ಮೊರ್ಬಿ ಸೇತುವೆ ಕುಸಿತ; ಈಗ ದೇವರು ಯಾರಿಗೆ ನೀಡಿದ ಸಂದೇಶ ಮೋದಿ ಅವರೇ?: ಸಿದ್ದರಾಮಯ್ಯ

ಗುಜರಾತ್​ನ ಮೊರ್ಬಿಯಲ್ಲಿ ತೂಗು ಸೇತುವೆ ಕುಸಿದು 141 ಮಂದಿ ಮೃತಪಟ್ಟಿದ್ದು, ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಭೇಟಿ ನೀಡಲಿದ್ದಾರೆ. ಆದರೆ 2016ರಲ್ಲಿ ಕೋಲ್ಕತಾದಲ್ಲಿ ಸೇತುವೆ ಕುಸಿದಾಗ ಪ್ರಧಾನಿ ಮೋದಿ ಅವರಾಡಿದ್ದ...
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಬೆಂಗಳೂರು: ಗುಜರಾತ್​ನ ಮೊರ್ಬಿಯಲ್ಲಿ ತೂಗು ಸೇತುವೆ ಕುಸಿದು 141 ಮಂದಿ ಮೃತಪಟ್ಟಿದ್ದು, ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಭೇಟಿ ನೀಡಲಿದ್ದಾರೆ. ಆದರೆ 2016ರಲ್ಲಿ ಕೋಲ್ಕತಾದಲ್ಲಿ ಸೇತುವೆ ಕುಸಿದಾಗ ಪ್ರಧಾನಿ ಮೋದಿ ಅವರಾಡಿದ್ದ ಮಾತುಗಳನ್ನು ಉಲ್ಲೇಖಿಸಿ ಪ್ರತಿಪಕ್ಷ ನಾಯಕ ಸಿದ್ದಾರಮಯ್ಯ ಅವರು ಸೋಮವಾರ ತಿರುಗೇಟು ನೀಡಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣಾ ಸಂದರ್ಭದಲ್ಲಿ ಕೋಲ್ಕೊತ್ತಾದ ಮೇಲುಸೇತುವೆ ಕುಸಿದು 27 ಮಂದಿ ಮೃತಪಟ್ಟಿದ್ದರು. ಈ ಘಟನೆ ಉಲ್ಲೇಖಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ಇದು ಪಶ್ಚಿಮ ಬಂಗಾಳವನ್ನು ಟಿಎಂಸಿಯಿಂದ ಉಳಿಸಲು ದೇವರು ಕಳುಹಿಸಿದ್ದ ಸಂದೇಶ ಎಂದು ಹೇಳಿದ್ದರು.

ಪ್ರಧಾನಿ ಮೋದಿಯ ಹಳೆಯ ವಿಡಿಯೋ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಚುನಾವಣಾ ಕಾಲದಲ್ಲಿ ಕೋಲ್ಕೊತ್ತಾದ ಮೇಲುಸೇತುವೆ ಕುಸಿದದ್ದು ಬಂಗಾಳಕ್ಕೆ ದೇವರು ಕಳಿಸಿದ್ದ ಸಂದೇಶ ಎನ್ನುವುದಾದರೆ,

ಈಗ ಚುನಾವಣಾ ಕಾಲದಲ್ಲಿ ಗುಜರಾತ್ ತೂಗು ಸೇತುವೆ ಕುಸಿದಿರುವುದು ದೇವರು ಯಾರಿಗೆ ನೀಡಿರುವ ಸಂದೇಶ ಪ್ರಧಾನಿ ನರೇಂದ್ರ ಮೋದಿ ಅವರೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com