‘ಚಿಂತನೆಗಳಿಲ್ಲದ ಬಿಜೆಪಿಯವರಿಗೆ ವಾಟ್ಸಾಪ್ ಯೂನಿವರ್ಸಿಟಿಯ ಸುಳ್ಳುಗಳೇ ಮೂಲ’
ಬೆಂಗಳೂರು: ಚಿಂತನೆಗಳಿಲ್ಲದ ಬಿಜೆಪಿಯವರಿಗೆ ವಾಟ್ಸ್ಆ್ಯಪ್ ಯೂನಿವರ್ಸಿಟಿಯ ಸುಳ್ಳುಗಳೇ ಮೂಲ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯನ್ನಾಗಿ ದ್ರೌಪದಿ ಮುರ್ಮುಗೆ ಅವರನ್ನು ಆಯ್ಕೆ ಮಾಡಿರುವ ಕುರಿತು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಾಡಿದ್ದ ಟ್ವೀಟ್‌ಗೆ ಪ್ರಿಯಾಂಕ್ ತಿರುಗೇಟು ಕೊಟ್ಟಿದ್ದಾರೆ.
‘ಮುಸ್ಲಿಂ ವ್ಯಕ್ತಿಯನ್ನು ರಾಷ್ಟ್ರಪತಿ ಮಾಡಿದ್ದು ನಾವೇ. ದಲಿತ ವ್ಯಕ್ತಿಯನ್ನು ರಾಷ್ಟ್ರಪತಿ ಮಾಡಿದ್ದೂ ನಾವೇ. ಇಂದು ಆದಿವಾಸಿ ಬುಡಕಟ್ಟು ಜನಾಂಗದ ಮಹಿಳೆಯನ್ನು ರಾಷ್ಟ್ರಪತಿಯನ್ನಾಗಿ ಮಾಡುವುದು ನಾವೇ... ಏಕೆಂದರೆ ನಾವು ಜಾತಿವಾದಿಗಳಲ್ಲಾ - ರಾಷ್ಟ್ರವಾದಿಗಳು. (ವಾಟ್ಸ್ಆ್ಯಪ್‌ನಲ್ಲಿ ಬಂದಿದ್ದು)‘ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಬುಧವಾರ ಟ್ವೀಟ್ ಮಾಡಿದ್ದರು.
ಈ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, ‘ಚಿಂತನೆಗಳಿಲ್ಲದ ಬಿಜೆಪಿಯವರಿಗೆ ವಾಟ್ಸ್ಆ್ಯಪ್ ಯೂನಿವರ್ಸಿಟಿಯ ಸುಳ್ಳುಗಳೇ ಮೂಲ. ಅಂದಹಾಗೆ, ಎಸ್‌ಇ/ ಎಸ್‌ಟಿ ಜನಾಂಗದ 7000 ರು. ಕೋಟಿ, ದಲಿತರ ಪಾಲಿನ ಬೋರ್‌ವೆಲ್ ಹೆಸರಲ್ಲಿ 431 ರು. ಕೋಟಿ, ಭೋವಿ ನಿಗಮದಲ್ಲಿ 150 ಕೋಟಿ ರು. ಲೂಟಿ ಮಾಡುವುದು ನಿಮ್ಮ ರಾಷ್ಟ್ರವಾದವೇ’ ಎಂದು ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ