ಬೆಂಗಳೂರು: ಫ್ರೀಡಂ ಪಾರ್ಕ್‌ನಿಂದ ರಾಜಭವನದವರೆಗೆ ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆ
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಇಡಿ ತನಿಖೆ ವಿರೋಧಿಸಿ ರಾಜ್ಯ ಕಾಂಗ್ರೆಸ್ ಘಟಕದಿಂದ ಫ್ರೀಡಂ ಪಾರ್ಕ್ ನಿಂದ ರಾಜಭವನದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತಿದೆ. ಪೊಲೀಸರ ಬ್ಯಾರಿಕೇಡ್ ಗೂ ಬಗ್ಗದ ಕಾಂಗ್ರೆಸ್ ಮುಖಂಡರು, ಬ್ಯಾರಿಕೇಡ್ ಮೇಲೆ ಹತ್ತಿ ಮೆರವಣಿಗೆಯಲ್ಲಿ ಸಾಗಿದರು.
ಫ್ರೀಡಂ ಪಾರ್ಕ್‌ನಲ್ಲಿ ನಡೆದ ಸಭೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಮಾಜಿ ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ಸೇರಿದಂತೆ ಹಲವು ಮುಖಂಡರು ಭಾಗವಹಿಸಿ ಮಾತನಾಡಿದರು.
ತನಿಖೆ ನೆಪದಲ್ಲಿ ಗಾಂಧಿ ಕುಟುಂಬದ ರಾಜಕೀಯ ವರ್ಚಸ್ಸು ನಾಶಕ್ಕೆ ಬಿಜೆಪಿ ಷಡ್ಯಂತ್ರ ಮಾಡುತ್ತಿದೆ ಎಂದು ಆರೋಪಿಸಿದ ಕಾಂಗ್ರೆಸ್ ಮುಖಂಡರು, ತನಿಖೆಗೆ ಹೆದರಿ ಓಡಿ ಹೋಗುವವರಲ್ಲ, ಐಟಿ, ಇಡಿ, ಸಿಬಿಐ ಏನೇ ಬರಲಿ ಹೆದರುವುದಿಲ್ಲ, ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುದ್ದೇಶಕ್ಕೆ ಬಳಸಿಕೊಳ್ಳುತ್ತಿರುವುದಾಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಪಕ್ಷದ ನಾಯಕರನ್ನು ಹೆದರಿಸುವ ಬಿಜೆಪಿ ಸರ್ಕಾರದ ದ್ವೇಷದ ಹಾಗೂ ಕುತಂತ್ರ ರಾಜಕಾರಣಕ್ಕೆ ಬಗ್ಗಲ್ಲ ಎಂದು ಪ್ರತಿಭಟನಾಕಾರರು ಹೇಳಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ