ಹೈಕಮಾಂಡ್ ಮನವೊಲಿಕೆಗೂ 'ಕೇರ್' ಮಾಡದ ಎಂಆರ್ ಸೀತಾರಾಮ್, ರಕ್ಷಾ ರಾಮಯ್ಯ: ಶೀಘ್ರವೇ ಕಾಂಗ್ರೆಸ್ ಗೆ ಗುಡ್ ಬೈ!

ಕಾಂಗ್ರೆಸ್ ಹೈಕಮಾಂಡ್ ಮನವೊಲಿಕೆಗೆ ಬಗ್ಗದ ಸೀತಾರಾಂ ಶೀಘ್ರವೇ ಅಂದರೆ 2023ರ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ತಮ್ಮ ಪುತ್ರ ರಕ್ಷಾ ರಾಮಯ್ಯ  ಜೊತೆ ಕಾಂಗ್ರೆಸ್ ಗೆ ಗುಡ್ ಬೈ ಹೇಳುವ ಸಾಧ್ಯತೆಗಳು ದಟ್ಟವಾಗಿವೆ.
ಎಂ.ಆರ್ ಸೀತಾರಾಮ್
ಎಂ.ಆರ್ ಸೀತಾರಾಮ್

ಬೆಂಗಳೂರು: ರಕ್ಷಾ ರಾಮಯ್ಯ ಅವರನ್ನು ಇಂಡಿಯನ್ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಮಾಜಿ ಸಚಿವ ಎಂ.ಆರ್ ಸೀತಾರಾಮ್ ಅವರನ್ನು ಸಮಾಧಾನಪಡಿಸುವ ನಡೆಸಿದ ಯತ್ನಗಳು ವಿಫಲವಾಗಿವೆ.

ಕಾಂಗ್ರೆಸ್ ಹೈಕಮಾಂಡ್ ಮನವೊಲಿಕೆಗೆ ಬಗ್ಗದ ಸೀತಾರಾಂ ಶೀಘ್ರವೇ ಅಂದರೆ 2023ರ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ತಮ್ಮ ಪುತ್ರ ರಕ್ಷಾ ರಾಮಯ್ಯ  ಜೊತೆ ಕಾಂಗ್ರೆಸ್ ಗೆ ಗುಡ್ ಬೈ ಹೇಳುವ ಸಾಧ್ಯತೆಗಳು ದಟ್ಟವಾಗಿವೆ.

ವಿಧಾನಸಭೆಯಿಂದ ಪರಿಷತ್ ನಾಮ ನಿರ್ದೇಶನ ಮಾಡಲು ಎಂ ಆರ್ ಸೀತಾರಾಂ ಅವರನ್ನು ಪರಿಗಣಿಸದಿರುವುದು ಅಸಮಾಧಾನಕ್ಕೆ ಕಾರಣವಾಗಿದೆ. ಪಕ್ಷವು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಮತ್ತು ವಕ್ತಾರ ನಾಗರಾಜು ಯಾದವ್ ಅವರನ್ನು ಆಯ್ಕೆ ಮಾಡಿರುವುದು ಸೀತಾರಾಮ್ ಅವರ ಕಣ್ಣು ಕೆಂಪಾಗಿಸಿದೆ.

2023 ರ ವಿಧಾನಸಭಾ ಚುನಾವಣೆಯಲ್ಲಿ ಮಲ್ಲೇಶ್ವರಂನಿಂದ ಸ್ಪರ್ಧಿಸುವಂತೆ ಪಕ್ಷವು ಅವರನ್ನು ಮನವೊಲಿಸಲು ಪ್ರಯತ್ನಿಸಿದರೂ, ಅವರು ಆ ಪ್ರಸ್ತಾಪವನ್ನು ಸ್ವೀಕರಿಸಲು ಸಿದ್ಧರಿಲ್ಲ ಎಂದು ಮೂಲಗಳು ತಿಳಿಸಿವೆ. 'ಮಲ್ಲೇಶ್ವರಂ ಜತೆ ನಂಟು ಹೊಂದಿರುವ ಕಾಂಗ್ರೆಸ್‌ನ ಯಾವೊಬ್ಬ ನಾಯಕರು ಇಲ್ಲಿಂದ ಸ್ಪರ್ಧಿಸಲು ಬಯಸುವುದಿಲ್ಲ. ಸೀತಾರಾಮ್ ಕೂಡ ರಾಜಕೀಯ ಹುತಾತ್ಮರಾಗಲು ಬಯಸುವುದಿಲ್ಲ ಎಂದು ತಿಳಿಸಿದ್ದಾರೆ.

ಸೀತಾರಾಮ್ ಅವರನ್ನು ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಗ್ರಹಿಸಿದ ಕಾಂಗ್ರೆಸ್, ಜೂನ್ 3 ರಂದು ರಕ್ಷಾ ಅವರನ್ನು ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ನೇಮಿಸುವ ಮೂಲಕ ಆಡಳಿತ ಪಕ್ಷ ಬಿಜೆಪಿಗೆ ಚೆಕ್ ಮೇಟ್ ಮಾಡಲು ಪ್ರಯತ್ನಿಸಿತು. ಆದರೆ ಎಂಆರ್ ಸೀತಾರಾಮ್ ಅದ್ಯಾವುದಕ್ಕೂ ಸೊಪ್ಪು ಹಾಕಲಿಲ್ಲ. ತಮ್ಮ ತಂದೆ ಶಿಕ್ಷಣ ತಜ್ಞ ಎಂಆರ್ ಸೀತಾರಾಮ್ ಅವರು ನಿರ್ಮಿಸಿದ ಕೆಲವು ಪ್ರಮುಖ ಸಂಸ್ಥೆಗಳನ್ನು ನಡೆಸುತ್ತಿದ್ದಾರೆ.

ಜೂನ್ 24 ರಂದು ಅರಮನೆ ಮೈದಾನದಲ್ಲಿ ತಮ್ಮ ಬೆಂಬಲಿಗರ ಸಮಾವೇಶವನ್ನು ಆಯೋಜಿಸುವ ಮೂಲಕ ಎಂಆರ್ ಸೀತಾರಾಮ್ ಕಾಂಗ್ರೆಸ್ ಲೆಕ್ಕಾಚಾರವನ್ನು ಬುಡಮೇಲು ಮಾಡಲು ಯೋಜಿಸುತ್ತಿದ್ದಾರೆ. ಸಮಾವೇಶಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯಿಂದಲೂ ಆಗಮಿಸುವ ತಮ್ಮ ಬೆಂಬಲಿಗರ ಪ್ರತಿಕ್ರಿಯೆಯನ್ನು ಪಡೆದುಕೊಳ್ಳುವುದಾಗಿ ಹೇಳಿದರು. ಚಿಕ್ಕಬಳ್ಳಾಪುರದಲ್ಲಿ ಬಲಿಜ ಸಮುದಾಯದ ಜನಸಂಖ್ಯೆ ಗಣನೀಯವಾಗಿದೆ.

2024ರಲ್ಲಿ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಿಂದ ಸೀತಾರಾಮ್ ಅವರನ್ನು ಹಾಗೂ 2023ರ ವಿಧಾನಸಭೆ ಚುನಾವಣೆಯಲ್ಲಿ ಬಾಗೇಪಲ್ಲಿ ಕ್ಷೇತ್ರದಿಂದ ರಕ್ಷಾ ರಾಮಯ್ಯ ಅವರನ್ನು ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

ಪಕ್ಷದ ವರಿಷ್ಠರಾದ ಸೋನಿಯಾ ಮತ್ತು ರಾಹುಲ್ ಗಾಂಧಿಗೆ ಇಡಿ ಸಮನ್ಸ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆಯಲ್ಲಿ ತಂದೆ-ಮಗ ಇಬ್ಬರು ಗೈರಾಗಿರುವುದು ಅಸಮಾಧಾನವು ಬಹಿರಂಗವಾಗಿದೆ. ಕಾಂಗ್ರೆಸ್‌ನ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ತಮ್ಮ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ ಎಂದು ಸೀತಾರಾಮ್ ಆರೋಪಿಸಿದ್ದಾರೆ.

ದಿವಂಗತ ರಾಜೀವ್ ಗಾಂಧಿ ಪ್ರಧಾನಿಯಾಗಿದ್ದಾಗಿನಿಂದ ಪಕ್ಷಕ್ಕೆ ಅವರು ನೀಡಿದ ಕೊಡುಗೆಯನ್ನು ಅವರು ಸ್ಮರಿಸಿದ್ದಾರೆ. ಅವರು 1999 ಮತ್ತು 2004 ರಲ್ಲಿ ಕಾಂಗ್ರೆಸ್ ನಿಂದ ಮಲ್ಲೇಶ್ವರಂ ಕ್ಷೇತ್ರವನ್ನು ಗೆದ್ದರು. ಆದರೆ 2008 ರ ವಿಧಾನಸಭಾ ಚುನಾವಣೆಯಿಂದ, ಈ ಪಟ್ಟಭದ್ರ ಹಿತಾಸಕ್ತಿಗಳು ಚಿತಾವಣೆ ಆರಂಭಿಸಿವೆ ಎಂದು ದೂರಿದ್ದಾರೆ.

2009ರ ಲೋಕಸಭೆ ಚುನಾವಣೆಗೆ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲು ಪೂರ್ವ ತಯಾರಿ ನಡೆಸಿದ್ದರೂ ಕೆಲವರ ಮಧ್ಯಪ್ರವೇಶದಿಂದ ಕೊನೇ ಕ್ಷಣದಲ್ಲಿ ಟಿಕೆಟ್ ನಿರಾಕರಿಸಲಾಯೇಿತು ಎಂದು ಸೀತಾರಾಮ್ ಹೇಳಿದ್ದಾರೆ.

ತಮ್ಮ ಪುತ್ರ ರಕ್ಷಾ ರಾಮಯ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ತ್ಯಾಗ ಮಾಡಿದ 4 ತಿಂಗಳ ನಂತರ ಆತನಿಗೆ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನ ನೀಡಲಾಗಿದೆ. ಪಕ್ಷದ ಇತ್ತೀಚಿನ ಬೆಳವಣಿಗೆಗಳು ತಮಗೆ ಸರಿ ಕಾಣುತ್ತಿಲ್ಲ, ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆ ಜೊತೆ ಉತ್ತಮ ಸಂಬಂಧ ಹೊಂದಿದ್ದೇನೆ, ಜೂನ್ 24 ರ ಸಮಾವೇಶದಲ್ಲಿ ತಮ್ಮ ಬೆಂಬಲಿಗರ ಜೊತೆ ಚರ್ಚಿಸಿ ಮುಂದಿನ ರಾಜಕೀಯ ನಡೆಯ ಬಗ್ಗೆ ತೀರ್ಮಾನಿಸುವುದಾಗಿ ಎಂ.ಆರ್ ಸೀತಾರಾಮ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com