ಕಾಂಗ್ರೆಸ್ ಬಿಟ್ಟು ತಪ್ಪು ಮಾಡಿದೆ, ಅದಕ್ಕೆ ಜನ ನನ್ನನ್ನು ಸೋಲಿಸಿದರು: ಎಂಟಿಬಿ ನಾಗರಾಜ್

ನಾನು ಕಾಂಗ್ರೆಸ್ ಬಿಟ್ಟು ತಪ್ಪು ಮಾಡಿದೆ. ಬಿಜೆಪಿಗೆ ಬಂದಿದ್ದಕ್ಕೆ ಜನ ನನ್ನನ್ನು ಸೋಲಿಸಿಬಿಟ್ಟರು ಎಂದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಅವರು ಶನಿವಾರ ಸಾರ್ವಜನಿಕ ಸಭೆಯಲ್ಲಿ ಬಹಿರಂಗವಾಗಿಯೇ ಹೇಳಿದ್ದಾರೆ.
ಎಂ ಟಿಬಿ ನಾಗರಾಜ್
ಎಂ ಟಿಬಿ ನಾಗರಾಜ್

ಚಿಕ್ಕಬಳ್ಳಾಪುರ: ನಾನು ಕಾಂಗ್ರೆಸ್ ಬಿಟ್ಟು ತಪ್ಪು ಮಾಡಿದೆ. ಬಿಜೆಪಿಗೆ ಬಂದಿದ್ದಕ್ಕೆ ಜನ ನನ್ನನ್ನು ಸೋಲಿಸಿಬಿಟ್ಟರು ಎಂದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಅವರು ಶನಿವಾರ ಸಾರ್ವಜನಿಕ ಸಭೆಯಲ್ಲಿ ಬಹಿರಂಗವಾಗಿಯೇ ಹೇಳಿದ್ದಾರೆ.

ಇಂದು ಗೌರಿಬಿದನೂರು ತಾಲೂಕಿನ ಜರಬಂಡಹಳ್ಳಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಎಂಟಿಬಿ ನಾಗರಾಜ್, ಕಳೆದ ಉಪ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದಿದ್ದಕ್ಕೆ ಜನ ನನ್ನನ್ನು ಸೋಲಿಸಿಬಿಟ್ಟರು ಎಂದರು. ಈ ವೇಳೆ ವೇದಿಕೆಯಲ್ಲಿ ಕಂದಾಯ ಸಚಿವ ಆರ್ ಅಶೋಕ್ ಮತ್ತು ಆರೋಗ್ಯ ಸಚಿವ ಸುಧಾಕರ್ ಸಹ ಇದ್ದರು.

ಯಾವ ಶಾಸಕರು, ಯಾವ ಸರ್ಕಾರ ಕೆಲಸ ಮಾಡಿದೆ ಅಂತ ಜನರೇ ನೆನೆಪಿಟ್ಟುಕೊಳ್ಳಬೇಕು. ಯಾಕೆಂದರೆ ಚುನಾವಣೆ ಬಂದ ನಾಲ್ಕೈದು ದಿನದಲ್ಲೇ ಮೆರೆತು ಬಿಡುತ್ತೀರಾ. ನಿದ್ದೆ ಮಂಪರು ಬಂದ ಹಾಗೆ ತೂಕಡಿಸಿಬಿಡುತ್ತೀರಾ. ಮೊನ್ನೆ ನಡೆದ ಬೈ ಎಲೆಕ್ಷನ್‍ನಲ್ಲಿ ನಾನು ಸೋಲಬೇಕಿತ್ತಾ? ಆದರೆ ಸೋಲಿಸಿಬಿಟ್ಟಿದ್ದೀರಾ ಎಂದು ಬೇಸರ ವ್ಯಕ್ತಪಡಿಸಿದರು.

ಸುಧಾಕರ್ ಜೊತೆಗೆ ನಾನು ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದನಲ್ಲ ಅದಕ್ಕೆ ಸೋಲಿಸಿಬಿಟ್ಟಿದ್ದೀರಾ. ಆದರೆ ಸುಧಾಕರ್‌ನನ್ನು ಗೆಲ್ಲಿಸಿದ್ದೀರಾ. ಇದೇ ನನಗೆ ನೋವು ತರಿಸಿದೆ. ಸೋಲಿನಿಂದ ನನಗೆ ಏನೂ ಕಷ್ಟವಾಗಲಿಲ್ಲ. ಆದರೆ ಹೊಸಕೋಟೆ ತಾಲೂಕಿನ ಅಭಿವೃದ್ಧಿಗೆ ಹಿನ್ನೆಡೆ ಆಯಿತು. ಹೊಸಕೋಟೆ ಜನರ ಸೇವೆ ಮಾಡಲು ಆಗಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com