ್ತ ಶಾಸಕರೊಬ್ಬರು ಹೇಳಿದ್ದಾರೆ.
2019 ಚುನಾವಣೆಯಲ್ಲಿ ತಮ್ಮ ವಿರುದ್ಧ ಬಹಿರಂಗವಾಗಿ ಕೆಲಸ ಮಾಡಲು ಕಾರಣವಾದ ಕಾಂಗ್ರೆಸ್‌ನೊಳಗಿನ ಕೆಲವು ವ್ಯಕ್ತಿಗಳ ವರ್ತನೆಯನ್ನು ಪಕ್ಷದ ವರಿಷ್ಠರ ಗಮನಕ್ಕೆ ತಂದಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಗಮನವನ್ನು ಸೆಳೆದಿದ್ದಾರೆ ಎಂದು ಅವರು ತಿಳಿಸಿದರು.
Advertisement