2023 ಅಸೆಂಬ್ಲಿ ಚುನಾವಣೆಯಲ್ಲಿ ಜೆಡಿಎಸ್ ನೊಂದಿಗೆ ಮೈತ್ರಿಯ ಅಗತ್ಯವಿರಲ್ಲ: ರಾಹುಲ್ ಗಾಂಧಿ

ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಜೊತೆಗಿನ ಮೈತ್ರಿ ಅವಕಾಶವನ್ನು ತಳ್ಳಿಹಾಕಿದರು.
ರಾಹುಲ್ ಗಾಂಧಿ ಸುದ್ದಿಗೋಷ್ಠಿ
ರಾಹುಲ್ ಗಾಂಧಿ ಸುದ್ದಿಗೋಷ್ಠಿ

ತುರುವೇಕೆರೆ: ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಜೊತೆಗಿನ ಮೈತ್ರಿ ಅವಕಾಶವನ್ನು ತಳ್ಳಿಹಾಕಿದರು. ಅಂತಹ ಪರಿಸ್ಥಿತಿ ಉದ್ಬವಿಸುವುದಿಲ್ಲ. ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದರು.

ಕಳೆದ ಕೆಲವು ದಿನಗಳಿಂದ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ವೇಳೆಯಲ್ಲಿ ರೈತರು, ಕಾರ್ಮಿಕರು, ಉದ್ಯಮಿಗಳ ಜೊತೆಗೆ ಸಂವಾದ ನಡೆಸಿದ್ದು, ಎಲ್ಲರೂ ಭ್ರಷ್ಟಾಚಾರ ಮತ್ತು ಎಲ್ಲಕಡೆ ಬಿಜೆಪಿ ಸರ್ಕಾರದ ಶೇ.40 ಕಮೀಷನ್ ಬಗ್ಗೆ ದೂರಿದ್ದಾರೆ. ಜನರು ನಿರುದ್ಯೋಗದೊಂದಿಗೆ ಹೋರಾಟದ ಬದುಕು ನಡೆಸುತ್ತಿದ್ದಾರೆ ಎಂದು ಅವರು ತಿಳಿಸಿದರು.

ಕಾಂಗ್ರೆಸ್ ಪಕ್ಷ ಅತ್ಯಂತ ಹಳೆಯ ಪಕ್ಷವಾಗಿದ್ದು, 2023 ವಿಧಾನಸಭಾ ಚುನಾವಣೆಯ ಫಲಿತಾಂಶ ಆಧಾರದ ಮೇಲೆ ಮುಖ್ಯಮಂತ್ರಿ ಅಭ್ಯರ್ಥಿ ಪ್ರಕ್ರಿಯೆ ನಡೆಸಲಿದೆ. ನಮ್ಮಲ್ಲಿ ಸಮರ್ಥವಾದ ತಂಡವಿದ್ದು, ಮುಖಂಡರು ಬುದ್ದಿವಂತರಿದ್ದಾರೆ. ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದ ನಂತರ ಪಕ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು ಎಂದು ರಾಹುಲ್ ಗಾಂಧಿ ವಿವರಿಸಿದರು.

ಪಕ್ಷದೊಳಗಿನ ಕಿತ್ತಾಟ ಕುರಿತ ಪ್ರಶ್ನೆಗೆ ಮಾಧ್ಯಮವನ್ನು ದೂಷಿಸಿದ ರಾಹುಲ್ ಗಾಂಧಿ, ನಮ್ಮ ಪಕ್ಷವು ವಿಭಿನ್ನ ದೃಷ್ಟಿಕೋನ ಹೊಂದಿರುವ ನಾಯಕರೊಂದಿಗೆ ಸಂಭಾಷಣೆ ಮತ್ತು ಚರ್ಚೆಯಲ್ಲಿ ನಂಬಿಕೆ ಹೊಂದಿದೆ. ಚುನಾವಣೆಯಲ್ಲಿ ಗೆಲ್ಲಲು ಒಟ್ಟಾಗಿ ಕೆಲಸ ಮಾಡಬೇಕು ಎಂದರು. ಭಾರತವು ರಾಜ್ಯಗಳ ಒಕ್ಕೂಟವಾಗಿದೆ, ಅಂದರೆ ನಮ್ಮ ಎಲ್ಲಾ ಭಾಷೆಗಳು, ರಾಜ್ಯಗಳು ಮತ್ತು ಸಂಪ್ರದಾಯಗಳಿಗೆ ಸಮಾನವಾದ ಸ್ಥಾನವಿದೆ ಎಂದು ಸಂವಿಧಾನವು ಹೇಳುವಂತೆ ಬಹುತ್ವವು ದೇಶದ ಸ್ವರೂಪವಾಗಿದೆ ಎಂದು ಅವರು ತಿಳಿಸಿದರು..

ಸಂಜೆ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ರಾಹುಲ್, ದ್ವೇಷ ಹರಡುವ ಮೂಲಕ ದೇಶವನ್ನು ವಿಭಜಿಸುತ್ತಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಬೇಕು ಎಂದು ಗುಂಪಿನಲ್ಲಿದ್ದ ಒಂದು ವರ್ಗ ಒತ್ತಾಯಿಸಿದರು, ಆದರೆ ರಾಹುಲ್ ಈಗಾಗಲೇ ಮಾತನಾಡಿರುವಾಗ ಸಾಧ್ಯವಿಲ್ಲ ಎಂದು ಅವರಿಗೆ ಮನವರಿಕೆ ಮಾಡಿಕೊಟ್ಟರು, ಆದರೆ ಇನ್ನೊಂದು ಸಂದರ್ಭದಲ್ಲಿ ಊರಿಗೆ ಬರುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com