ಉತ್ತರ ಕರ್ನಾಟಕದ ಹಲವು ನಾಯಕರು ಆಮ್‌ ಆದ್ಮಿ ಪಕ್ಷಕ್ಕೆ ಸೇರ್ಪಡೆ!

ಉತ್ತರ ಕರ್ನಾಟಕ ಭಾಗದ ಹಲವು ರಾಜಕೀಯ ನಾಯಕರು, ಸಾಮಾಜಿಕ ಹೋರಾಟಗಾರರು ಹಾಗೂ ಗಣ್ಯ ವ್ಯಕ್ತಿಗಳು ಗುರುವಾರ ಆಮ್‌ ಆದ್ಮಿ ಪಾರ್ಟಿಗೆ ರಾಜ್ಯ ಚುನಾವಣಾ ಉಸ್ತುವಾರಿ ದಿಲೀಪ್ ಪಾಂಡೆ.
ಎಎಪಿಕ್ಕೆ ಸೇರ್ಪಡೆ
ಎಎಪಿಕ್ಕೆ ಸೇರ್ಪಡೆ
Updated on

ಬೆಂಗಳೂರು: ಉತ್ತರ ಕರ್ನಾಟಕ ಭಾಗದ ಹಲವು ರಾಜಕೀಯ ನಾಯಕರು, ಸಾಮಾಜಿಕ ಹೋರಾಟಗಾರರು ಹಾಗೂ ಗಣ್ಯ ವ್ಯಕ್ತಿಗಳು ಗುರುವಾರ ಆಮ್‌ ಆದ್ಮಿ ಪಾರ್ಟಿಗೆ ರಾಜ್ಯ ಚುನಾವಣಾ ಉಸ್ತುವಾರಿ ದಿಲೀಪ್ ಪಾಂಡೆ, ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಹಾಗೂ ಪಕ್ಷದ ಉಪಾಧ್ಯಕ್ಷ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಹಾಗೂ ಖ್ಯಾತ ಕಲಾವಿದ ಪಕ್ಷದ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರುರವರ ಸಮ್ಮುಖದಲ್ಲಿ ಸೇರ್ಪಡೆಯಾದರು.

ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, 'ರಾಜ್ಯದ ಜನತೆಯು ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳಿಗೆ ಅಧಿಕಾರ ಕೊಟ್ಟು, ಉತ್ತರ ಕರ್ನಾಟಕದ ಅಭಿವೃದ್ಧಿಯು ಅವುಗಳಿಂದ ಸಾಧ್ಯವಿಲ್ಲ ಎಂಬುದನ್ನು ಮನಗಂಡಿದ್ದಾರೆ. ಅಲ್ಲಿನ ನೀರಾವರಿ ಯೋಜನೆಗಳು ಹಲವು ದಶಕಗಳಿಂದ ನನೆಗುದಿಗೆ ಬಿದ್ದಿವೆ. ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಬಿಡುಗಡೆಯಾದ ಸಾವಿರಾರು ಕೋಟಿ ರೂಪಾಯಿ ಹಣವು ಭ್ರಷ್ಟ ರಾಜಕಾರಣಿಗಳ ಜೇಬು ಸೇರಿವೆ. ಪಾರದರ್ಶಕ ಆಡಳಿತ ನೀಡುವ ಆಮ್‌ ಆದ್ಮಿ ಪಾರ್ಟಿಯಿಂದ ಮಾತ್ರ ಉತ್ತರ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂಬುದನ್ನು ಅರಿತಿರುವ ಅಲ್ಲಿನ ನಾಯಕರು ಹಾಗೂ ಜನಸಾಮಾನ್ಯರು ದೊಡ್ಡ ಪ್ರಮಾಣದಲ್ಲಿ ಎಎಪಿ ಸೇರುತ್ತಿದ್ದಾರೆ' ಎಂದು ಹೇಳಿದರು.

ಕುರುಬ ಸಮುದಾಯದ ನಾಯಕರು ಹಾಗೂ ಕಾಂಗ್ರೆಸ್‌ ಮುಖಂಡರಾದ ಶಿವರಾಯಪ್ಪ ದೊಡ್ಡರಿಯಪ್ಪ ಜೋಗಿನ್‌, ರೈತ ನಾಯಕ ಹಾಗೂ ಬಿಜೆಪಿಯ ಬಾಗಕೋಟೆ ತಾಲೂಕು ಪ್ರಧಾನ ಕಾರ್ಯದರ್ಶಿ ಮುತ್ತಪ್ಪ ಕೋಮರ್‌, ನಾಗರತ್ನ ಶಿಕ್ಷಣ ಮತ್ತು ಕಲ್ಯಾಣ ಸೇವೆಗಳ ಸಂಸ್ಥೆಯ ಮುಖ್ಯಸ್ಥ ಅನಿಲ್‌ ಕುಮಾರ್‌ ಬೇಗಾರ್‌, ಯುವ ಜನತಾದಳದ ಮಾಜಿ ಧಾರವಾಡ ಜಿಲ್ಲಾಧ್ಯಕ್ಷ ಹಾಗೂ ಸಾಮಾಜಿಕ ಹೋರಾಟಗಾರ ಸಂಜೀವ್‌ ಕುಮಾರ್‌ ಕುಲಕರ್ಣಿ, 'ಕಲ್ಬುರ್ಗಿ ಕಲರವ' ಮತ್ತು 'ಬೆನಕ ಟೈಮ್ಸ್' ಮಾಸಿಕ ಪತ್ರಿಕೆ ಪ್ರಧಾನ ಸಂಪಾದಕ ಸಾ.ಸಿ. ಬೆನಕನಳ್ಳಿ, ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಕಾರ್ಮಿಕರ ಒಕ್ಕೂಟದ ರಾಜ್ಯಾಧ್ಯಕ್ಷರಾದ ಡಾ. ಗೀತಾ ಮಹಾಂತೇಶ್ ಯಾದಗಿ, ಅಧ್ಯಾಪಕರ ಸಂಘದ ಒಕ್ಕೂಟಗಳ ಸಂಘದ ಅಧ್ಯಕ್ಷರಾದ ಶ್ರೀನಿವಾಸ್‌ ಗೌಡ, ಮುಂಡರಿಗಿ ಪರಸಭಾ ಸದಸ್ಯರು ಹಾಗೂ ಮುಂಡರಿಗಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಬಸವರಾಜ ರಾಮನಹಳ್ಳಿ. 

ವಕೀಲರು ಹಾಗೂ ಕುಷ್ಟಗಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಹುಲಗಪ್ಪ ಚುರಿ, ಪತ್ರಕರ್ತರು ಹಾಗೂ ಕರ್ನಾಟಕ ರಾಜ್ಯ ಹಾಲುಮತ ಮಹಾಸಭಾ ಸಂಘದ ಯುವ ಘಟಕದ ಅಧ್ಯಕ್ಷರಾದ ಸೋಮಣ್ಣ ಮಲ್ಲೂರು, ಸೊರಬ ತಾಲೂಕು ಸಮಾಜ ಸೇವಕರಾದ ಕೆ.ವೈ.ಚಂದ್ರಶೇಖರ, ಬಾಗಲಕೋಟೆ ಜಿಲ್ಲಾ ರೈತ ಮುಖಂಡ ಕೊಳ್ಳಿ, ಬಿಜಾಪುರ ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ಲೋನಿ ಸೇರಿದಂದತೆ ಅನೇಕರು ಆಮ್‌ ಆದ್ಮಿ ಪಾರ್ಟಿಗೆ ಸೇರ್ಪಡೆಯಾದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com