ಬಿಜೆಪಿ ಜನೋತ್ಸವ ನಾಳೆ ನಡೆಯುತ್ತದೆಯೋ, ಇಲ್ಲವೋ: ಮುಖ್ಯಮಂತ್ರಿ ಬೊಮ್ಮಾಯಿ ನಿರ್ಧಾರದ ಮೇಲೆ ಅವಲಂಬಿತ!

ಕಳೆದ ಬಾರಿ ಹಿಂದೂ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ಬಿಜೆಪಿಯ ಜನೋತ್ಸವ ಸಮಾವೇಶಕ್ಕೆ ಮತ್ತೆ ವಿಘ್ನ ಎದುರಾಗಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕಳೆದ ಬಾರಿ ಹಿಂದೂ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ಬಿಜೆಪಿಯ ಜನೋತ್ಸವ ಸಮಾವೇಶಕ್ಕೆ ಮತ್ತೆ ವಿಘ್ನ ಎದುರಾಗಿದೆ. ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿ ಒಂದು ವರ್ಷವಾದ ಹಾಗೂ ಬಿಜೆಪಿ ಸರ್ಕಾರಕ್ಕೆ ಮೂರು ವರ್ಷವಾದ ಹಿನ್ನೆಲೆಯಲ್ಲಿ ಮತ್ತು ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ನಾಳೆ ಬಿಜೆಪಿಯಿಂದ ಜನೋತ್ಸವ ಕಾರ್ಯಕ್ರಮ ಏರ್ಪಾಡಾಗಿತ್ತು.

ಆದರೆ ಕಳೆದ ತಡರಾತ್ರಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಉಮೇಶ್ ಕತ್ತಿಯವರ ಹಠಾತ್ ನಿಧನ ಬಿಜೆಪಿ ಸರ್ಕಾರಕ್ಕೆ ಮತ್ತೆ ಶೋಕ ತಂದಿದೆ. ಈ ಸಮಯದಲ್ಲಿ ಸರ್ಕಾರ, ಬಿಜೆಪಿ ಜನೋತ್ಸವ ಮಾಡುತ್ತದೆಯೇ ಎಂಬ ಸಂಶಯದ ಮಾತುಗಳು ಕೇಳಿಬರುತ್ತಿವೆ. ಸರ್ಕಾರದ ಸಚಿವರು, ಮುಖ್ಯಮಂತ್ರಿಗಳ ಸಂಪುಟದ ಸಹೋದ್ಯೋಗಿ ನಿಧನರಾಗಿರುವುದು ಸೂತಕದ ಛಾಯೆ ಮಧ್ಯೆ ಸಮಾವೇಶ ಮಾಡುತ್ತಾರೆಯೇ ಎಂಬ ಮಾತುಗಳು ಕೇಳಿಬರುತ್ತಿದೆ.

ಸಿಎಂ ನಿರ್ಧಾರಕ್ಕೆ ಬಿಟ್ಟದ್ದು: ಸಮಾವೇಶ ನಡೆಸಬೇಕೋ ಬೇಡವೋ ಎಂಬ ಬಗ್ಗೆ ಕೆಲವೇ ಹೊತ್ತಿನಲ್ಲಿ ಸಿಎಂ ಅಂತಿಮ ತೀರ್ಮಾನ ಮಾಡಲಿದ್ದಾರೆ. ಸಿಎಂ ನಿರ್ಧಾರದ ಮೇಲೆ ನಾಳೆಯ ಬಿಜೆಪಿ ಜನೋತ್ಸವ ಅವಲಂಬಿತವಾಗಿದ್ದು, ಜನೋತ್ಸವ ಮುಂದೂಡಿಕೆ ಬಗ್ಗೆ ಬಿಜೆಪಿ ನಾಯಕರು ಮತ್ತು ಹಲವು ಸಚಿವರು ಒಲವು ಹೊಂದಿದ್ದಾರೆ. ಈಗಾಗಲೇ ಬಿಜೆಪಿ ದೊಡ್ಡಬಳ್ಳಾಪುರದಲ್ಲಿ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ ಎಂದು ಹೇಳಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com