ಭವಾನಿ ರೇವಣ್ಣ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಶಾಸಕ ಪ್ರೀತಂ ವಿರುದ್ಧ ಜೆಡಿಎಸ್ ಬೃಹತ್ ಪ್ರತಿಭಟನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಮಾಜಿ ಜಿಪಂ ಸದಸ್ಯೆ ಭವಾನಿ ರೇವಣ್ಣ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದ ಬಿಜೆಪಿ ಶಾಸಕ ಪ್ರೀತಂ ಜೆ ಗೌಡ ವಿರುದ್ಧ ಜೆಡಿಎಸ್ ಬೃಹತ್ ಪ್ರತಿಭಟನೆ ನಡೆಸಿದೆ.
ಭವಾನಿ ರೇವಣ್ಣ-ಪ್ರೀತಂ ಗೌಡ
ಭವಾನಿ ರೇವಣ್ಣ-ಪ್ರೀತಂ ಗೌಡ
Updated on

ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಮಾಜಿ ಜಿಪಂ ಸದಸ್ಯೆ ಭವಾನಿ ರೇವಣ್ಣ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದ ಬಿಜೆಪಿ ಶಾಸಕ ಪ್ರೀತಂ ಜೆ ಗೌಡ ವಿರುದ್ಧ ಜೆಡಿಎಸ್ ಬೃಹತ್ ಪ್ರತಿಭಟನೆ ನಡೆಸಿದೆ. 

ಹೇಮಾವತಿ ಪ್ರತಿಮೆ ವೃತ್ತದಿಂದ ಜೆಡಿಎಸ್ ಕಾರ್ಯಕರ್ತರು ರ್ಯಾಲಿ ಆರಂಭಿಸಿದ್ದು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿತು. ಈ ವೇಳೆ ಕಾರ್ಯಕರ್ತರನ್ನುದ್ದೇಶಿಸಿ ಜೆಡಿಎಸ್ ಮುಖಂಡ ಹಾಗೂ ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೆ.ಎಂ.ರಾಜೇಗೌಡ ಮಾತನಾಡಿದ, ಹಾಸನದ ಬಿಜೆಪಿ ಶಾಸಕ ಪ್ರೀತಂ.ಜೆ.ಗೌಡ ಅವರು ಭವಾನಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಇಡೀ ಮಹಿಳಾ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಚುನಾಯಿತ ಪ್ರತಿನಿಧಿಯಾಗಿರುವ ಅವರು ಹೇಳಿಕೆ ನೀಡುವ ಮುನ್ನ ಎರಡೆರಡು ಬಾರಿ ಯೋಚಿಸಬಹುದಿತ್ತು. ಕ್ಷಮೆ ಯಾಚಿಸಲು ವಿಫಲವಾದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಶಾಸಕರಿಗೆ ಎಚ್ಚರಿಕೆ ನೀಡಿದರು. 

ಪ್ರೀತಂ ಗೌಡ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಜೆಡಿಎಸ್ ಮಾಜಿ ಶಾಸಕ ಬಿ.ವಿ.ಕರೀಗೌಡ ಅವರು, ಶಾಸಕರು ಸಂಸ್ಕಾರವಿಲ್ಲದ ರಾಜಕಾರಣಿ. ಕೇವಲ ರಾಜಕೀಯ ಲಾಭಕ್ಕಾಗಿ ಜೆಡಿಎಸ್ ಮುಖಂಡರನ್ನೇ ಟಾರ್ಗೆಟ್ ಮಾಡುತ್ತಿರುವ ಶಾಸಕರ ವರ್ತನೆಯನ್ನು ಸಮಾಜ ಗಮನಿಸುತ್ತಿದೆ. ಮುಂಬರುವ ಚುನಾವಣೆಯಲ್ಲಿ ಪ್ರೀತಂ ಗೌಡ ಅವರಿಗೆ ತಕ್ಕ ಪಾಠ ಕಲಿಸಲು ಜನತೆ ಕಾಯುತ್ತಿದ್ದಾರೆ ಎಂದರು.

ವಿವಿಧ ತಾಲೂಕುಗಳಿಂದ ನೂರಾರು ಮಹಿಳಾ ಕಾರ್ಮಿಕರು ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು. ಬಿಜೆಪಿ ಶಾಸಕರ ವಿರುದ್ಧ ನಿರಂತರವಾಗಿ ಘೋಷಣೆಗಳನ್ನು ಕೂಗಿದ ಜೆಡಿಎಸ್ ಮಹಿಳಾ ಕಾರ್ಯಕರ್ತರು ಶೀಘ್ರ ಕ್ಷಮೆಯಾಚಿಸಲು ವಿಫಲವಾದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಹಾಸನ ತಾಲೂಕು ಜೆಡಿಎಸ್‌ ಅಧ್ಯಕ್ಷ ಎಸ್‌.ದ್ಯಾವೇಗೌಡ, ರಘುಗೌಡ, ಎಚ್‌.ಪಿ.ಸ್ವರೂಪ್‌, ಸೈಯದ್‌ ಅಕ್ಬರ್‌ ಅವರ ಹೇಳಿಕೆಯನ್ನು ಖಂಡಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com