
ಮಂಗಳೂರು/ಶಿವಮೊಗ್ಗ: ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ನಡೆಸುತ್ತಿರುವ ಪಠ್ಯಪುಸ್ತಕಗಳ ಪರಿಷ್ಕರಣೆಯು ತಪ್ಪುಗಳನ್ನು ಸರಿಪಡಿಸುವ ಮತ್ತು ಜನರಲ್ಲಿ ರಾಷ್ಟ್ರೀಯತೆಯ ಭಾವನೆಯನ್ನು ಮೂಡಿಸುವ ಉದ್ದೇಶವನ್ನು ಹೊಂದಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಶನಿವಾರ ಹೇಳಿದ್ದಾರೆ.
ಮಂಗಳೂರಿನ ಸಂಘ ನಿಕೇತನದಲ್ಲಿ ಸಿಟಿಜನ್ಸ್ ಕೌನ್ಸಿಲ್ ಆಯೋಜಿಸಿದ್ದ ‘ಪಠ್ಯಪುಸ್ತಕ ರಾಜಕೀಯ-ಸತ್ಯ ಮತ್ತು ಮಿಥ್ಯ’ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಸಿಟಿ ರವಿ ಅವರು ಮಾತನಾಡಿದರು.
ಇದೇ ವೇಳೆ ಶಿವಮೊಗ್ಗದಲ್ಲಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಪಠ್ಯಪುಸ್ತಕಗಳ ಪರಿಷ್ಕರಣೆಯ ವಿರುದ್ಧ ಸುಳ್ಳುಗಳ ಹಬ್ಬಿಸಲಾಗುತ್ತಿದ್ದು, ಅಗತ್ಯವಿದ್ದಾಗ ಪಠ್ಯಪುಸ್ತಕ ಪರಿಷ್ಕರಣೆ ಮಾಡುವ ವಿಧಾನ ಸಾಮಾನ್ಯವಾಗಿದೆ ಎಂದು ತಿಳಿಸಿದ್ದಾರೆ.
Advertisement