ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಹಾಲಿ ಶಾಸಕರು-ಆಕಾಂಕ್ಷಿಗಳ ಟಿಕೆಟ್ ಫೈಟ್; ಕಾಂಗ್ರೆಸ್ ಗೆ ನುಂಗಲಾಗದ ಬಿಸಿತುಪ್ಪ!

ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ನಲ್ಲಿ ಟಿಕೆಟ್ ಫೈಟ್ ಆರಂಭವಾಗಿದ್ದು, ನಾಯಕರಿಗೆ ಅಭ್ಯರ್ಥಿಗಳ ಆಯ್ಕೆ ತಲೆ ನೋವಾಗಿ ಪರಿಣಮಿಸಿದೆ.
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್

ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ನಲ್ಲಿ ಟಿಕೆಟ್ ಫೈಟ್ ಆರಂಭವಾಗಿದ್ದು, ನಾಯಕರಿಗೆ ಅಭ್ಯರ್ಥಿಗಳ ಆಯ್ಕೆ ತಲೆ ನೋವಾಗಿ ಪರಿಣಮಿಸಿದೆ.

ಮುಂಬರುವ ವಿಧಾನಸಭೆ ಚುನಾವಣೆಗೆ ಹಾಲಿ ಶಾಸಕರು ಮತ್ತು ಹೊಸ ಅಭ್ಯರ್ಥಿಗಳ ನಡುವೆ ಟಿಕೆಟ್ ಗಾಗಿ ತೀವ್ರ ಪೈಪೋಟಿ ಎದುರಾಗಿದೆ, ಲಿಂಗಸೂಗೂರಿನಲ್ಲಿ ತಮ್ಮ ವಿರುದ್ಧ ಕಣಕ್ಕಿಳಿಸಲು ಯತ್ನಿಸುತ್ತಿರುವ ಸಣ್ಣ ನೀರಾವರಿ ಇಲಾಖೆ ಮಾಜಿ ಕಾರ್ಯದರ್ಶಿ ಕೆ.ರುದ್ರಯ್ಯ ವಿರುದ್ಧ ಕಾಂಗ್ರೆಸ್ ಶಾಸಕ ದುರ್ಗಪ್ಪ ಹೂಲಗೇರಿ ತೀವ್ರ ಪೈಪೋಟಿ ನಡೆಸುತ್ತಿದ್ದಾರೆ.

ರುದ್ರಯ್ಯ ಕಳೆದ ಎರಡು ತಿಂಗಳಿಂದ ನಿರಂತರವಾಗಿ ಕ್ಷೇತ್ರಕ್ಕೆ ಭೇಟಿ ನೀಡಿ ಮತದಾರರನ್ನು ಭೇಟಿಯಾಗುತ್ತಿದ್ದಾರೆ. ಬೀದಿ ಬೀದಿಗಳಲ್ಲಿ ಸಂಚರಿಸುತ್ತಿರುವ ರುದ್ರಯ್ಯ ಅವರಿಗೆ ಸ್ಥಳೀಯ ಕಾಂಗ್ರೆಸ್ ನಾಯಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ರುದ್ರಯ್ಯ ತಿಳಿಸಿದ್ದಾರೆ.

ಪಕ್ಷದ ಹೈಕಮಾಂಡ್ ನಿರ್ಧಾರದ ಮೇಲೆ ನನಗೆ ವಿಶ್ವಾಸವಿದೆ ಎಂದು ಶಾಸಕ ಹೂಲಗೇರಿ ತಿಳಿಸಿದ್ದಾರೆ. ಈ ಕುರಿತು ಸಿಎಲ್‌ಪಿ ನಾಯಕ ಸಿದ್ದರಾಮಯ್ಯ, ಪಿಸಿಸಿ ಮುಖ್ಯಸ್ಥ ಡಿಕೆ ಶಿವಕುಮಾರ್‌, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾಹಿತಿ ನೀಡಿದ್ದಾರೆ. ಟಿಕೆಟ್ ಘೋಷಣೆಯಾದ ನಂತರ ಸಮಸ್ಯೆ ಬಗೆಹರಿಯಲಿದೆ ಎಂದು ಹೂಲಗೇರಿ ಭರವಸೆಯ ಮಾತುಗಳನ್ನಾಡಿದ್ದಾರೆ.

ಕಳೆದ ಬಾರಿ ದುರ್ಗಪ್ಪ ಹೂಲಗೇರಿ ಸುಮಾರು 5 ಸಾವಿರ ಮತಗಳಿಂದ ಗೆದ್ದಿದ್ದರು. ಜೆಡಿಎಸ್‌ನ ಬಂಡಿ ಸಿದ್ದು ಎರಡನೇ ಸ್ಥಾನ ಪಡೆದರೆ, ಬಿಜೆಪಿಯ ಮಾನಪ್ಪ ವಜ್ಜಲ್ ಮೂರನೇ ಸ್ಥಾನ ಪಡೆದರು.

ಚುನಾವಣೆಗೆ ಇನ್ನು ಆರು ತಿಂಗಳು ಬಾಕಿ ಉಳಿದಿದ್ದು, ಇಬ್ಬರು ಆಕಾಂಕ್ಷಿಗಳು ಕಣಕ್ಕಿಳಿದಿದ್ದಾರೆ, ಅವರ ರಾಜಕೀಯ ವಿರೋಧಿಗಳು ಸದ್ದಿಲ್ಲದೆ ನೋಡುತ್ತಿದ್ದಾರೆ.

ಇದೊಂದೆ ಅಲ್ಲ, ಚಿಕ್ಕಪೇಟೆಯಲ್ಲಿ ಕೆಜಿಎಫ್ ಬಾಬು ಅಲಿಯಾಸ್ ಸ್ಕ್ರ್ಯಾಪ್ ಬಾಬು ಆರ್.ವಿ.ದೇವರಾಜ್ ಗೆ ಸವಾಲು ಹಾಕಿದ್ದಾರೆ. ನಾಯಕತ್ವಕ್ಕೆ ತಿಳಿಸಿದರೂ ಬಾಬು ವಿರುದ್ಧ ಕಠಿಣ ಕ್ರಮ ಕೈಗೊಂಡಿರಲಿಲ್ಲ. ಕಲಘಟಗಿಯಲ್ಲಿ ಇಬ್ಬರು ಪ್ರಬಲ ಅಭ್ಯರ್ಥಿಗಳಾದ ಸಂತೋಷ್ ಲಾಡ್ ಮತ್ತು ನಾಗರಾಜ್ ಚೆಬ್ಬಿ ನಡುವೆ ಹಣಾಹಣಿ ಏರ್ಪಟ್ಟಿದ್ದು, ನಾಯಕತ್ವಕ್ಕೆ ತಲುಪಿದೆ.

ಹಲವು ಕ್ಷೇತ್ರಗಳಲ್ಲಿ ಒಬ್ಬರಿಗಿಂತ ಹೆಚ್ಚು ಪ್ರಬಲ ಅಭ್ಯರ್ಥಿಗಳಿದ್ದಾರೆ. 'ಕೆಲವು ಕ್ಷೇತ್ರಗಳಲ್ಲಿ ಈಗಿರುವ ನಾಯಕರಿಗೆ ತೊಂದರೆಯಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಅವರ ಸಭೆ ಕರೆದು ಪರಿಸ್ಥಿತಿಯನ್ನು ಸರಿಪಡಿಸುತ್ತೇವೆ. ಡಿಸೆಂಬರ್ ವೇಳೆಗೆ ಸುಮಾರು 150 ಟಿಕೆಟ್‌ಗಳನ್ನು ಅಂತಿಮಗೊಳಿಸಲು ನಾವು ಯೋಜಿಸುತ್ತಿದ್ದೇವೆ ಟಿಕೆಟ್ ಘೋಷಣೆಯೊಂದಿಗೆ ಸಮಸ್ಯೆ ಸಂಪೂರ್ಣವಾಗಿ ಬಗೆಹರಿಯುತ್ತದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com