ಸಿದ್ದರಾಮಯ್ಯ ಟೂಲ್ ಕಿಟ್ ಆಟದಿಂದ ಅಮಾಯಕರ ತಲೆದಂಡ: ಮೂಲ ಕಾಂಗ್ರೆಸಿಗರ ಸರ್ವನಾಶವೇ ಇದರ ಉದ್ದೇಶ! 

ರಾಜಕೀಯ ಚದುರಂಗದಾಟದಲ್ಲಿ ಸಿದ್ದರಾಮಯ್ಯ ನಿಸ್ಸೀಮರು. ಸಿದ್ದರಾಮೋತ್ಸವ ಏಕಾಏಕಿ ಆಯೋಜನೆಗೊಂಡಿದ್ದಲ್ಲ. ಯಾವ ದಾಳವನ್ನು ಯಾವಾಗ ಯಾರ ಮುಂದೆ ಉರುಳಿಸಬೇಕೆಂಬ ಅನುಭವ ಸಿದ್ದರಾಮಯ್ಯಗಿದೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on: 

ಬೆಂಗಳೂರು: ರಾಜಕೀಯ ಚದುರಂಗದಾಟದಲ್ಲಿ ಸಿದ್ದರಾಮಯ್ಯ ನಿಸ್ಸೀಮರು. ಸಿದ್ದರಾಮೋತ್ಸವ ಏಕಾಏಕಿ ಆಯೋಜನೆಗೊಂಡಿದ್ದಲ್ಲ. ಯಾವ ದಾಳವನ್ನು ಯಾವಾಗ ಯಾರ ಮುಂದೆ ಉರುಳಿಸಬೇಕೆಂಬ ಅನುಭವ ಸಿದ್ದರಾಮಯ್ಯಗಿದೆ ಎಂದು ಬಿಜೆಪಿ ಹೇಳಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ಸಿದ್ದರಾಮೋತ್ಸವದ ಮೂಲಕ ಮುಂದೆ ಡಿಕೆಶಿ, ಪರಮೇಶ್ವರ್‌ ಹಾಗೂ ಖರ್ಗೆ ಅವರನ್ನು ಮಕಾಡೆ ಮಲಗಿಸುವ ಉದ್ದೇಶವಿದೆಯೇ? ಎಂದು ಪ್ರಶ್ನಿಸಿದೆ.

ಕೆಪಿಸಿಸಿ ಕಚೇರಿಯಲ್ಲಿ ಪಿಸು ಮಾತು ಬಂದಾಗಲೇ ಡಿಕೆ ಶಿವಕುಮಾರ್ ಎಚ್ಚೆತ್ತುಕೊಳ್ಳಬೇಕಿತ್ತು. ಸಿದ್ದರಾಮಯ್ಯ ಟೂಲ್ ಕಿಟ್ ಆಟ ಅದಾಗಲೇ ಶುರುವಾಗಿತ್ತು, ಅಮಾಯಕರ ತಲೆದಂಡವಾಯಿತಷ್ಟೇ. ಈಗ ಸಿದ್ದರಾಮಯ್ಯ ಮತ್ತೊಂದು ಸುತ್ತಿನ ಟೂಲ್‌ಕಿಟ್‌ ಪ್ರಹಸನ ಆರಂಭಿಸಿದ್ದಾರೆ, ಈ ಬಾರಿ ದೊಡ್ಡ ಬೇಟೆಯಾಡುವುದು ಖಚಿತ ಎಂದು ಬಿಜೆಪಿ ಲೇವಡಿ ಮಾಡಿದೆ.

ಸಿದ್ದರಾಮೋತ್ಸವ ಎನ್ನುವುದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಬಣದ ಪೊಲಿಟಿಕಲ್ ಟೂಲ್ ಕಿಟ್! ಇದೊಂದು ವ್ಯವಸ್ಥಿತವಾದ ರಾಜಕೀಯ ಗುಪ್ತಮಾರ್ಗಸೂಚಿಯ ಭಾಗ, ಮೂಲ ಕಾಂಗ್ರೆಸಿಗರ ಸರ್ವನಾಶವೇ ಇದರ ಉದ್ದೇಶ ಎಂದು ಬಿಜೆಪಿ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com