ನೆಹರು, ಇಂದಿರಾ, ಸೋನಿಯಾ ಹೆಸರಲ್ಲಿ 3-4 ತಲೆಮಾರಿಗೆ ಆಗುವಷ್ಟು ಮಾಡಿಕೊಂಡಿದ್ದೇವೆ, ಅವರ ಋಣವನ್ನು ನಾವೆಲ್ಲಾ ತೀರಿಸಬೇಕು: ಕೆ ಆರ್ ರಮೇಶ್ ಕುಮಾರ್

ನಾವೆಲ್ಲ ಇಷ್ಟು ಮಾಡಿಕೊಂಡಿರುವುದು, ಈ ಮಟ್ಟಕ್ಕೆ ಬೆಳೆದಿರುವುದು ಕಾಂಗ್ರೆಸ್ ನಿಂದ, ಗಾಂಧಿ ಕುಟುಂಬದಿಂದ, ಈಗ ಗಾಂಧಿ ಕುಟುಂಬಕ್ಕೆ, ಕಾಂಗ್ರೆಸ್ ಗೆ ಋಣ ತೀರಿಸುವ ಕಾಲ ಬಂದಿದೆ. ನಾವು ಇಷ್ಟು ಕಿಂಚಿತ್ತೂ ಮಾಡದಿದ್ದರೆ ನಾವು ತಿನ್ನುವ ಅನ್ನಕ್ಕೆ ಹುಳ ಬೀಳುತ್ತದೆ ಎಂದು ಮಾಜಿ ಸ್ಪೀಕರ್, ಕಾಂಗ್ರೆಸ್ ಶಾಸಕ ಕೆ ಆರ್ ರಮೇಶ್ ಕುಮಾರ್ ಹೇಳಿದ್ದಾರೆ.
ಕೆ ಆರ್ ರಮೇಶ್ ಕುಮಾರ್
ಕೆ ಆರ್ ರಮೇಶ್ ಕುಮಾರ್

ಬೆಂಗಳೂರು: ನಾವೆಲ್ಲ ಇಷ್ಟು ಮಾಡಿಕೊಂಡಿರುವುದು, ಈ ಮಟ್ಟಕ್ಕೆ ಬೆಳೆದಿರುವುದು ಕಾಂಗ್ರೆಸ್ ನಿಂದ, ಗಾಂಧಿ ಕುಟುಂಬದಿಂದ, ಈಗ ಗಾಂಧಿ ಕುಟುಂಬಕ್ಕೆ, ಕಾಂಗ್ರೆಸ್ ಗೆ ಋಣ ತೀರಿಸುವ ಕಾಲ ಬಂದಿದೆ. ಇಷ್ಟು ಕಿಂಚಿತ್ತೂ ಮಾಡದಿದ್ದರೆ ನಾವು ತಿನ್ನುವ ಅನ್ನಕ್ಕೆ ಹುಳ ಬೀಳುತ್ತದೆ ಎಂದು ಮಾಜಿ ಸ್ಪೀಕರ್, ಕಾಂಗ್ರೆಸ್ ಶಾಸಕ ಕೆ ಆರ್ ರಮೇಶ್ ಕುಮಾರ್ ವಿವಾದದ ಕಿಡಿ ಹೊತ್ತಿಸುವ ಹೇಳಿಕೆ ನೀಡಿದ್ದಾರೆ.

ದೆಹಲಿಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರನ್ನು ಇಡಿ ಕಚೇರಿಯಲ್ಲಿ ಅಧಿಕಾರಿಗಳು ನ್ಯಾಷನಲ್ ಹೆರಾಲ್ಡ್ ಕೇಸಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ದೇಶಾದ್ಯಂತ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಿಂದ ರಾಜಭವನದವರೆಗೆ ರಾಜಭವನ ಚಲೋವನ್ನು ಕಾಂಗ್ರೆಸ್ ನಾಯಕರು ಹಮ್ಮಿಕೊಂಡಿದ್ದಾರೆ.

ಪ್ರತಿಭಟನಾ ರ್ಯಾಲಿಯಲ್ಲಿ ಮಾತನಾಡಿದ ರಮೇಶ್ ಕುಮಾರ್, ನೆಹರು, ಇಂದಿರಾ ಗಾಂಧಿ, ಸೋನಿಯಾ ಗಾಂಧಿ ಅವರ ಹೆಸರನ್ನು ಹೇಳಿಕೊಂಡು 3-4 ತಲೆಮಾರಿಗೆ ಆಗುವಷ್ಟು ಮಾಡಿಕೊಂಡಿದ್ದೇವೆ. ಈಗ ನಮಗೆ ಅದರ ಋಣ ತೀರಿಸುವ ಸಮಯ ಬಂದಿದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

ಈ ದೇಶ ಉಳಿಯಬೇಕು ಎಂದರೆ ಕಾಂಗ್ರೆಸ್ ಉಳಿಯಬೇಕು. ಎಲ್ಲಾ ಸಣ್ಣ ವಿಚಾರವನ್ನು ಬದಿಗೊತ್ತೋಣ. ಸೋನಿಯಾ ಗಾಂಧಿಗೆ ನೈತಿಕವಾಗಿ ಸಮಾಧಾನವಾಗಬೇಕು. ಆಗ ಮಾತ್ರ ನಾವು ತಿನ್ನುವ 2 ಹೊತ್ತಿನ ಊಟ ಸಾರ್ಥಕ ಆಗುತ್ತದೆ. ನೆಹರು, ಇಂದಿರಾ, ಸೋನಿಯಾ ಹೆಸರಲ್ಲಿ 3-4 ತಲೆಮಾರಿಗೆ ಆಗುವಷ್ಟು ಮಾಡಿಕೊಂಡಿದ್ದೇವೆ. ಈ ಹಿನ್ನೆಲೆಯಲ್ಲಿ ಈ ಕಿಂಚಿತ್ತು ತ್ಯಾಗಕ್ಕೂ ನಾವು ತಯಾರಾಗದೇ ಹೋದರೆ ನಾವು ತಿನ್ನುವ ಅನ್ನಕ್ಕೆ ಹುಳ ಬೀಳುತ್ತದೆ ಎಂದರು.

ಸೋನಿಯಾ ಗಾಂಧಿಗೆ ಇಡಿ ಸಮನ್ಸ್‌ ನೀಡಿದೆ. ಕಾಂಗ್ರೆಸ್ ಇಡೀ ದೇಶಾದ್ಯಂತ ಪ್ರತಿಭಟನೆ ಮಾಡುತ್ತಿದೆ. ಆದರೆ ಸೋನಿಯಾ ಗಾಂಧಿ ಕಾನೂನಿಗಿಂತ ದೊಡ್ಡವರಾ ಎಂದು ಬಿಜೆಪಿಯವರು ಪ್ರಶ್ನೆ ಮಾಡುತ್ತಿದ್ದಾರೆ. ಇದಕ್ಕೆ ಮೊದಲು ಉತ್ತರಿಸುತ್ತೇನೆ ಎಂದ ಅವರು, ನಿಮ್ಮ ಪೂರ್ವಿಕರು ಆರ್‌ಎಸ್‍ಎಸ್‍ನವರು, ಹಿಂದೂ ಮಹಾಸಭಾದವ್ರು, ಜನಸಂಘದವ್ರು ಸ್ವಾತಂತ್ರ್ಯ ಹೋರಾಟದಲ್ಲಿ ಜೈಲಿಗೆ ಹೋಗಿದ್ದರಾ ಎಂದು ಕೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com