ತುಮಕೂರು: ಜೆಡಿಎಸ್ ಪಕ್ಷಕ್ಕೆ ಮಾಜಿ ಶಾಸಕ ಹೆಚ್.ನಿಂಗಪ್ಪ ರಾಜೀನಾಮೆ

ಜೆಡಿಎಸ್ ಮುಖಂಡ ಹಾಗೂ ಮಾಜಿ ಶಾಸಕ ಹೆಚ್‌.ನಿಂಗಪ್ಪ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.
ಹೆಚ್'ಡಿ ಕುಮಾರಸ್ವಾಮಿ ಜೊತೆಗಿರುವ
ಹೆಚ್'ಡಿ ಕುಮಾರಸ್ವಾಮಿ ಜೊತೆಗಿರುವ
Updated on

ತುಮಕೂರು: ಜೆಡಿಎಸ್ ಮುಖಂಡ ಹಾಗೂ ಮಾಜಿ ಶಾಸಕ ಹೆಚ್‌.ನಿಂಗಪ್ಪ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.

2006ರಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕರಾಗಿದ್ದ ನಿಂಗಪ್ಪ ಅವರು 2013ರಲ್ಲಿ JDS ಟಿಕೆಟ್​ ಸಿಗದಿದ್ದಕ್ಕೆ ಕೆಜೆಪಿಯಿಂದ ಸ್ಪರ್ಧಿಸಿದ್ದರು. ಬಳಿಕ ಕಾಂಗ್ರೆಸ್ ಸೇರಿದ್ದ ನಿಂಗಪ್ಪನವರು ಮತ್ತೆ 2018ರಲ್ಲಿ ಜೆಡಿಎಸ್​ಗೆ ಮರಳಿದ್ದರು. ಇದೀಗ ಜೆಡಿಎಸ್ ಪಕ್ಷಕ್ಕೆ ನಿಂಗಪ್ಪ ಅವರು ರಾಜೀನಾಮೆ ನೀಡಿದ್ದಾರೆ.

ಪಕ್ಷದ ಎಲ್ಲಾ ಚಟುವಟಿಕೆಗಳಿಂದ ದೂರ ಇಟ್ಟಿದ್ದಕ್ಕೆ ಅಸಮಾಧಾನವಾಗಿದೆ ಎಂದು ರಾಜೀನಾಮೆ ಪತ್ರದಲ್ಲಿ ಮಾಜಿ ಶಾಸಕ ನಿಂಗಪ್ಪ ಉಲ್ಲೇಖಿಸಿದ್ದಾರೆ.

2018 ರಲ್ಲಿ ಹೆಚ್​ಡಿ ಕುಮಾರಸ್ವಾಮಿ ಅವರು ಹೆಚ್​.ನಿಂಗಪ್ಪ ನವರನ್ನು ರಾಜ್ಯ ಪ್ರದಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಎಂದು ನೇಮಿಸಿ ಆದೇಶ ಪತ್ರ ನೀಡಿದ್ದರು‌. ಆದ್ರೆ ಅದು ಪತ್ರವಾಗಿಯೇ ಉಳಿಯಿತು. ಪಕ್ಷದ ಎಲ್ಲಾ ಚಟುವಟಿಕೆಗಳಿಂದ ನನ್ನ ದೂರ ಇಟ್ಟಿದ್ದರು ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com