ಜಮೀರ್ ಅಹಮದ್ ಖಾನ್ ಮತ್ತು ಎಚ್.ಸಿ ಮಹಾದೇವಪ್ಪ
ಜಮೀರ್ ಅಹಮದ್ ಖಾನ್ ಮತ್ತು ಎಚ್.ಸಿ ಮಹಾದೇವಪ್ಪ

ಹೈಕಮಾಂಡ್ ಇಂಪ್ರೆಸ್ ಮಾಡುವಲ್ಲಿ ಮಹಾದೇವಪ್ಪ, ಜಮೀರ್ ವಿಫಲ: ವಿಧಾನಸಭೆ ಟಿಕೆಟ್ ಗಾಗಿ 'ಯಾತ್ರೆ'ಯಲ್ಲಿ ಆಕಾಂಕ್ಷಿಗಳ ದಂಡು!

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಕೈಗೊಂಡಿದ್ದು, ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ.

ತುರುವೆಕೆರೆ: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಕೈಗೊಂಡಿದ್ದು, ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ.

ಗುಬ್ಬಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಭಿನ್ನಮತೀಯ ಶಾಸಕ ಎಸ್‌ಆರ್ ಶ್ರೀನಿವಾಸ್ ಶನಿವಾರ ಯಾತ್ರೆಗೆ ಸೇರ್ಪಡೆಯಾದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸೂಚಿಸಿರುವಂತೆ ಡಿಸೆಂಬರ್ ನಂತರ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

2023ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ತಮ್ಮ ತಮ್ಮ ಕ್ಷೇತ್ರಗಳಿಂದ ಜನರನ್ನು ಒಟ್ಟುಗೂಡಿಸಿ ಯಾತ್ರೆಯ ಯಶಸ್ಸಿಗೆ ಸಹಕರಿಸುತ್ತಿದ್ದಾರೆ. ಇದರ ಫಲವಾಗಿ ತುರುವೇಕೆರೆಯಂತಹ ಸಣ್ಣ ಪಟ್ಟಣದಲ್ಲಿ 50 ಸಾವಿರಕ್ಕೂ ಅಧಿಕ ಮಂದಿ ಯಾತ್ರೆಗೆ ಆಗಮಿಸಿದ್ದರು.

ಬೆಂಗಳೂರು, ಹಾಸನ ಮತ್ತಿತರ ದೂರದ ಸ್ಥಳಗಳಿಂದ ಟಿಕೆಟ್‌ ಆಕಾಂಕ್ಷಿಗಳು ತಮ್ಮ ಮತದಾರರನ್ನು ಬಸ್‌ಗಳಲ್ಲಿ ಕರೆದೊಯ್ದಿದ್ದರು. ಯಾತ್ರೆಗೆ ಉತ್ತಮ ಪ್ರತಿಕ್ರಿಯೆ ಬರಲು ಇದು ಕೂಡ ಒಂದು ಕಾರಣ ಎಂದು ಹಿರಿಯ ನಾಯಕರೊಬ್ಬರು ಅಭಿಪ್ರಾಯ ಪಟ್ಟಿದ್ದಾರೆ.

ಭಾರತ್ ಜೋಡೋ ಯಾತ್ರೆಯನ್ನು ಎಐಸಿಸಿ ಸೂಕ್ಷ್ಮವಾಗಿ ಗಮನಿಸುತ್ತಿದೆ. ಪಕ್ಷದ ಹೈಕಮಾಂಡ್‌ಗೆ ಮನವೊಲಿಸಲು ರಾಜ್ಯ ಕಾಂಗ್ರೆಸ್ ನಾಯಕರು ತಮ್ಮ ಕೈಲಾದಷ್ಟು ಕಸರತ್ತು ನಡೆಸುತ್ತಿದ್ದಾರೆ. ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಚಿವ ಕೆಜೆ ಜಾರ್ಜ್‌ ಭಾರಿ ಸಂಖ್ಯೆಯಲ್ಲಿ ಜನರನ್ನು ಕರೆ ತಂದಿದ್ದರು.

ಭಾರತ್ ಜೋಡೋ ಯಾತ್ರೆಯಲ್ಲಿ ಹೆಚ್ಚಿನ ಜನರನ್ನು ಸೇರಿಸುವಲ್ಲಿ ವಿಫಲವಾಗಿರುವ ಮಾಡಿ ಸಚಿವರಾದ ಡಾ.ಎಚ್ ಸಿ ಮಹಾದೇವಪ್ಪ ಮತ್ತು ಜಮೀರ್ ಅಹ್ಮದ್ ಖಾನ್  ಅವರ ಮೇಲೆ ಪಕ್ಷದ ಪ್ರಧಾನ ಕಾರ್ಯದರ್ಶಿ ಎಚ್.ಸಿ ವೇಣುಗೋಪಾಲ್ ನಿಗಾ ಇರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಹಿಂದೆ ಜೆಡಿಎಸ್ ಜೊತೆ ಗುರುತಿಸಿಕೊಂಡಿದ್ದ ಕುಂದೂರು ಮುರುಳಿ ಸೇರಿದಂತೆ ಹಲವು ದಲಿತ ಸಂಘಟನೆಗಳ ಮುಖಂಡರು ಯಾತ್ರೆಯಲ್ಲಿ ಸ್ವಯಂ ಪ್ರೇರಿತರಾಗಿ ಭಾಗವಹಿಸಿದ್ದರು. ತುರುವೆಕೆರೆ ಸುತ್ತಮುತ್ತಲಿನ ಸ್ಥಳೀಯ ನಾಯಕರು  ಪಕ್ಷಾತೀತವಾಗಿ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.

Related Stories

No stories found.

Advertisement

X
Kannada Prabha
www.kannadaprabha.com