ನೆಹರೂ ಬ್ರಿಟೀಷರಿಗೆ ಬರೆದ ಕ್ಷಮಾಪಣಾ ಪತ್ರದ ಬಗ್ಗೆ ರಾಹುಲ್ ಗಾಂಧಿ ಮೌನವೇಕೆ? ಬಿಜೆಪಿ

ವಿನಾಯಕ ದಾಮೋದರ್ ಸಾವರ್ಕರ್  ಬ್ರಿಟೀಷರಿಗೆ ಕ್ಷಮಾದಾನ ಅರ್ಜಿ ಬರೆದಿದ್ದರು ಎಂಬ ರಾಹುಲ್ ಗಾಂಧಿ ಆರೋಪದ ವಿರುದ್ಧ ಬಿಜೆಪಿ ಟೀಕಾ ಪ್ರಹಾರ ನಡೆಸಿದ್ದು, ನೆಹರೂ ಬ್ರಿಟೀಷರಿಗೆ ಬರೆದ ಕ್ಷಮಾಪಣಾ ಪತ್ರದ ಬಗ್ಗೆ ರಾಹುಲ್ ಮೌನವೇಕೆ ಎಂದು ಪ್ರಶ್ನಿಸಿದೆ.
ರಾಹುಲ್, ವೀರ ಸಾವರ್ಕರ್
ರಾಹುಲ್, ವೀರ ಸಾವರ್ಕರ್

ಬೆಂಗಳೂರು: ವಿನಾಯಕ ದಾಮೋದರ್ ಸಾವರ್ಕರ್  ಬ್ರಿಟೀಷರಿಗೆ ಕ್ಷಮಾದಾನ ಅರ್ಜಿ ಬರೆದಿದ್ದರು ಎಂಬ ರಾಹುಲ್ ಗಾಂಧಿ ಆರೋಪದ ವಿರುದ್ಧ ಬಿಜೆಪಿ ಟೀಕಾ ಪ್ರಹಾರ ನಡೆಸಿದ್ದು, ನೆಹರೂ ಬ್ರಿಟೀಷರಿಗೆ ಬರೆದ ಕ್ಷಮಾಪಣಾ ಪತ್ರದ ಬಗ್ಗೆ ರಾಹುಲ್ ಮೌನವೇಕೆ ಎಂದು ಪ್ರಶ್ನಿಸಿದೆ.

 ಸಾಮಾಜಿಕ ಜಾಲತಾಣ ಟ್ವೀಟರ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಚಿನ್ನದ ಚಮಚ ಬಾಯಲ್ಲಿಟ್ಟುಕೊಂಡು ಬೆಳೆದ ರಾಜಕೀಯ ನಿರುದ್ಯೋಗಿ ರಾಹುಲ್ ಗಾಂಧಿ ವೀರ ಸಾವರ್ಕರ್‌ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದ. ಕಠಿಣಾತಿ ಕಠಿಣ ಶಿಕ್ಷೆ ಎದುರಿಸಿದ ಸಾವರ್ಕರ್‌ ವೀರನಲ್ಲ ಎಂದಾದರೆ, ಅಪ್ರಬುದ್ಧ ನಡೆಗಳಿಂದ ನ್ಯಾಯಾಲಯದಿಂದ ಆಗಾಗ್ಗೆ ಛೀಮಾರಿ ಹಾಕಿಸಿಕೊಂಡು ಕ್ಷಮೆ ಕೇಳುವ ರಾಹುಲ್‌ ಗಾಂಧಿ ಏನು? ಎಂದು ಕೇಳಿದೆ.

ಕೇವಲ ಎರಡು ವರ್ಷದ ಶಿಕ್ಷೆಯನ್ನೇ ತಡೆದುಕೊಳ್ಳಲಾರದ ಕುಟುಂಬದವರು ಸ್ವಾತಂತ್ರ್ಯದ ಹೆಗ್ಗುರುತು, ಕಠಿಣಾತಿಕಠಿಣ ಶಿಕ್ಷೆ ಎದುರಿಸಿದ ಸಾವರ್ಕರ್‌ ಅವರ ವೀರತ್ವದ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದವಾಗಿದೆ ಎಂದು ಟೀಕಿಸಿದೆ.

ಸಾವರ್ಕರ್‌ ಧೀರತೆಗೆ ಬೆರಗಾಗಿ ಸ್ವತಃ ಇಂದಿರಾ ಗಾಂಧಿ ಅವರೇ  ಭಾರತದ ವೀರ ಸುಪುತ್ರ" ಎಂದು ಸಂಬೋಧಿಸಿ ವೀರ ಸಾವರ್ಕರ್ ಜನ್ಮಶತಮಾನೋತ್ಸವ ಆಚರಣೆಗೆ ಸಹಕರಿಸಿದ್ದರು. ಸಾವರ್ಕರ್‌ ಕುರಿತಾಗಿ ಅಂಚೆಚೀಟಿ ಬಿಡುಗಡೆ ಮಾಡಿ, ಸಾಕ್ಷ್ಯಚಿತ್ರ ನಿರ್ಮಿಸಲು ಆದೇಶಿಸಿದ್ದರು.  ಸಾವರ್ಕರ್ ಟ್ರಸ್ಟ್‌ಗೆ 11 ಸಾವಿರ ರೂ. ದೇಣಿಗೆ ಕೂಡಾ ನೀಡಿದ್ದರು ಎಂದು ಸ್ಮರಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com