ಕಾಂಗ್ರೆಸ್ ಪಕ್ಷಕ್ಕಿಂದು ಐತಿಹಾಸಿಕ ದಿನ: ಡಿ.ಕೆ.ಶಿವಕುಮಾರ್

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಮತದಾನ ಪಾರದರ್ಶಕವಾಗಿ ನಡೆಯಲಿದ್ದು, ಪಕ್ಷಕ್ಕಿಂದು ಐತಿಹಾಸಿಕ ದಿನವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ. ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ.
ಡಿಕೆ.ಶಿವಕುಮಾರ್
ಡಿಕೆ.ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಮತದಾನ ಪಾರದರ್ಶಕವಾಗಿ ನಡೆಯಲಿದ್ದು, ಪಕ್ಷಕ್ಕಿಂದು ಐತಿಹಾಸಿಕ ದಿನವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ. ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ. 

ಎಐಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಇಂದು ಮತದಾನ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದ ಕೆಪಿಸಿಸಿ ಕಚೇರಿಯಲ್ಲಿ ಬೂತ್ ನಂಬರ್ 3 ರಲ್ಲಿ ಡಿಕೆ ಶಿವಕುಮಾರ್ ಅವರು ಮತದಾನ ಮಾಡಿದರು. 

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕಿಂದು ಐತಿಹಾಸಿಕ ದಿನವಾಗಿದೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಿಂದ ಭಾರತದಲ್ಲಿ ಪರಿಣಾಮ ಬೀರಲಿದೆ ಎಂದು ಹೇಳಿದರು.

ಅಧ್ಯಕ್ಷ ಸ್ಥಾನದ ಚುನಾವಣೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಡೆಯುತ್ತಿದೆ. ಚುನಾವಣೆ ಪಾರದರ್ಶಕ ರೀತಿಯಲ್ಲಿ ನಡೆಯುತ್ತಿದ್ದು, ಯಾರ ಮೇಲೆ ಒತ್ತಡ ಇಲ್ಲದಂತೆ ಮತದಾನ ನಡೆಯುತ್ತಿದೆ ಎಂದು ತಿಳಿಸಿದರು. 

ಚುನಾವಣೆಯಲ್ಲಿ ಹಿರಿಯ ನಾಯಕರು ಸ್ಪರ್ಧೆ ಮಾಡಿದ್ದು, ನಿಷ್ಠಾವಂತ ಕಾರ್ಯಕರ್ತನ ಕಡೆ ಗಾಳಿ ಬೀಸುತ್ತಿದೆ. ರಾಜ್ಯಕ್ಕೆ ಇದು ಒಳ್ಳೆಯದಾಗಲಿದೆ. ಖರ್ಗೆ ಆಯ್ಕೆ ಇಡೀ ಭಾರತದಲ್ಲಿ ಪರಿಣಾಮ ಆಗಲಿದೆ. ನಾನೂ ಕೂಡ ಗಾಂಧಿ ಕುಟುಂಬ ಇರಬೇಕು ಅಂತ ಒತ್ತಾಯ ಮಾಡಿದವನು. ಆದರೆ ಅವರೇ ಬೇರೆಯವರಿಗೆ ಅವಕಾಶ ಕೊಡೋಣ ಎಂದಿದ್ದಾರೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com