50 ವರ್ಷದ ರಾಜಕೀಯ ಜೀವನದಿಂದ ಶ್ರೀನಿವಾಸ್ ಪ್ರಸಾದ್ ನಿವೃತ್ತಿ: ನನ್ನ ಬಳಿಕ ನನ್ನ ಮಕ್ಕಳು ರಾಜಕಾರಣಕ್ಕೆ ಬರುವುದಿಲ್ಲ!
ಮೈಸೂರು: ಕರ್ನಾಟಕ ಕಂಡ ಮುತ್ಸದ್ಧಿ ರಾಜಕಾರಣಿ, ದಲಿತ ಮುಖಂಡರಾಗಿರುವ ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರು ತಮ್ಮ ದೀರ್ಘ ಕಾಲದ ರಾಜಕೀಯ ಜೀವನಕ್ಕೆ ಇದೀಗ ನಿವೃತ್ತಿ ಘೋಷಣೆ ಮಾಡಿದ್ದಾರೆ.
ಇನ್ನು ಒಂದೂ ವರೆ ವರ್ಷದಲ್ಲಿ ಸಂಸತ್ತಿನ ಅವಧಿ ಮುಕ್ತಾಯವಾಗಲಿದೆ. ಜೊತೆಗೆ ಆಗಲೇ ರಾಜಕೀಯ ಜೀವನಕ್ಕೂ 50 ವರ್ಷ ಪೂರ್ತಿಯಾಗಲಿದ್ದು ಇದೇ ಸಂದರ್ಭದಲ್ಲಿ ನಿವೃತ್ತನಾಗಲಿದ್ದು ಬಳಿಕ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದ್ದಾರೆ.
ನನ್ನ ರಾಜಕೀಯ ಜೀವನಕ್ಕೆ 50 ವರ್ಷ ಆಗುತ್ತಿದೆ. ಇನ್ನು ಒಂದೂವರೆ ವರ್ಷಕ್ಕೆ ಸಂಸದ ಅವಧಿ ಮುಕ್ತಾಯವಾಗುತ್ತದೆ. ಅಲ್ಲಿಗೆ ನಾನು ನಿವೃತ್ತಿ ಆಗುತ್ತೇನೆ ಎಂದು ಹಿರಿಯ ರಾಜಕಾರಣಿ, ದಲಿತ ನಾಯಕ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ತಮ್ಮ 50 ವರ್ಷದ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ.
ಕಲಾಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ವಿ.ಶ್ರೀನಿವಾಸ್ ಪ್ರಸಾದ್, ಇದುವರೆಗೆ 14 ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. 11 ಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದೇನೆ. 1977ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿದ್ದೆ. ಒಂದೂವರೆ ವರ್ಷ ಕಳೆದರೆ ನಾನು ರಾಜಕೀಯಕ್ಕೆ ಬಂದು 50 ವರ್ಷವಾಗಲಿದೆ. ಹಾಗಾಗಿ ರಾಜಕೀಯವಾಗಿ ನಿವೃತ್ತಿಯಾಗಲು ನಿರ್ಧರಿಸಿದ್ದೇನೆ ಎಂದು ಹೇಳಿದರು.
ಮೈಸೂರಿನ ಕಲಾಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ರಾಜಕೀಯ ಜೀವನಕ್ಕೆ 50 ವರ್ಷ ಆಗುತ್ತಿದೆ. ಇನ್ನು ಒಂದೂವರೆ ವರ್ಷಕ್ಕೆ ಸಂಸದ ಅವಧಿ ಮುಕ್ತಾಯವಾಗುತ್ತದೆ. ಈಗ ನನ್ನ ಆರೋಗ್ಯ ಸರಿಯಿಲ್ಲ. ಹಾಗಾಗಿ ಅಲ್ಲಿಗೆ ನಿವೃತ್ತಿ ಆಗುತ್ತೇನೆ ಎಂದು ಭಾವುಕರಾಗಿ ಹೇಳಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ