ಭಾನುವಾರ ಬೆಂಗಳೂರಿಗೆ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಆಗಮನ: ಶಾಸಕರು- ಸಂಸದರ ಬೆಂಬಲ ಕೋರಿಕೆ

ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಕರ್ನಾಟಕದ ಬಿಜೆಪಿ ಶಾಸಕರು ಮತ್ತು ಸಂಸದರ ಬೆಂಬಲ ಪಡೆಯಲು ಭಾನುವಾರ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.
ದ್ರೌಪದಿ ಮುರ್ಮು
ದ್ರೌಪದಿ ಮುರ್ಮು
Updated on

ಬೆಂಗಳೂರು: ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಕರ್ನಾಟಕದ ಬಿಜೆಪಿ ಶಾಸಕರು ಮತ್ತು ಸಂಸದರ ಬೆಂಬಲ ಪಡೆಯಲು ಭಾನುವಾರ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.

ಆದಿವಾಸಿ ಮಹಿಳೆ ಮುರ್ಮು ಅವರು ಈಗಾಗಲೇ ರಾಜ್ಯಪಾಲರಾಗಿ, ಸಚಿವರಾಗಿ, ಕಾಲೇಜು ಉಪನ್ಯಾಸಕರಾಗಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದು, ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಅವರ ಗೆಲುವು ನಿಶ್ಚಿತ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಹೇಳಿದ್ದಾರೆ.

ಪ್ರತಿಪಕ್ಷಗಳ ಅಧ್ಯಕ್ಷೀಯ ಅಭ್ಯರ್ಥಿ ಯಶವಂತ್ ಸಿನ್ಹಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿ ಟಿ ರವಿ, ಮುರ್ಮು ಅವರು ರಬ್ಬರ್ ಸ್ಟಾಂಪ್ ಅಧ್ಯಕ್ಷರಾಗುವುದಿಲ್ಲ ಎಂದು ಹೇಳಿದರು. 

ಮುರ್ಮು ಭಾನುವಾರ ಬಿಜೆಪಿ ಶಾಸಕರು ಮತ್ತು ಸಂಸದರನ್ನು ಭೇಟಿ ಮಾಡಲಿದ್ದಾರೆ. ಜನತಾ ದಳ (ಜಾತ್ಯತೀತ) ನಾಯಕರನ್ನು ಭೇಟಿ ಮಾಡುವ ಸಾಧ್ಯತೆಯಿದೆ. ಆದರೆ, ಜೆಡಿಎಸ್ ನಾಯಕರ ಜತೆಗಿನ ಸಭೆ ಇನ್ನೂ ಖಚಿತವಾಗಿಲ್ಲ. ಜೆಡಿಎಸ್ ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ಹೇಳಿತ್ತು.    

ಸರ್ಕಾರವು ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂಬ ಯಶ್ವಂತ್ ಸಿನ್ಹಾ ಆರೋಪಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ನಾಯಕ ರವಿ, ಜಾರಿ ನಿರ್ದೇಶನಾಲಯ (ಇಡಿ) ಅಥವಾ ಆದಾಯ ತೆರಿಗೆ ಇಲಾಖೆ ಪ್ರಾಮಾಣಿಕರಿಗೆ ಏನೂ ಮಾಡಲು ಸಾಧ್ಯವಿಲ್ಲ, ಆದರೆ ಭ್ರಷ್ಟರು ಅವರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com